ಜಿಲ್ಲೆಯ 25 ಕೆರೆಗಳ ಅಭಿವೃದ್ಧಿಗೆ ಯೋಜನೆ

Team Udayavani, May 15, 2019, 11:13 AM IST

bagalkote-tdy-2..

ಬೀಳಗಿ: ತಾಲೂಕಿನ ಸುನಗ ಗ್ರಾಮದ ದೈತೇಶ್ವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಗಣ್ಯರು ಭೂಮಿಪೂಜೆ ನೆರವೇರಿಸಿದರು.

ಬೀಳಗಿ: ಹೂಳು ತೆಗೆದು ಕೆರೆಗಳನ್ನು ರಕ್ಷಣೆ ಮಾಡುವುದರಿಂದ ಅಂತರ್ಜಲ ಸಂರಕ್ಷಣೆಗೆ ಸಹಕಾರಿ ಆಗಲಿದೆ. ಕೆರೆಕಟ್ಟೆಗಳ ಸಂರಕ್ಷಣೆ ಅಗತ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಪ್ಪಳ ಪ್ರಾದೇಶಿಕ ನಿರ್ದೇಶಕ ಪಿ.ಕೆ. ಪುರುಷೋತ್ತಮ ಹೇಳಿದರು.

ಸುನಗ ಗ್ರಾಮದ ದೈತೇಶ್ವರ ಕೆರೆ ಬಳಕೆದಾರರ ಸಂಘ, ಗ್ರಾಪಂ ಸಹಕಾರದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿಯ ನಮ್ಮೂರು ನಮ್ಮ ಕೆರೆ ಯೋಜನೆಯಡಿ 8 ಲಕ್ಷ ರೂ. ಅನುದಾನದಲ್ಲಿ ಗ್ರಾಮದ ದೈತೇಶ್ವರ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಕೆರೆಕಟ್ಟೆಗಳ ಆತಿಕ್ರಮಣದಿಂದ ಪ್ರಸ್ತುತ ಕೆರೆಗಳು ಮಾಯವಾಗಿವೆ. ಕೆರೆಗಳೆಂದರೆ ಕೇವಲ ಕಾಗದದ ದಾಖಲಾತಿಯಲ್ಲಿ ಮಾತ್ರ ತನ್ನ ಅಸ್ತಿತ್ವ ಉಳಿಸಿಕೊಂಡಿವೆ. ಕೆರೆಕಟ್ಟೆಗಳ ಅತಿಕ್ರಮಣಕ್ಕೆ ಜನಸಂಖ್ಯಾ ಸ್ಫೋಟ ಹಾಗೂ ಮನುಷ್ಯನ ದುರಾಸೆಯೇ ಮೂಲ ಕಾರಣವೆಂದು ವಿಷಾದಿಸಿದರು. ನೀರು ನಮ್ಮ ಪ್ರಾಣ. ಜೀವಜಲ ಉಳಿಸಿ ಬೆಳೆಸುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದೆ. ಅಂತರಗಂಗೆಯ ಅಸ್ಥಿತ್ವಕ್ಕಾಗಿ ಪ್ರತಿ ಗ್ರಾಮಗಳ ಕೆರೆಗಳನ್ನು ಪುನರುಜ್ಜೀವನಗೊಳಿಸುವುದು ಅವಶ್ಯಕವಾಗಿದೆ. ಕೆರೆ ಹೂಳೆತ್ತುವ ಅನುದಾನ ಸದ್ಭಳಕೆ ಮಾಡಿಕೊಂಡು ಕಾಮಗಾರಿಯನ್ನು ತಿಂಗಳಲ್ಲಿ ಪೂರ್ಣಗೊಳಿಸಬೇಕು. ಜಿಲ್ಲೆಯಲ್ಲಿ 9 ಕೆರೆಗಳ ಹೂಳೆತ್ತುವ ಕಾರ್ಯ ಪ್ರಗತಿಯಲ್ಲಿದೆ. ಬರುವ ದಿನಗಳಲ್ಲಿ ಜಿಲ್ಲೆಯ ಒಟ್ಟು 25 ಕೆರೆಗಳ ಹೂಳೆತ್ತುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

ಸಾಮಾಜಿಕ ಹೋರಾಟಗಾರ ಪ್ರಕಾಶ ಅಂತರಗೊಂಡ ಮಾತನಾಡಿ, ಸಾಮಾಜಿಕ ಜವಾಬ್ದಾರಿಯಿದ್ದರೆ ಮಾತ್ರ ಸರಕಾರಿ ಯೋಜನೆ ಯಶಸ್ವಿಯಾಗುತ್ತವೆ. ಕೆರೆ, ಹಳ್ಳಗಳು ದೇವಾಲಯವಿದ್ದಂತೆ. ಅವುಗಳನ್ನು ದುರಾಸೆಯಿಂದ ಸಾರ್ವಜನಿಕರು ಒತ್ತುವರಿ ಮಾಡಿಕೊಳ್ಳದೆ ಅವುಗಳ ಸಂರಕ್ಷಣೆಗೆ ಮುಂದಾಗಬೇಕಿದೆ ಎಂದರು.

ಸಿದ್ಧಲಿಂಗ ಸ್ವಾಮೀಜಿ, ಜಿಪಂ ಉಪಾಧ್ಯಕ್ಷ ಮುತ್ತಪ್ಪ ಕೋಮಾರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಎಂ.ಡಿ. ಮಹೇಶ, ಭಾರತೀಯ ಕಿಸಾನ್‌ ಘಟಕದ ಜಿಲ್ಲಾಧ್ಯಕ್ಷ ವಿ.ಜಿ. ರೇವಡಿಗಾರ, ಕಸಾಪ ಅಧ್ಯಕ್ಷ ಕಿರಣ ಬಾಳಗೋಳ, ಗ್ರಾಪಂ ಉಪಾಧ್ಯಕ್ಷ ಮಲ್ಲಪ್ಪ ತೋಳಮಟ್ಟಿ, ಜಿಲ್ಲಾ ಜನಜಾಗೃತಿ ವೇದಿಕೆ ನಿರ್ದೇಶಕ ಡಿ.ಎಂ.ಸಾಹುಕಾರ ಇದ್ದರು.

ಟಾಪ್ ನ್ಯೂಸ್

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಎಚ್ಚರಿಕೆ ಕೊಟ್ಟಿದ್ದೆ ಅಷ್ಟೇ, ಕೊಲೆ ಮಾಡಿಲ್ಲ: ದರ್ಶನ್‌

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಖಾಸಗಿಯಲ್ಲಿ ಕನ್ನಡಿಗರಿಗೆ ನೂರಕ್ಕೆ ನೂರು ಮೀಸಲು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aasasas

Rabkavi Banhatti; ಕೃಷ್ಣಾ ನದಿಯಲ್ಲಿ ಮುಳುಗಿ ಮೀನುಗಾರ ಸಾವು

1-msss

Congress ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Mahalingapura ಶೀಘ್ರ ಶಾಲೆಯ ಬಿಸಿಯೂಟ ಕೊಠಡಿ, ಕಾಂಪೌಂಡ್ ನಿರ್ಮಾಣಕ್ಕೆ ಒತ್ತಾಯ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Rabkavi Banhatti ವೀಳ್ಯದೆಲೆ ಬೆಲೆ ಹೆಚ್ಚಳ; ರೈತರಲ್ಲಿ ಹರ್ಷ

Road Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯRoad Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯ

Road Mishap ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿ; ಇಬ್ಬರಿಗೆ ಗಾಯ

MUST WATCH

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

ಹೊಸ ಸೇರ್ಪಡೆ

2-udupi

Udupi: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

State Govt ಎಂಜಿನಿಯರಿಂಗ್‌ ಕೋರ್ಸ್‌ ಶುಲ್ಕ ಶೇ. 10 ಹೆಚ್ಚಳ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

Mangaluru ಹಲವು ರೈಲುಗಳ ಸೇವೆಯಲ್ಲಿ ಕೆಲ ತಾಸು ವ್ಯತ್ಯಯ

1-24-saturday

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ, ಅಧ್ಯಯನಾಸಕ್ತಿ ವೃದ್ಧಿ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

ದೇವೇಗೌಡರ ಬಳಿಕ, ಈಗ ಬಿಎಸ್‌ವೈ ಕುಟುಂಬ ನಾಶಕ್ಕೆ ಕೈ ಯತ್ನ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.