22 ತಿಂಗಳ ಬಳಿಕ ಬಾಗಲಕೋಟೆ ತೋಟಗಾರಿಕೆ ವಿವಿಗೆ ಕಾಯಂ ಕುಲಪತಿ

Team Udayavani, May 29, 2020, 10:28 AM IST

22 ತಿಂಗಳ ಬಳಿಕ ಬಾಗಲಕೋಟೆ ತೋಟಗಾರಿಕೆ ವಿವಿಗೆ ಕಾಯಂ ಕುಲಪತಿ

ಬಾಗಲಕೋಟೆ: ರಾಜ್ಯದ 23 ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ಇಲ್ಲಿನ ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯಕ್ಕೆ ನಾಲ್ಕು ವರ್ಷಗಳ ಅವಧಿಗೆ ಕುಲಪತಿಯಾಗಿ ಡಾ| ಕೆ.ಎಂ. ಇಂದಿರೇಶ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.

ಕಳೆದ 22ತಿಂಗಳಿಂದ ಹಂಗಾಮಿ ಕುಲಪತಿಯಾಗಿದ್ದ ಡಾ| ಕೆ.ಎಂ. ಇಂದಿರೇಶ ಅವರು ಒಳಗೊಂಡ ಮೂವರ ಹೆಸರನ್ನು ತಜ್ಞರ ಸರ್ಚ್‌ ಕಮೀಟಿ ಸರ್ಕಾರಕ್ಕೆ ವರದಿ ಕಳುಹಿಸಿತ್ತು. ರಾಜ್ಯಪಾಲರು, ಡಾ|ಇಂದಿರೇಶ ಅವರನ್ನು ನಾಲ್ಕು ವರ್ಷಗಳ ಅವಧಿಗೆ ಕುಲಪತಿಯನ್ನಾಗಿ ನೇಮಕ ಮಾಡಿ, ಆದೇಶಿಸಿದ್ದಾರೆ.

ಇಂದಿರೇಶರ ಪರಿಚಯ: ತೋಟಗಾರಿಕೆಯಲ್ಲಿ ಬಿ.ಎಸ್‌ಸಿ. ಪದವಿ ಹಾಗೂ ತರಕಾರಿ ವಿಜ್ಞಾನದಲ್ಲಿ ಎಂ.ಎಸ್‌ಸಿ ಹಾಗೂ ಪಿಎಚ್‌ಡಿ ಪದವಿ ಪಡೆದಿರುವ, ಡಾ| ಇಂದಿರೇಶ, 1982ರಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ವಿಸ್ತರಣಾ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿ, 1986ರಲ್ಲಿ ಅರಸಿಕೇರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ, ಬ್ರಹ್ಮಾವರದಲ್ಲಿ ಏಳು ವರ್ಷ ಸೇವೆ, ಅರಸಿಕೇರಿ ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿ, ನಂತರ ಬೆಂಗಳೂರು ವಿಶ್ವವಿದ್ಯಾಲಯದಿಂದ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.

2013ರಿಂದ 2017ರ ವರೆಗೆ ಮೈಸೂರು ತೋಟಗಾರಿಕೆ ಕಾಲೇಜಿನಲ್ಲಿ ಡೀನ್‌ ಆಗಿದ್ದ ಅವರು, 2017ರಿಂದ ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿ, ಶಿಕ್ಷಣ ನಿರ್ದೇಶಕರಾಗಿ ಹಾಗೂ ಸದ್ಯ 22 ತಿಂಗಳ ಪ್ರಭಾರಿ ಕುಲಪತಿಗಳಾಗಿ ಕಾರ್ಯ  ನಿರ್ವಹಿಸುತ್ತಿದ್ದರು.

ಬಿವಿವಿ ಸಂಘ ಸಂತಸ: ಡಾ| ಕಬ್ಟಾಳಿ ಮಹಾಲಿಂಗಪ್ಪ ಇಂದ್ರೇಶ ಅವರನ್ನು ಬಾಗಲಕೋಟೆಯ ತೋಟಗಾರಿಕೆ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ನಾಲ್ಕು ವರ್ಷದ ಅವಧಿಗೆ ನೇಮಕಗೊಂಡಿದ್ದಕ್ಕೆ ಬಿವಿವಿ ಸಂಘ ಸಂತಸ ವ್ಯಕ್ತಪಡಿಸಿದೆ. ಹಣ್ಣು ಬೆಳೆಗಾರರ ನಾಡೆನಿಸಿದ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ ಜಿಲ್ಲೆಗಳ ತೋಟಗಾರಿಕೆ ವಿಶ್ವವಿದ್ಯಾಲಯವನ್ನು ರೈತರ ಮುಖವಾಗಿ ತೋಟಗಾರಿಕೆಯ ಜನರ ಅಭಿವೃದ್ಧಿಗಾಗಿ ಶ್ರಮಿಸಲಿ, ಇಲ್ಲಿನ ಅಧ್ಯಯನ ಅಧ್ಯಾಪನ, ಸಂಶೋಧನೆಗಳು ಗ್ರಾಮೀಣರತ್ತ ತೋಟಗಾರಿಕೆ ಬೆಳೆಗಾರರತ್ತ ಮುಖ ಮಾಡಲಿ ಎಂದು ಬಿವಿವಿ ಸಂಘದ ಕಾರ್ಯಾಧ್ಯಕ್ಷ ಶಾಸಕ ಡಾ|ವೀರಣ್ಣ ಚರಂತಿಮಠ, ಸಂಘದ ಗೌರವ ಕಾರ್ಯದರ್ಶಿ ಮಹೇಶ ಎನ್‌. ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಸಿದ್ದಣ್ಣ ಶೆಟ್ಟರ, ಕಾಲೇಜು ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ) ಆಶಯ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.