ಆಶಾ ಕಾರ್ಯಕರ್ತೆಯರಿಗೆ 12 ಸಾವಿರ ವೇತನ ಕೊಡಿ

• ಸಿಎಂ ಭರವಸೆ ಈಡೇರಿಸಲಿ • 9 ತಿಂಗಳ ಪ್ರೋತ್ಸಾಹಧನ ನೀಡಲು ಒತ್ತಾಯಿಸಿ ಪ್ರತಿಭಟನೆ

Team Udayavani, Jun 28, 2019, 10:08 AM IST

bk-tdy-5..

ಬಾಗಲಕೋಟೆ: ಜಿಲ್ಲಾಡಳಿತ ಭವನದ ಜಿಪಂ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.

ಬಾಗಲಕೋಟೆ: ಗ್ರಾಮೀಣ ಭಾಗದಲ್ಲಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ವೇತನ ನಿಗದಿ ಮಾಡುವಂತೆ ಒತ್ತಾಯಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ಗುರುವಾರ ಜಿಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಆಶಾ ಕಾರ್ಯಕರ್ತೆಯರು, ನವನಗರದ ಎಲ್ಐಸಿ ಕಚೇರಿಯಿಂದ ಬೃಹತ್‌ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿ, ಜಿಪಂ. ಸಿಇಒ ಗಂಗೂಬಾಯಿ ಮಾನಕರ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಸಂಚಾಲಕ ಮಲ್ಲಿಕಾರ್ಜುನ ಎಚ್.ಟಿ. ಮಾತನಾಡಿ, ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಹಳ್ಳಿ ಮತ್ತು ನಗರ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯ ಯೋಜನೆ ಅನುಷ್ಠಾನ, ಗರ್ಭಿಣಿ ಮಹಿಳೆಯರ ಸುರಕ್ಷಿತ ಹೆರಿಗೆ, ಸ್ವಸ್ಥ ಶಿಶುವಿನ ಜನನ, ಆರೈಕೆಗೆ ಶ್ರಮಿಸುತ್ತಿದ್ದಾರೆ. ಮುಖ್ಯವಾಗಿ ಆರೋಗ್ಯ ಇಲಾಖೆಯಡಿ ಕ್ಷಯ, ಕುಷ್ಠರೋಗ, ಮಲೆರಿಯಾ, ಡೆಂಗ್ಯೂ, ಚಿಕೂನ್‌ಗುನ್ಯಾ ಮುಂತಾದ ಸಾಂಕ್ರಾಮಿಕ ರೋಗ ತಡೆಗಟ್ಟಲು ಶ್ರಮಿಸುತ್ತಿದ್ದಾರೆ ಎಂದರು.

ಇಂತಹ ಆಶಾ ಕಾರ್ಯಕರ್ತೆಯರ ಸೇವೆಯನ್ನು ಗೌರವಿಸಿ, ಆಂಧ್ರಪ್ರದೇಶದ ಸರ್ಕಾರ 10 ಸಾವಿರ ರೂ. ಗೌರವಧನ ನಿಗದಿ ಮಾಡಿದೆ. ರಾಜ್ಯದಲ್ಲಿಯೂ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಚುನಾವಣೆಗೆ ಮುನ್ನ ನೀಡಿದ ಭರವಸೆಯಂತೆ 12 ಸಾವಿರ ವೇತನ ನಿಗದಿ ಮಾಡಬೇಕು ಎಂದು ಆಗ್ರಹಿಸಿದರು.

ಆಶಾ ಕಾರ್ಯಕರ್ತೆಯರು ಇಂದಿಗೂ, ಪ್ರತಿ ತಿಂಗಳ ವೇತನವಿಲ್ಲದೇ ಪರದಾಡುತ್ತಿದ್ದಾರೆ. ಕೇಂದ್ರದ ಪ್ರೋತ್ಸಾಹಧನ ನೀಡುವ ಮಾದರಿ ಆಶಾ ಸಾಫ್ಟ ವೇತನ ಮಾದರಿಯಿಂದ ಕಳೆದ ಮೂರು ವರ್ಷದಿಂದ ಸಾವಿರಾರು ರೂಪಾಯಿ ಆರ್ಥಿಕ ನಷ್ಟವಾಗಿದೆ. ಸರ್ಕಾರದ ನೂತನ ವೇತನ ಪಾವತಿ ವಿಧಾನ ಖಜಾನೆ-2ರಿಂದ ರಾಜ್ಯದ ಮಾಸಿಕ ರೂ. 3500 ಗೌರವಧನ ಹಲವಾರು ತಿಂಗಳಿಂದ ವಿಳಂಬವಾಗುತ್ತಿದೆ. ಅಲ್ಲದೇ ಕೇಂದ್ರದ ಪ್ರೋತ್ಸಾಹಧನ ಎಂಸಿಟಿಎಸ್‌ನಲ್ಲಿ ದಾಖಲಾಗದೇ ಬಾಕಿ ಉಳಿದಿದೆ. ಕಳೆದ 3-4 ವರ್ಷದಿಂದ ಹೊಸ ರೀತಿಯ ವೇತನ ವಿಧಾನ ಪದೇ ಪದೇ ಬದಲಾವಣೆ ಮಾಡುತ್ತಿದ್ದು, ಬಡ ಆಶಾಗಳ ಮೇಲೆ ಪ್ರಯೋಗ ಮಾಡಲಾಗುತ್ತಿದೆ. ಯಾವುದೇ ಹೊಸ ವಿಧಾನ ಜಾರಿಗೊಳಿಸಬೇಕಿದ್ದರೂ ಪೂರ್ವ ತಯಾರಿಯಿಂದ ಮಾಡಬೇಕು. ಆದರೆ, ವೇತನ ಪಾವತಿ ಹೊಸ ವಿಧಾನವನ್ನು ಆಶಾಗಳ ಮೇಲೆ ಪ್ರಾಯೋಗಿಕ ಜಾರಿ ಮಾಡುತ್ತಿರುವುದರಿಂದ ತೀವ್ರ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ವೇತನ, ಆಶಾ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸಿ, ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗೆ, ಮರಣ ಹೊಂದಿದ್ದಲ್ಲಿ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಆಶಾಗಳ ಒಟ್ಟು 14 ಬೇಡಿಕೆ ತಕ್ಷಣ ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಎಚ್ಚರಿಕೆ ನೀಡಿದರು.

ಪ್ರಮುಖರಾದ ಅಂಜನಾ ಕುಂಬಾರ, ಸೈನಾಜಿ ಜಂಬಗಿ, ವಿದ್ಯಾ ಕಡಕೋಳ, ಶೀಲಾ ಮೆಳ್ಳಿಗೇರಿ, ಶಾಂತಾ, ಮಮತಾಜ, ಸುರೇಖಾ ಕಾಳೆ, ಶಶಿಕಲಾ, ಗಿರಿಜಾ ಗೌಡರ ಸೇರಿದಂತೆ ಜಿಲ್ಲೆಯ ಎಲ್ಲ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.