ರಾಷ್ಟ್ರಾಭಿವೃದ್ಧಿಗೆ ಶಿಕ್ಷಣ-ಸಂಸ್ಕಾರ ಅಗತ್ಯ

Team Udayavani, Jun 6, 2019, 1:30 PM IST

ಬೀಳಗಿ: ಸರಕಾರಿ ನೂತನ ಪ್ರೌಢಶಾಲೆಯನ್ನು ಶಾಸಕ ಮುರುಗೇಶ ನಿರಾಣಿ ಉದ್ಘಾಟಿಸಿದರು.

ಬೀಳಗಿ: ಗುರಿಯಿಲ್ಲದ ಜೀವನ, ರೆಕ್ಕೆಯಿಲ್ಲದ ಹಕ್ಕಿಯಂತೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ಇಟ್ಟುಕೊಂಡು ಗುರುವಿನ ಮಾರ್ಗದರ್ಶನದಲ್ಲಿ ಕಠಿಣ ಪರಿಶ್ರಮ ಮಾಡಿದಾಗ ಮಾತ್ರ ಸಾಧನೆ ಮಾಡಲು ಸಾಧ್ಯ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಬಿಸನಾಳದಲ್ಲಿ ನೂತನ ಸರಕಾರಿ ಪ್ರೌಢಶಾಲೆ ಉದ್ಘಾಟಿಸಿ ಮಾತನಾಡಿದ ಅವರು, ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಉತ್ತಮ ಶಿಕ್ಷಣ ಹಾಗೂ ಸಂಸ್ಕಾರ ಅಗತ್ಯ. ಸರಕಾರಿ ಶಾಲೆಯಲ್ಲಿ ಕಲಿತವರೇ ಹೆಚ್ಚು

ಉನ್ನತ ಹುದ್ದೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯ, ಪಾಲಕರು ಮತ್ತು ಶಿಕ್ಷಕರನ್ನು ಅವಲಂಬಿಸಿದೆ. ಶಿಕ್ಷಕರು ಗುಣಮಟ್ಟದ ಶಿಕ್ಷಣ ಬೋಧನೆಗೆ ಮುಂದಾಗಬೇಕು. ಸ್ಪರ್ಧಾತ್ಮಕ ಇಂದಿನ

ಜಗತ್ತಿನಲ್ಲಿ ವಿದ್ಯಾರ್ಥಿಗಳು ಪ್ರತಿ ಕ್ಷಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಸಮಯ ಅತ್ಯಂತ ಅಮೂಲ್ಯವಾದದ್ದು. ಸಮಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಕಳೆದುಹೋದ ಸಮಯ ಮತ್ತೆ ಸಿಗಲಾರದು. ಶಿಕ್ಷಣ ಕ್ಷೇತ್ರದಲ್ಲಿ ಬೀಳಗಿ ತಾಲೂಕು ಸತತ 7 ವರ್ಷ ಜಿಲ್ಲೆಯಲ್ಲಿಯೇ ಅಗ್ರಸ್ಥಾನ ಪಡೆದಿತ್ತು. ಸದ್ಯ ಶೈಕ್ಷಣಿಕ ಕ್ಷೇತ್ರದಲ್ಲಿ ಹಿನ್ನೆಡೆಯಾಗಿದೆ. ಬರುವ ವರ್ಷ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆಯುವಂತಾಗಬೇಕು. ಈಗಿಂದಲೇ ಶಿಕ್ಷಕರು ಶ್ರಮವಹಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು. ಗಲಗಲಿ-ಬೀಳಗಿ ಮಧ್ಯೆ ಪದವಿ ಕಾಲೇಜು ಸ್ಥಾಪಿಸುವುದಾಗಿ ಭರವಸೆ ನೀಡಿದರು.

ಇದಕ್ಕೂ ಮುನ್ನ, ಅಕ್ಷರ ಬಂಡಿಯ ಮೂಲಕ ಶಾಸಕ ಮುರುಗೇಶ ನಿರಾಣಿಯವರನ್ನು ಮೆರವಣಿಗೆ ಮೂಲಕ ಶಾಲೆಗೆ ಕರೆತರಲಾಯಿತು. ಜಿಪಂ ಸದಸ್ಯ ಮಗಿಯಪ್ಪ ದೇವನಾಳ, ತಾಪಂ ಸದಸ್ಯೆ ರೇಖಾ ಕಟ್ಟೆಪ್ಪನವರ, ಬಿಇಒ ಹನುಮಂತಗೌಡ ಮಿರ್ಜಿ, ಗೋಪಾಲ ನಾಯಿಕ, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಪ್ಪ ಮನಗೂಳಿ, ಕ್ಷೇತ್ರ ಸಮನ್ವಯಾಧಿಕಾರಿ ಆರ್‌.ಸಿ. ವಡವಾಣಿ, ಮುಖ್ಯೋಪಾಧ್ಯಾಯ ಜಿ.ಆರ್‌. ಹವೇಲಿ, ವಿ.ಎ. ಪಾಟೀಲ, ಗೋವಿಂದ ಲಮಾಣಿ, ಭಗವಂತ ಕೂಗಟಿ, ರಾಮಣ್ಣ ಹನುಮರ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬಾಗಲಕೋಟೆ: ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಸ್ತುವಾರಿ ಸಚಿವನಾಗಿ ಈಗಾಗಲೇ 3-4 ಬಾರಿ ಹೋಗಿದ್ದೇನೆ. ಸಮಿತಿಗಳ ಸಭೆಯೂ...

  • ಬನಹಟ್ಟಿ : ಇಂದಿನ ದಿನಮಾನಗಳಲ್ಲಿ ಅರಣ್ಯ ಬೆಳೆಸುವುದು ಅನಿವಾರ್ಯವಾಗಿದೆ. ಅದನ್ನು ಬೆಳೆಸುವುದರ ಜತೆಗೆ ಉಳಿಸಿಕೊಂಡು ಹೋಗುವುದು ಎಲ್ಲರ ಕರ್ತವ್ಯವಾಗಿದೆ ಎಂದು...

  • ಮುಧೋಳ: ಬಿಜೆಪಿ ಸರ್ಕಾರದ ಮೇಲೆ ರಾಜ್ಯದ ಜನರ ನಿರೀಕ್ಷೆ ಹೆಚ್ಚಿದ್ದು, ಸಾರ್ವಜನಿಕರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸಲು ಬದ್ಧರಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ...

  • ಬಾಗಲಕೋಟೆ: ರಾಜ್ಯಾದ್ಯಂತ ಮದ್ಯ ಮಾರಾಟ ನಿಷೇಧಿಸುವಂತೆ ಒತ್ತಾಯಿಸಿ ಜಿಲ್ಲೆಯ ಕೂಡಲಸಂಗಮದಲ್ಲಿ ಜ. 27ರಿಂದ ವಿವಿಧ ಹಂತದ ಹೋರಾಟ ನಡೆಸಲಾಗುವುದು ಎಂದು ಮದ್ಯ ನಿಷೇಧ...

  • ಜಮಖಂಡಿ: ನೂತನ ಕೇಂದ್ರ ಬಸ್‌ ನಿಲ್ದಾಣದಲ್ಲಿ ಅವೈಜ್ಞಾನಿಕ ಕಟ್ಟಡ ನಿರ್ಮಿಸುವುದನ್ನು ವಿರೋಧಿಸಿ ಸಾರ್ವಜನಿಕರು ಶುಕ್ರವಾರ ಪ್ರತಿಭಟನೆ ನಡೆಸಿದರು. ದಿ| ಸಿದ್ದು...

ಹೊಸ ಸೇರ್ಪಡೆ