ಕೋವಿಡ್ : 619 ಜನರ ವರದಿ ನೆಗೆಟಿವ್‌-1033 ಬಾಕಿ

Team Udayavani, May 30, 2020, 9:58 AM IST

ಕೋವಿಡ್ : 619 ಜನರ ವರದಿ ನೆಗೆಟಿವ್‌-1033 ಬಾಕಿ

ಬಾಗಲಕೋಟೆ: ಜಿಲ್ಲೆಯಿಂದ ಕೋವಿಡ್ ಪರೀಕ್ಷೆಗೆ ಕಳುಹಿಸಲಾಗಿದ್ದ ಒಟ್ಟು 1225 ಸ್ಯಾಂಪಲ್‌ಗ‌ಳ ಪೈಕಿ 619 ಸ್ಯಾಂಪಲ್‌ಗ‌ಳ ವರದಿ ನೆಗೆಟಿವ್‌ ಬಂದಿದ್ದು, ಶುಕ್ರವಾರ ಕಳುಹಿಸಿದ 333 ಸ್ಯಾಂಪಲ್‌ ಸಹಿತ ಒಟ್ಟು 1033 ಜನರ ವರದಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಿಂದ ಮತ್ತೆ ಹೊಸದಾಗಿ 333 ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ರವಾನಿಸಲಾಗಿದೆ. ಮೇ 23ರಂದು ಕಳುಹಿಸಲಾದ ಸ್ಯಾಂಪಲ್‌ಗಳಲ್ಲಿ 16, 25 ರಂದು ಕಳುಹಿಸಲಾದ ಸ್ಯಾಂಪಲ್‌ ಗಳ ಪೈಕಿ 45 ಸ್ಯಾಂಪಲ್‌ಗ‌ಳ ವರದಿ ಬಾಕಿ ಇವೆ. ಅಲ್ಲದೆ ಮೇ 24 ರಂದು ಕಳುಹಿಸಲಾದ ಒಟ್ಟು 613 ಸ್ಯಾಂಪಲ್‌ ಗಳ ವರದಿ ಇನ್ನು ಬಂದಿಲ್ಲ. ಒಟ್ಟು 1033 ಸ್ಯಾಂಪಲ್‌ಗ‌ಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲಾ ಕೋವಿಡ್‌ ಲ್ಯಾಬ್‌ನಲ್ಲಿ ಈ ವರೆಗೆ 169 ಸ್ಯಾಂಪಲ್‌ ಪರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ರತ್ಯೇಕವಾಗಿ 1899 ಜನರ ಮೇಲೆ ನಿಗಾ ವಹಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 7,629 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 6,484 ನೆಗೆಟಿವ್‌ ಪ್ರಕರಣ, 77 ಪಾಸಿಟಿವ್‌ ಬಂದಿದ್ದು, ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ. 63 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇನ್ನು 13 ಜನ ಕೋವಿಡ್‌ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಇನ್ನು 5 ಕಂಟೇನ್ಮೆಂಟ್‌ ಝೋನ್‌ಗಳಿವೆ. ಇಲ್ಲಿಯವರೆಗೆ ಒಟ್ಟು 13ಸ್ಯಾಂಪಲ್‌ಗ‌ಳು ರಿಜೆಕ್ಟ್ ಆಗಿವೆ. 14 ದಿನಗಳವರೆಗೆ ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 1151 ಜನರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 9 ಚೆಕ್‌ಪೋಸ್ಟ್‌ಗಳ ಪೈಕಿ ಸದ್ಯ 3 ಚೆಕ್‌ ಪೋಸ್ಟ್‌ ಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿಯವರೆಗೆ ಚೆಕ್‌ಪೋಸ್ಟ್‌ಗಳ ಮೂಲಕ 54908 ವಾಹನಗಳ ತಪಾಸಣೆ ಹಾಗೂ 2,12,113 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.