ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ: ಕೋಟಿ ಸಹಿ ಸಂಗ್ರಹ

ದೊಡ್ಡ ಸಂಖ್ಯೆ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ

Team Udayavani, May 2, 2022, 5:46 PM IST

ರಾಷ್ಟ್ರೀಯ ಶಿಕ್ಷಣ ನೀತಿಗೆ ವಿರೋಧ: ಕೋಟಿ ಸಹಿ ಸಂಗ್ರಹ

ಬಾಗಲಕೋಟೆ: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಎಐಡಿಎಸ್‌ಒ ಸಂಘಟನೆಯಿಂದ ಜಿಲ್ಲೆಯಾದ್ಯಂತ ಸಹಿ ಸಂಗ್ರಹ ಅಭಿಯಾನದ ಹೋರಾಟ ಆರಂಭಿಸಲಾಗಿದೆ.

ನಗರದಲ್ಲೂ ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಸಹಿ ಸಂಗ್ರಹಕ್ಕೆ ಚಾಲನೆ ನೀಡಿ, ಎಐಡಿಎಸ್‌ಒನ ಜಿಲ್ಲಾ ಸಹ ಸಂಚಾಲಕಿ ಸುರೇಖಾ ಮಾತನಾಡಿ, ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಅನುಷ್ಠಾನದ ವಿರುದ್ಧ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಆದರೆ, ಹಲವು ಶಿಕ್ಷಣ ತಜ್ಞರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ವಿರೋಧದ ನಡುವೆಯೂ ಈ ನೀತಿಯನ್ನು ಇದೀಗ ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಾರ್ವಜನಿಕ ಶಿಕ್ಷಣ ನಾಶಗೊಳಿಸಿ, ಶಿಕ್ಷಣ ಕ್ಷೇತ್ರದ ಸಂಪೂರ್ಣ ವ್ಯಾಪಾರೀಕರಣಗೊಳಿಸುವ ಉದ್ದೇಶದಿಂದಲೇ ಎನ್‌ಇಪಿ ಅನ್ನು ಅಪ್ರಜಾತಾಂತ್ರಿಕವಾಗಿ ಹೇರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಆರಂಭದಿಂದಲೂ ಈ ಕರಾಳ ನೀತಿಯನ್ನು ನಮ್ಮ ಸಂಘಟನೆ ವಿರೋಧಿ ಸುತ್ತಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ ದೇಶಾದ್ಯಂತ ಒಂದು ಕೋಟಿ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲಾಗಿದೆ.

ಎನ್‌ಇಪಿಯನ್ನು ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಕರ್ನಾಟಕ ಸರ್ಕಾರ ನಾಲ್ಕು ವರ್ಷದ ಪದವಿ ಕೋರ್ಸ್‌ ಅನ್ನು ಪ್ರಸ್ತುತ ಶೈಕ್ಷಣಿಕ ವರ್ಷ ಜಾರಿ ಮಾಡಿದೆ. ಆದರೆ, ಪರೀಕ್ಷೆಗಳಿಗೆ ಇನ್ನು ಒಂದು ತಿಂಗಳು ಮಾತ್ರ ಉಳಿದಿದ್ದು, ಸರ್ಕಾರ ಮತ್ತು ವಿವಿಗಳು ನೂತನ ಕೋರ್ಸ್‌ಗೆ ಪೂರಕವಾದ ಪಠ್ಯಕ್ರಮ, ಎಲ್ಲ ವಿಷಯಗಳಿಗೂ ಸಂಬಂಧಪಟ್ಟಂತೆ ಪಠ್ಯಪಸ್ತಕಗಳು ತಯಾರಿ ಮಾಡಿರಲಿಲ್ಲ. ಬೋಧಕರ ಕೊರತೆ, ಪಾಠ ಮಾಡಲು ಸಾಮಗ್ರಿಗಳ ಕೊರತೆ, ತರಗತಿಗಳ ಕೊರತೆಯಿಂದ ಯಾವುದೇ ಸಮಗ್ರ ರೀತಿಯ ಅಧ್ಯಾಯಗಳು ನಡೆದಿರಲಿಲ್ಲ. ಈ ಹಠಾತ್‌ ಹೇರಿಕೆಯು ರಾಜ್ಯದ ಪದವಿ ಶಿಕ್ಷಣದಲ್ಲಿ ಅತ್ಯಂತ ಗೊಂದಲ ಹಾಗೂ ಸಮಸ್ಯೆ ಸೃಷ್ಟಿಸಿದೆ. ದೊಡ್ಡ ಸಂಖ್ಯೆ ವಿದ್ಯಾರ್ಥಿಗಳ ಭವಿಷ್ಯ ಈಗ ಅಂಧಕಾರದಲ್ಲಿ ಇದೆ ಎಂದು ಹೇಳಿದರು.

ಎನ್‌ಇಪಿಯು ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತ, ಅದಕ್ಕೆ ಪೂರಕವಾದ ಪ್ರಸ್ತಾವನೆ ನೀಡಿದೆ. ಉದಾಹರಣೆಗೆ ಶಾಲೆಗಳ ವಿಲೀನ’ದ ಹೆಸರಿನಲ್ಲಿ  ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್‌ಇಪಿ ನೀತಿಯಲ್ಲಿದೆ. ಹಲವು ಪ್ರಸ್ತಾವನೆಗಳ ಮೂಲಕ ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ. ಮಹಾನ್‌ ವ್ಯಕ್ತಿಗಳ, ಹೋರಾಟಗಾರರ ತ್ಯಾಗ ಬಲಿದಾನಗಳಿಂದ ದೊರಕಿರುವ ಶಿಕ್ಷಣವು ಕೆಲವೇ ಜನರ ಸ್ವತ್ತಾಗಲು ನಾವು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

ಇಂತಹ ಕರಾಳ ನೀತಿಗಳನ್ನು ವಿರೋಧಿಸಿ ಸಾರ್ವಜನಿಕ ಶಿಕ್ಷಣ ಉಳಿಸಲು ಪ್ರಬಲ ಆಂದೋಲನ ಬೆಳೆಸಬೇಕು. ಪ್ರತಿಯೊಬ್ಬರೂ ಈ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು. ಎಐಡಿಎಸ್‌ಒ ಸಂಘಟನೆಯ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಕೇಂದ್ರ ಸರ್ಕಾರ ಹೇರಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ, ಶಿಕ್ಷಣದ ಖಾಸಗೀಕರಣಕ್ಕೆ ಹಾಗೂ ವ್ಯಾಪಾರೀಕರಣಕ್ಕೆ ಹೆಚ್ಚು ಒತ್ತು ಕೊಡುತ್ತಿದೆ. ಅದಕ್ಕೆ ಪೂರಕವಾದ ಪ್ರಸ್ತಾವನೆ ನೀಡಿದೆ. ಉದಾಹರಣೆಗೆ ಶಾಲೆಗಳ ವಿಲೀನದ ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಸ್ತಾವನೆ ಎನ್‌ಇಪಿ ನೀತಿಯಲ್ಲಿದೆ. ಹಲವು ಪ್ರಸ್ತಾವನೆಗಳ ಮೂಲಕ ಈ ನೀತಿಯು ಶಿಕ್ಷಣದ ಖಾಸಗೀಕರಣ, ಕೋಮುವಾದೀಕರಣ, ವಾಣಿಜ್ಯೀಕರಣ ಹಾಗೂ ಕೇಂದ್ರೀಕರಣದ ನೀಲಿನಕ್ಷೆಯಾಗಿದೆ.
ಸುರೇಖಾ, ಜಿಲ್ಲಾ ಸಹ ಸಂಚಾಲಕಿ, ಎಐಡಿಎಸ್‌ಒ

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.