ಕಾಲೇಜ್‌ ಆರಂಭಗೊಂಡು ಆರು ತಿಂಗಳಾದ್ರೂ ಸಿಗದ ಸಂಯೋಜನೆ

Team Udayavani, Oct 20, 2019, 11:43 AM IST

ಗುಳೇದಗುಡ್ಡ: ಪಟ್ಟಣದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಆರಂಭವಾಗಿ ಆರು ತಿಂಗಳು ಕಳೆದರೂ ರಾಣಿ ಚನ್ನಮ್ಮ ವಿಶ್ವ ವಿದ್ಯಾಲಯ ಇದುವರೆಗೂ ಸಂಯೋಜನೆ ನೀಡಿರಲಿಲ್ಲ. ಅಷ್ಟೇ ಅಲ್ಲ ಪರೀಕ್ಷಾ ಅರ್ಜಿ ತುಂಬುವ ನೋಂದಣಿ ಸಂಖ್ಯೆಯನ್ನೂ ನೀಡಿರಲಿಲ್ಲ.

ಹೀಗಾಗಿ ಪರೀಕ್ಷಾ ಅರ್ಜಿ ತುಂಬಲು ಅ.21 ಕೊನೆಯ ದಿನವಾಗಿದ್ದರಿಂದ 67ವಿದ್ಯಾರ್ಥಿಗಳು ಪರದಾಡುವಂತಾಗಿತ್ತು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಡೆಗೂ ಶನಿವಾರ ಪರೀಕ್ಷಾ ನೋಂದಣಿ ಸಂಖ್ಯೆ ನೀಡಿದ್ದರಿಂದ ವಿದ್ಯಾರ್ಥಿಗಳಲ್ಲಿದ್ದ ಆತಂಕ ದೂರವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಒತ್ತಡದಿಂದ ಪಟ್ಟಣಕ್ಕೆ ಕಾಲೇಜ್‌ ಮಂಜೂರಾಗಿದೆ.

ಶನಿವಾರ ಬೆಳಗ್ಗೆ ಸ್ವತಃ ಸಿದ್ದರಾಮಯ್ಯನವರೇ ಅಧಿ ಕಾರಿಗಳಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತನಾಡಿದ್ದರಿಂದ ಬೆಳಗ್ಗೆ 11 ಗಂಟೆ ನಂತರ ನೋಂದಣಿ ಸಂಖ್ಯೆ ನೀಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಅರ್ಜಿ ತುಂಬುವ ಆತಂಕ ದೂರಾಗಿದೆ. ಆದರೆ ಕಾಲೇಜಿಗೆ ಇನ್ನೂ ಸಂಯೋಜನೆ ಪತ್ರ ಸಿಕ್ಕಿಲ್ಲ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ