ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧ

•ಹಿಪ್ಪರಗಿ ಜಲಾಶಯಕ್ಕೆ 25300 ಕ್ಯೂಸೆಕ್‌ ನೀರು •ಪ್ರವಾಹ ನಿಯಂತ್ರಣಕ್ಕೆ ನೋಡಲ್ ಅಧಿಕಾರಿಗಳ ನೇಮಕ

Team Udayavani, Jul 5, 2019, 8:02 AM IST

bk-tdy-1..

ಜಮಖಂಡಿ: ನಗರದಲ್ಲಿ ಉಪವಿಭಾಗಾಧಿಕಾರಿ ಇಕ್ರಂ ಶರೀಫ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಜಮಖಂಡಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೃಷ್ಣಾನದಿಗೆ ನೀರಿನ ಪ್ರಮಾಣದಲ್ಲಿ ಏರಿಕೆ ಆಗುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಿಸಲು ತಾಲೂಕು ಆಡಳಿತ ಸಕಲ ಸಿದ್ಧತೆಯೊಂದಿಗೆ ಸಂಪೂರ್ಣ ಸಜ್ಜುಗೊಂಡಿದೆ ಎಂದು ಉಪವಿಭಾಗಾಧಿಕಾರಿ ಇಕ್ರಂ ಶರೀಫ್‌ ಹೇಳಿದರು.

ನಗರದ ಮಿನಿ ವಿಧಾನಸೌಧ ಸಭಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದ ಪಶ್ಚಿಮಘಟ್ಟದಲ್ಲಿ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಅಪಾಯದ ಮಟ್ಟಕ್ಕೆ ತಲುಪಿದೆ. ಯಾವುದೇ ಸಂದರ್ಭದಲ್ಲಿ ಪ್ರವಾಹ ಎದುರಾದರೂ ಅದನ್ನು ಎದುರಿಸಲು ತಾಲೂಕಾಡಳಿತ ಸದಾ ಸಿದ್ಧವಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲ ತಯಾರಿ ಮಾಡಿಕೊಂಡಿದ್ದೇವೆ ಎಂದರು.

ಜಿಲ್ಲಾಡಳಿತದ ಆದೇಶದಂತೆ ಜಮಖಂಡಿ ಉಪವಿಭಾಗದ ಮೂರು ತಾಲೂಕಿನ ಪೈಕಿ ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಗೆ 27 ಗ್ರಾಮಗಳು, ಬೀಳಗಿ ತಾಲೂಕಿನ 20 ಗ್ರಾಮಗಳು ಮತ್ತು ಮುಧೋಳ ತಾಲೂಕಿನ ಘಟಪ್ರಭಾ ನದಿಗೆ 11 ಗ್ರಾಮಗಳು ಮುಳುಗಡೆಯಾಗುವ ಸಾಧ್ಯತೆಗಳಿವೆ.

ಮುಳುಗಡೆಯಾಗುವ ಪ್ರತಿಯೊಂದು ಗ್ರಾಮಗಳಿಗೆ ಒಬ್ಬರಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಅಲ್ಲಿನ ಲೆಕ್ಕಾಧಿಕಾರಿಗಳು ಮತ್ತು ಪಂಚಾಯತ ಅಭಿವೃದ್ಧಿ ಮತ್ತು ನೋಡಲ್ ಅಧಿಕಾರಿಗಳು ಗ್ರಾಮದ ಸಂಪೂರ್ಣ ಮಾಹಿತಿ ಕಲೆಹಾಕಿ ತಾಲೂಕಾಡಳಿತಕ್ಕೆ ಮಾಹಿತಿ ನೀಡಲಿದ್ದಾರೆ. ನೋಡಲ್ ಅಧಿಕಾರಿಗಳಿಗೆ ಬೇಕಾಗುವ ಸೌಲಭ್ಯ ಒದಗಿಸುವ ಕೆಲಸ ಮಾಡಬೇಕು. ಅಲ್ಲದೇ ಮುಂಜಾಗ್ರತಾ ಕ್ರಮವಾಗಿ ಆಯಾ ಗ್ರಾಮಗಳಲ್ಲಿ ಡಂಗೂರ ಸಾರಿ ಸಭೆ ಮಾಡಲಾಗಿದೆ ಎಂದರು.

ನದಿಯ ಸುತ್ತಲೂ ನೀರು ಹೆಚ್ಚಾದಂತೆ ಹಾವಿನ-ಚೇಳು ಕಾಟ ಹೆಚ್ಚಾಗುತ್ತದೆ. ನೀರಿನ ಬಾಧೆ ಇರುವ ಪ್ರದೇಶದಲ್ಲಿ ಹಾವು ಕಡಿತ ನಿಯಂತ್ರಿಸಲು ಹಾವು ಹಿಡಿಯುವವರನ್ನು ಸಂಪರ್ಕ ಮಾಡಿದ್ದೇವೆ. ಹಾವೂ ಕಡಿದವರಿಗೆ ಚಿಕಿತ್ಸೆ ನೀಡಲು ತುರ್ತು ಚಿಕಿತ್ಸೆಗೆ ಅವಕಾಶ ಮಾಡಲಾಗಿದೆ. ತಾಲೂಕಿನಲ್ಲಿರುವ ನುರಿತ ಈಜುಗಾರರನ್ನು ಆಹ್ವಾನಿಸಲಾಗಿದೆ. ಪ್ರವಾಹ ಹೆಚ್ಚಾದರೆ ಅಲ್ಲಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ, ಅಗತ್ಯವಾದರೆ ಗಂಜಿ ಕೇಂದ್ರ ತೆರೆಯಲಾಗುವುದು. ಗಂಜಿ ಕೇಂದ್ರಗಳಿಗೆ ಬೇಕಾದ ರೇಷನ್‌ ವ್ಯವಸ್ಥೆ ಈಗಾಗಲೇ ಮಾಡಲಾಗಿದೆ. ಜಾನುವಾರಗಳಿಗೆ ಗೋಶಾಲೆ ತೆರೆಯುವ ಸ್ಥಳ ನಿಗದಿಪಡಿಸಿ, ಮೇವಿನ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ತಹಶೀಲ್ದಾರ್‌ ಪ್ರಶಾಂತ ಚನಗೊಂಡ ಮಾತನಾಡಿ, ಕಂದಾಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಅನುಕೂಲಕ್ಕಾಗಿ ಸಹಾಯವಾಣಿ ಕೇಂದ್ರ ತೆರೆಯಲಾಗಿದೆ. ಪ್ರವಾಹ ಭಾದಿತ ಗ್ರಾಮಗಳಲ್ಲಿ ತುರ್ತು ಸಮಸ್ಯೆಗಳಿದ್ದಲ್ಲಿ 08353-220023 ಇಲ್ಲಿಗೆ 24X7 ಗಂಟೆಗಳ ಕಾಲ ದೂರವಾಣಿ ಕರೆ ಮಾಡಬಹುದು.

ತಾಲೂಕಾಡಳಿತದಲ್ಲಿ ಕಂದಾಯ ಇಲಾಖೆ, ಪೊಲೀಸ್‌ ಇಲಾಖೆ, ಹೆಸ್ಕಾಂ, ಆರೋಗ್ಯ ಇಲಾಖೆ, ನೀರಾವರಿ ಇಲಾಖೆ, ಸಾರಿಗೆ ಇಲಾಖೆ ಎಲ್ಲ ಇಲಾಖೆಗಳ ನೆರವು ಪಡೆಯಲಾಗುವುದು. ಪ್ರವಾಹ ಪರಿಸ್ಥಿತಿ ಎದುರಿಸಲು ಲಭ್ಯವಿರುವ ಬೋಟ್‌ಗಳಲ್ಲಿ 150 ಲೈಪ್‌ ಜಾಕೆಟ್, 150 ಟಾರ್ಚಗಳು, 100 ಹೆಲ್ಮೇಟ್, 27 ವೈರ್‌ಲೆಸ್‌ ಸೆಟ್, 54 ಹಗ್ಗ (ರೂಪ್‌), 54 ಸೇಪ್ಟಿ ಹುಕ್‌ ಬೇಡಿಕೆಯನ್ನು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರವಾಹ ಎದುರಾದರೆ ನಿಯಂತ್ರಣ ಮಾಡಲು ಹೆಚ್ಚಿನ ವ್ಯವಸ್ಥೆ ಬೇಕಾದರೆ ರೋಟರಿ ಕ್ಲಬ್‌, ರೆಡ್‌ ಕ್ರಾಸ್‌ಗಳಂತಹ ಸಂಸ್ಥೆಗಳೊಂದಿಗೆ, ಕೃಷಿ ಸಂಘ ಸಲಹೆಗಾರರೊಂದಿಗೆ ಸಂಪರ್ಕ ಮಾಡಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ರಬಕವಿ ಬನಹಟ್ಟಿ ವಿಶೇಷ ತಹಶೀಲ್ದಾರ್‌ ಮೆಹಬೂಬಿ ಇದ್ದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.