ದಯಮಾಡಿ ಸಾಮಾಜಿಕ ಅಂತರ ಕಾಯ್ದುಕೊಳ್ಳಿ


Team Udayavani, Mar 27, 2020, 5:44 PM IST

bk-tdy-1

ಬಾಗಲಕೋಟೆ: ಹಾಲು, ತರಕಾರಿ, ಕಿರಾಣಿ ಅಂಗಡಿಗಳ ಮುಂದೆ 3 ಅಡಿಗಳ ಅಂತರದಲ್ಲಿ ನಿಲ್ಲಲು ಮಾರ್ಕ್‌ ಹಾಕುವ ಕಾರ್ಯವನ್ನು ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಜಂಟಿಯಾಗಿ ಮಾಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಕೋವಿಡ್ 19 ವೈರಸ್‌ ಹರಡದಂತೆ ತಡೆಗಟ್ಟಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅಗತ್ಯವಾಗಿದ್ದು, ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳ ಮುಂದೆ 3 ಅಡಿ ಅಂತರದಲ್ಲಿ ಮಾರ್ಕ್‌ ಹಾಕುವ ಮೂಲಕ ಹೊಸ ಪ್ರಯೋಗವನ್ನು ಕಂಡುಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಪ್ರತಿಯೊಂದು ತಾಲೂಕು ಆಡಳಿತ ಹಾಗೂ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಯೋಗ ಅಳವಡಿಸಲಾಗುತ್ತಿದೆ. ಸಾರ್ವಜನಿಕರಿಗೆ ಅಗತ್ಯ ವಸ್ತುಗಳು ಕೊರತೆಯಾಗಬಾರದು ಇದರ ಜತೆಗೆ ಗುಂಪು ಗುಂಪಾಗಿ ಜನರು ಸೇರದಂತೆ ನೋಡಿಕೊಳ್ಳಬೇಕಾಗಿದೆ. ಇದರಿಂದ ಕೋವಿಡ್ 19 ಸೋಂಕು ಹರಡದಂತೆ ತಡೆಗಟ್ಟಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಜನದಟ್ಟನೆಯಿಂದ ದೂರವಿರುವಂತೆ ಮಾಡುವುದೇ ಕೋವಿಡ್ 19 ಸೋಂಕು ಹರಡುವದನ್ನು ತಡೆಗಟ್ಟಲು ಸಾಧ್ಯವೆಂಬುದನ್ನು ಮನಗಂಡು ಕೇಂದ್ರ ಮತ್ತು ರಾಜ್ಯ ಸರಕಾರ ಲಾಕ್‌ಡೌನ್‌ ಮಾಡಿದ್ದು, ಇದನ್ನು ಎಲ್ಲರೂ ಪಾಲಿಸಬೇಕು. ಅಂಗಡಿ, ಮಳಿಗೆಗಳು, ಹಾಲು, ತರಕಾರಿ ಮಳಿಗೆ ಹೀಗೆ ಪ್ರತಿ ಮಳಿಗೆಯಲ್ಲೂ ಸಾಮಾಜಿಕ ಅಂತರ ಕಾಯ್ದುಕೊಂಡು ಒಬ್ಬರಿಂದ ಒಬ್ಬರಿಗೆ ಸೋಂಕು ಹರಡುವದನ್ನು ತಪ್ಪಿಸಲು ಸಾದ್ಯವಾಗುತ್ತದೆ. ಜನರಲ್ಲಿ ಯಾವುದೇ ರೀತಿಯ ಭಯ ಬೇಡ ಎಲ್ಲರೂ ಒಗ್ಗಟ್ಟಾಗಿ ಕೋವಿಡ್ 19 ವಿರುದ್ಧ ಹೋರಾಡೋಣ ಎಂದು ಎಸ್‌ಪಿ ಕರೆ ನೀಡಿದರು.

ಚೊಳಚಗುಡ್ಡ ಗ್ರಾಪಂ ಶುದ್ಧ ಕುಡಿಯುವ ನೀರಿನ ಘಟಕದ ಮುಂದೆ ಸದರಿಯಲ್ಲಿ ನಿಂತು ನೀರು ತೆಗೆದುಕೊಂಡು ಹೋಗಲು ಜನರಿಗೆ ಒಂದು ಚಿಕ್ಕ ವ್ಯವಸ್ಥೆ ಮಾಡಲಾಯಿತು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.