ಕಬ್ಬಿನ ಬಿಲ್‌ ಪಾವತಿ ವಿಳಂಬಕ್ಕೆ ಆಕ್ರೋಶ

Team Udayavani, Jun 1, 2020, 9:03 AM IST

ಕಬ್ಬಿನ ಬಿಲ್‌ ಪಾವತಿ ವಿಳಂಬಕ್ಕೆ ಆಕ್ರೋಶ

ಸಾಂದರ್ಭಿಕ ಚಿತ್ರ

ಮಹಾಲಿಂಗಪುರ: ಕಾರ್ಖಾನೆಗೆ ಕಬ್ಬು ಪೂರೈಸಿದ 15 ದಿನಗಳೊಳಗಾಗಿ ಕಬ್ಬಿನ ಬಿಲ್‌ ಕೊಡುತ್ತೇನೆ ಎಂದು ಒಪ್ಪಿಕೊಂಡ ಗೋದಾವರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸುಮಾರು ನಾಲ್ಕು ತಿಂಗಳ ನಂತರ ಬಿಲ್‌ ಕೊಡುತ್ತಿದ್ದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಂಗನಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜಿಎಲ್‌ಬಿಸಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ತಿಂಗಳ ಹಿಂದೆ ಬಾಗಲಕೋಟೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಫ್‌ ಆರ್‌ಪಿ ಮತ್ತು ಶುಗರ್‌ ಕಂಟ್ರೋಲ್‌ ಕಾಯ್ದೆ ಪ್ರಕಾರ ರೈತರು ಕಬ್ಬು ಪೂರೈಸಿದ 15 ದಿನದೊಳಗಾಗಿ ಕಬ್ಬಿನ ಬಿಲ್‌ ಕೊಡುತ್ತೇನೆ ಮತ್ತು ಎಫ್‌ಆರ್‌ಪಿ ಪ್ರಕಾರ 2700 ರೂ. ಬದಲಾಗಿ 2500 ರೂ. ಕೊಡುತ್ತೇವೆ. ಏಕೆಂದರೆ 2700 ರೂ ಕೊಡುವುದಾದರೆ ತಡವಾಗುತ್ತದೆ. 2500 ರೂ. ಆದರೆ 15 ದಿನಗಳೊಳಗಾಗಿ ಕೊಡುತ್ತೇವೆ. ತಡವಾದರೆ ಅದಕ್ಕೆ ಬಡ್ಡಿ ಸೇರಿಸಿ ಕೊಡುತ್ತೇವೆ ಎಂದು ಆಡಳಿತ ಮಂಡಳಿಯವರು ಒಪ್ಪಿಕೊಂಡಿದ್ದರು.

ಆದರೆ ಸುಮಾರು ನಾಲ್ಕು ತಿಂಗಳ ನಂತರ ಈಗ ಕಬ್ಬಿನ ಬಿಲ್‌ ಪಾವತಿಸುತ್ತಿದ್ದಾರೆ. ಆದರೆ ಅದಕ್ಕೆ ಬಡ್ಡಿ ಕೂಡ ನೀಡುತ್ತಿಲ್ಲ. ಬಿಲ್‌ ಪಾವತಿಗೆ ತಡ ಮಾಡುತ್ತಿರುವುದಕ್ಕಾಗಿ ನಾವು ಕಾರ್ಖಾನೆಯವರಿಗೆ ನೋಟೀಸ್‌ ನೀಡುತ್ತ ಬಂದಿದ್ದೇವೆ. ಒಟ್ಟು 4 ಬಾರಿ ನೋಟೀಸ್‌ ನೀಡಿದ್ದೇವೆ. ಜಿಲ್ಲೆಯಲ್ಲಿ ಇಐಡಿ ಪ್ಯಾರಿ ಹೊರತು ಪಡಿಸಿ ಯಾವ ಕಾರ್ಖಾನೆಯವರೂ 15 ದಿನದೊಳಗಾಗಿ ಬಿಲ್‌ ನೀಡಿಲ್ಲ ಎಂದರು.

ಕಾರ್ಖಾನೆ ಆಡಳಿತ ಮಂಡಳಿ ರೈತರ ಹಣೆ ಬರಹದೊಂದಿಗೆ ಚೆಲ್ಲಾಟವಾಡುತ್ತಿದ್ದು ಅದನ್ನು ಸಹಿಸಲು ಸಾಧ್ಯವಿಲ್ಲ. ಕಳೆದ ಹಂಗಾಮಿನ ಬಾಕಿ 111 ರೂ. ಮತ್ತು ಈ ಹಂಗಾಮಿಗೆ ನೀಡುತ್ತಿರುವ 2500 ರೂ. ಗಳಿಗೆ ಬಡ್ಡಿ ಹಾಕಬೇಕು. ಬಾಕಿ ಉಳಿದ 200 ರೂ. ಕೂಡಲೇ ಪಾವತಿಸಬೇಕೆಂದು ಒತ್ತಾಯಿಸಿದರು. ಬೆಳೆಸಾಲ ಮನ್ನಾಗೆ ಆಗ್ರಹ: ಕೊರೊನಾ ರೈತರ ಬದುಕಿಗೆ ಹೊಡೆತ ನೀಡಿದ್ದು ಈಗ ಬಿತ್ತಲು ಬೀಜ, ಗೊಬ್ಬರ ಮತ್ತು ಮಕ್ಕಳ ಶಾಲೆ ಫೀಜ್ ಗಳಿಗಾಗಿ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಬ್ಯಾಂಕ್‌ ಸಾಲ ತುಂಬುವ ಪರಿಸ್ಥಿತಿಯಲ್ಲಿ ಇಲ್ಲ. ಕಾರಣ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿಯ ರೈತರ ಕಬ್ಬಿನ ಬೆಳೆ ಸಾಲ ಮನ್ನಾ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಆರ್‌.ಬಿ. ಪಾಟೀಲ, ಬಿ.ಜಿ. ಹೊಸೂರ, ಈರಣ್ಣ ಕನಕರಡ್ಡಿ, ಎಲ್‌.ಟಿ. ಹುಚರಡ್ಡಿ, ಎಂ.ಬಿ. ನಾಡಗೌಡ, ರಾಮಕೃಷ್ಣ ಬುದ್ನಿ. ಕೆ.ಟಿ ಸಾರವಾಡ, ಕಲ್ಲಪ್ಪ ಕಂಕಣವಾಡಿ, ಶೇಖರ ಮುತ್ತಪ್ಪಗೋಳ, ಸದಾಶಿವ ಕಂಬಳಿ ಇದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.