ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಿದ್ಧತೆ: ನಿರಾಣಿ

Team Udayavani, Jun 30, 2020, 2:46 PM IST

ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಸಿದ್ಧತೆ: ನಿರಾಣಿ

ಬೀಳಗಿ: ಇಡೀ ರಾಜ್ಯದಲ್ಲಿ ಸರ್ಕಾರಿ ಸ್ವಾಮ್ಯದಲ್ಲಿರುವ ಹಾಗೂ ರಾಜ್ಯದ ಮೊದಲ ಸಕ್ಕರೆ ಕಾರ್ಖಾನೆ ಹೆಗ್ಗಳಿಕೆ ಹೊಂದಿರುವ ಮಂಡ್ಯ ಜಿಲ್ಲೆಯ ಪಾಂಡವಪುರ ಸಕ್ಕರೆ ಕಾರ್ಖಾನೆ ಪುನಶ್ಚೇತನಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಕಷ್ಟದಲ್ಲಿರುವ ಅಲ್ಲಿನ ರೈತರ ಕಣ್ಣೀರೊರೆಸುವ ಪ್ರಾಮಾಣಿಕ ಪ್ರಯತ್ನ ಜನ್ಮಭೂಮಿ ಬೀಳಗಿಯಿಂದ ಆಗುತ್ತಿರುವುದು ನನಗೆ ಹೆಮ್ಮೆಯ ವಿಷಯ ಎಂದು ಶಾಸಕ ಮುರುಗೇಶ ನಿರಾಣಿ ಹೇಳಿದರು.

ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ-ಮೈಸೂರಲ್ಲಿ ಇರುವ 9 ಸಕ್ಕರೆ ಕಾರ್ಖಾನೆಗಳಲ್ಲಿ 6 ಕಾರ್ಖಾನೆಗಳು ತಮಿಳುನಾಡಿನವರ ಒಡೆತನದಲ್ಲಿದ್ದರೆ, ಇನ್ನುಳಿದ ಮೂರು ಕಾರ್ಖಾನೆಗಳು ಬಂದ್‌ ಆಗಿವೆ. ಕಾರಣ, ಸಕ್ಕರೆ ನಾಡು ಖ್ಯಾತಿಯ ಮಂಡ್ಯದಲ್ಲಿ ಪುನಃ ಕಬ್ಬು ಅರೆಯುವ ಮೂಲಕ ಸಕ್ಕರೆ ನಾಡಿನ ಕೀರ್ತಿ ಹೆಚ್ಚಿಸುವ ಆತ್ಮವಿಶ್ವಾಸ ನನಗಿದೆ ಎಂದರು.

ಉತ್ತರ ಕರ್ನಾಟಕ-ದಕ್ಷಿಣ ಕರ್ನಾಟಕ ಎಂಬ ಭೇದ ಮಾಡದೇ ಸಹೋದರತೆ ಭಾವದಿಂದ ಅಖಂಡ ಕರ್ನಾಟಕದ ಅಳಿಲು ಸೇವೆ ಮಾಡುವ ಸದಿಚ್ಛೆ ನನ್ನದಾಗಿದೆ. ಪಾಂಡವಪುರ ಸಕ್ಕರೆ ಕಾರ್ಖಾನೆ ಆರಂಭಿಸುವ ಕುರಿತು ಅಲ್ಲಿನ ಎಲ್ಲ ವರ್ಗದ ಜನಾಭಿಪ್ರಾಯ ಹಾಗೂ ಮಠಾಧೀಶರ ಆಶೀರ್ವಾದ ಪಡೆದುಕೊಂಡಿರುವೆ. ಕಾರ್ಖಾನೆಯ ಕಬ್ಬು ನುರಿಸುವ ಮಹತ್ಕಾರ್ಯಕ್ಕೆ ಅಲ್ಲಿನವರ ಸಂಪೂರ್ಣ ಸಹಕಾರ ಮತ್ತು ಸಲಹೆ ಸಿಕ್ಕಿರುವುದು ಸಂತಸ ತಂದಿದೆ ಎಂದರು.

ಪಕ್ಷಾತೀತ ಮತ್ತು ಜಾತ್ಯತೀತವಾಗಿ ಕರ್ತವ್ಯದ ಕಡೆಗೆ ಗಮನಹರಿಸುವ ಮೂಲಕ ಎಲ್ಲರ ವಿಶ್ವಾಸ ಪಡೆದುಕೊಳ್ಳುವೆ. ಈಗಾಗಲೇ ಕಾರ್ಖಾನೆ ರಿಪೇರಿ ಕೆಲಸ ಆರಂಭವಾಗಿದೆ. ಸದ್ಯ 3500 ಟನ್‌ ಕಬ್ಬು ನುರಿಸುವ ಸಾಮರ್ಥ್ಯ ಹೊಂದಿರುವ ಕಾರ್ಖಾನೆಯ ಅದೇ ಮಷಿನ್‌ಗಳಿಗೆ ಹೊಸ ಸ್ಪರ್ಶ ನೀಡುವ ಮೂಲಕ 4500ರಿಂದ 5000 ಟನ್‌ ಕಬ್ಬು ನುರಿಸುವ ಸಾಮರ್ಥ್ಯಕ್ಕೆ ಕಾರ್ಖಾನೆ ಸಜ್ಜುಗೊಳಿಸುವುದಾಗಿ ತಿಳಿಸಿದರು.

1933ರಲ್ಲಿ ಕರುನಾಡಿನ ಭವಿಷ್ಯಕ್ಕಾಗಿ ಬುನಾದಿ ಹಾಕಿದ ಸಕ್ಕರೆ ಕಾರ್ಖಾನೆ ಪುನರುಜ್ಜೀವನಗೊಳಿಸುವ ಮೂಲಕ ನಾಡಿನ ರೈತರ ಸೇವೆಯ ಸದಾವಕಾಶ ಸದ್ಬಳಕೆ ಮಾಡಿಕೊಳ್ಳುವೆ. ಕೃಷ್ಣೆಯಿಂದ ಕಾವೇರಿಯವರೆಗೆ ಬೀಳಗಿ ನೆಲದ ಹೆಸರು ಬೆಳೆಗಬೇಕು ಹಾಗೂ ಜನಮಾನಸದಲ್ಲಿ ಸದಾಕಾಲ ಉಳಿಯುವಂತಾಗಬೇಕೆನ್ನುವುದೇ ನನ್ನ ಸದಾಶಯವಾಗಿದೆ ಎಂದರು.

ಈ ವೇಳೆ ಬಿಜೆಪಿ ತಾಲೂಕು ಅಧ್ಯಕ್ಷ ಈರಣ್ಣ ಗಿಡ್ಡಪ್ಪಗೋಳ, ಸಂಗಪ್ಪ ಕಟಗೇರಿ, ಮಲ್ಲಪ್ಪ ಶಂಭೋಜಿ, ಪಪಂ ಸದಸ್ಯ ವಿಠuಲ ಬಾಗೇವಾಡಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.