ಶಾಶ್ವತ ಕುಡಿವ ನೀರಿನ ಯೋಜನೆ ಸ್ಥಳ ಪರಿಶೀಲನೆ

•ಪಂಪ್‌ಹೌಸ್‌-ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣ •ಜಿಲ್ಲಾಧಿಕಾರಿ ರಾಮಚಂದ್ರನ್‌ ಭೇಟಿ

Team Udayavani, Jul 9, 2019, 8:07 AM IST

bk-tdy-1..

ಗುಳೇದಗುಡ್ಡ: ಶಾಶ್ವತ ಕುಡಿಯುವ ನೀರಿನ ಯೋಜನೆಗೆ ಪಂಪ್‌ಹೌಸ್‌ ನಿರ್ಮಾಣ ಹಾಗೂ ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಅವರು ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

ಗುಳೇದಗುಡ್ಡ: ಬಾದಾಮಿ-ಕೆರೂರ ಪಟ್ಟಣಗಳಿಗೆ ಆಲಮಟ್ಟಿಯಿಂದ ಶಾಶ್ವತ ಕುಡಿಯುವ ನೀರು ಪೂರೈಸುವ 228 ಕೋಟಿ ರೂ. ವೆಚ್ಚದ ಯೋಜನೆಗೆ ಪಂಪ್‌ಹೌಸ್‌ ನಿರ್ಮಾಣ ಹಾಗೂ ವಾಟರ್‌ ಟ್ರಿಟರ್‌ ಯುನಿಟ್ ನಿರ್ಮಾಣಕ್ಕಾಗಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೋಮವಾರ ಸ್ಥಳ ಪರಿಶೀಲನೆ ನಡೆಸಿದರು.

ಕೆರೂರ ಹಾಗೂ ಬದಾಮಿ ಪಟ್ಟಣ ಹಾಗೂ ಮಾರ್ಗ ಮಧ್ಯೆ ಬರುವ 18 ಹಳ್ಳಿಗಳಿಗೆ 24×7 ಯೋಜನೆಯ ಶಾಶ್ವತ ಕುಡಿಯುವ ನೀರು ಪೂರೈಸಲು ಪಂಪ್‌ಹೌಸ್‌ಗಾಗಿ ಕಮತಗಿ ರಸ್ತೆಗೆ, ವಾಟರ್‌ ಟ್ರೀಟರ್‌ ಯುನಿಟ್ ನಿರ್ಮಾಣಕ್ಕೆ ತೋಗುಣಶಿ ಹತ್ತಿರದ ಖಾಸಗಿ ಮಾಲೀಕತ್ವದ ಹಾಗೂ ಸರಕಾರಿ ಜಾಗೆಗಳನ್ನು ಪರಿಶೀಲನೆ ನಡೆಸಿ, ಇಲ್ಲಿ ವಿದ್ಯುತ್‌ ಮೇನ್‌ ಲೈನ್‌ ಹಾಯ್ದು ಹೋಗಿದೆ. ಈ ಜಾಗೆಯನ್ನು ಜಲಮಂಡಳಿ ಅಭಿಯಂತರರು ಪರಿಶೀಲನೆ ಮಾಡಿದ್ದಾರೋ ಇಲ್ಲವೋ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಜಮೀನಿನ ಮಾಲೀಕರೊಂದಿಗೆ ಚರ್ಚಿಸಿ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಮಾತನಾಡಿ, ನಾನು ಸರಕಾರದ ಪರವಾದ ಪ್ರತಿನಿಧಿಯಾಗಿದ್ದು, ಜನರಿಗೆ ಕುಡಿಯುವ ನೀರು ಒದಗಿಸುವ ಯೋಜನೆ ಇಲ್ಲಿ ಮಾಡಲಾಗುತ್ತಿದೆ. ತಾವು ಭೂಮಿ ನೀಡಿದರೆ ಕುಡಿಯುವ ನೀರಿನ ಯೋಜನೆಗೆ ಜಾಗ ಕೊಟ್ಟಂತಾಗುತ್ತದೆ. ಅಲ್ಲದೇ ನೀರಿನ ಯೋಜನೆಗೆ ಜಾಗೆ ಕೊಡುವುದರಿಂದ ಜನರಿಗೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

ತೋಗುಣಶಿಯಲ್ಲಿ ಪರಿಶೀಲನೆ: ತೋಗುಣಶಿ ಬಸ್‌ ನಿಲ್ದಾಣದ ಹತ್ತಿರದ ಸರಕಾರಿ ಜಾಗೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಕೆರೂರು-ಬಾದಾಮಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಯೋಜನೆ ಕಾಮಗಾರಿ ಆರಂಭಕ್ಕೆ ಭೂಮಿ ಅವಶ್ಯವಿದೆ. ಅದಕ್ಕೆ ಜಾಗ ನೋಡುತ್ತಿದ್ದೇವೆ. ಭೂಮಿ ಸಿಕ್ಕರೆ ಟೆಂಡರ್‌ ಪ್ರಕ್ರಿಯೆಯು ಆರಂಭವಾಗಿ, ಕಾಮಗಾರಿ ಆರಂಭವಾಗಲಿದೆ ಎಂದರು.

ರಾಜ್ಯದಲ್ಲಿ ಬರಗಾಲ ಆವರಿಸಿದ್ದು, ಈ ಕಾಮಗಾರಿ ಶೀಘ್ರದಲ್ಲಿ ಪೂರ್ಣಗೊಂಡರೆ ಜನರಿಗೆ ಕುಡಿಯುವ ನೀರು ಒದಗಿಸಲು ಸಾಧ್ಯವಾಗುತ್ತದೆ. ಅದಕ್ಕಾಗಿ ಭೂಮಿ ಪರಿಶೀಲನೆ ಮಾಡುತ್ತಿದ್ದೇವೆ. ನೇರ ಖರೀದಿ ಯೋಜನೆ ಮೂಲಕ ಸರಕಾರವು ಮಾಲೀಕರಿಂದ ಭೂಮಿ ಖರೀದಿ ಪ್ರಕ್ರಿಯೆ ಮಾಡುತ್ತದೆ. ತೋಗುಣಶಿ ಕ್ರಾಸ್‌ ಹತ್ತಿರ ಭೂಮಿ ಕೊಡಲು ಕೆಲವರು ಮುಂದೆ ಬಂದಿದ್ದು, ಅವರು ಸರಕಾರಿ ದರಕ್ಕೆ ಭೂಮಿ ನೀಡಿದರೆ ಸರಕಾರ ಭೂಮಿ ಖರೀದಿಸುತ್ತದೆ. ಭೂಮಿ ಖರೀದಿ ಪ್ರಕ್ರಿಯೆ ಬಗ್ಗೆ ತಹಶೀಲ್ದಾರ ಎಸ್‌.ಎಸ್‌. ಇಂಗಳೆ ಅವರಿಗೆ ವಹಿಸಲಾಗಿದೆ ಎಂದು ಹೇಳಿದರು.

ಉಪವಿಭಾಗಾಧಿಕಾರಿ ಎಚ್.ಜಯಾ, ತಹಶೀಲ್ದಾರ್‌ ಎಸ್‌.ಎಸ್‌.ಇಂಗಳೆ, ಉಪತಹಶೀಲ್ದಾರ್‌ ಎಂ.ಎಸ್‌.ಅಂಗಡಿ, ಮಂಡಳಿಯ ಅಭಿಯಂತರ ನಿಖೀಲ್ ಕಡ್ಲಿಮಟ್ಟಿ, ಮುಖಂಡರಾದ ಸಂಜಯ ಕಾರಕೂನ, ಎಸ್‌.ಎಂ.ಪಾಟೀಲ, ಶ್ರೀನಿವಾಸ ಇನಾನಿ ಸೇರಿದಂತೆ ಇತರರು ಇದ್ದರು.

ಅಕ್ರಮ ಮರಳು ಸಾಗಾಟ ತಡೆಗೆ ಸೂಚನೆ:

ತಾಲೂಕಿನ ವ್ಯಾಪ್ತಿಯ ಹಲವು ಕಡೆಗಳಲ್ಲಿ ಅಕ್ರಮ ಮರಳು ಸಾಗಾಟ ನಡೆದಿದ್ದು, ಅದರ ತಡೆಗೆ ಕ್ರಮ ಕೈಗೊಳ್ಳಬೇಕು. ತಾಲೂಕಿನ ಹಲವು ಕಡೆಗಳಿಂದ ಅಕ್ರಮ ಮರಳು ಸಾಗಾಟ ನಡೆದಿದೆ ಎಂದು ದೂರು ಕೇಳಿ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಅಕ್ರಮ ಮರಳು ಸಾಗಟವಾಗದಂತೆ ಕ್ರಮ ಕೈಗೊಳ್ಳುವಂತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ರಾಮಚಂದ್ರನ್‌ ಸೂಚಿಸಿದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.