ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ಕೋವಿಡ್‌ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ ಇರುವುದರಿಂದ ಬಹಳಷ್ಟು ನೇಕಾರರು ತೊಂದರೆ ಅನುಭವಿಸಿದ್ದಾರೆ

Team Udayavani, Jan 29, 2022, 6:09 PM IST

ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಪ್ರತಿಭಟನೆ

ರಬಕವಿ-ಬನಹಟ್ಟಿ: ಜೋಡಣಿದಾರರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಮೂರು ದಿನಗಳಿಂದ ತಮ್ಮ ಮಗ್ಗಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಅಂದಾಜು 3000ಕ್ಕೂ ಹೆಚ್ಚು ಮಗ್ಗಗಳು ಮೂರು ದಿನಗಳಿಂದ ಬಂದ್‌ ಆಗಿವೆ.

ಜೋಡಣಿದಾರರ ಮಗ್ಗಗಳು ಬಂದಾಗಿರುವುದರಿಂದ ಅಂದಾಜು 15 ಸಾವಿರಕ್ಕೂ ಹೆಚ್ಚು ಜನ ಅವಲಂಬಿತರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜೋಡಣಿದಾರರ ನೇಕಾರರ ಮುಖಂಡರಾದ ಕುಬೇರ ಸಾರವಾಡ ಮತ್ತು ಕುಮಾರ ಬೀಳಗಿ ಹೇಳಿದರು. ಜೋಡಣಿದಾರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಉಪ ತಹಶೀಲ್ದಾರ್‌ ಎಸ್‌. ಎಲ್‌.ಕಾಗಿಯವರ ಅವರಿಗೆ ಮನವಿ ಸಲ್ಲಿಸಿ ಅವರು ಮಾತನಾಡಿದರು.

ಪ್ರತಿ ಸೀರೆಗೆ 9 ರೂ. ಹೆಚ್ಚು ಮಾಡುವಂತೆ ಮಾಲೀಕರಿಗೆ ಜನವರಿ 7ರಂದು ನೊಟೀಸ್‌ ನೀಡಲಾಗಿತ್ತು. ಆದರೆ, ಜೋಡಣಿದಾರ ಮಾಲೀಕರು 4.50 ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಮಾಲೀಕರು ಬೇಡಿಕೆಗೆ ಸ್ಪಂದಿಸದೆ ಇರುವುದರಿಂದ ಮೂರು ದಿನಗಳಿಂದ ಮಗ್ಗಗಳನ್ನು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತಿದ್ದೇವೆ.

ಈಗಾಗಲೇ ಪಕ್ಕದ ರಬಕವಿ ನಗರದಲ್ಲಿ 9ರೂ. ಹೆಚ್ಚಳ ಮಾಡಿದ್ದಾರೆ. ಆದ್ದರಿಂದ ನಮಗೂ ಕೂಡಾ 9 ರೂ. ನೀಡಬೇಕು ಎಂದು ಕೇಳಿದ್ದೇವೆ. ಈಗ ಜೋಡಣಿದಾರರ ನೇಕಾರರಿಗೆ ಒಂದು ಸೀರೆಗೆ 93 ರೂ. ಕೊಡಲಾಗುತ್ತಿದೆ ಎಂದರು.

ಜೋಡಣಿದಾರರ ನೇಕಾರರು ಕೂಡಾ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 2015ರಿಂದ ಮಜೂರಿ ಹೆಚ್ಚಳಕ್ಕಾಗಿ ಬೇಡಿಕೆ ಇಟ್ಟಿಲ್ಲ. ಏಳು ವರ್ಷಗಳಿಂದ ಒಂದೇ ಮಜೂರಿಯಲ್ಲಿ ಉದ್ಯೋಗ ಮಾಡುತ್ತಿದ್ದೇವೆ. ಮಾರುಕಟ್ಟೆಯಲ್ಲಿ ಆಹಾರ ಪದಾರ್ಥ, ತರಕಾರಿ ಬೆಲೆಗಳು ಸೇರಿದಂತೆ ಇನ್ನೀತರ ಅವಶ್ಯಕ ವಸ್ತುಗಳ ಬೆಲೆಗಳು ಹೆಚ್ಚಾಗಿವೆ. ಅದೇ ರೀತಿಯಾಗಿ ಕೋವಿಡ್‌ ಸಂದರ್ಭದಲ್ಲಿ ಉದ್ಯೋಗ ಇಲ್ಲದೆ ಇರುವುದರಿಂದ ಬಹಳಷ್ಟು ನೇಕಾರರು ತೊಂದರೆ ಅನುಭವಿಸಿದ್ದಾರೆ.

ಅದೇ ರೀತಿಯಾಗಿ ವಿದ್ಯುತ್‌ ದರ ಕೂಡಾ ಹೆಚ್ಚಾಗಿದೆ. ಒಂದು ಎಚ್‌.ಪಿ ಮೋಟಾರ್‌ಗೆ ಕನಿಷ್ಟ ದರವನ್ನು 25 ರೂ. ಇದ್ದ ಬೆಲೆಯನ್ನು 75 ರೂ.ಗೆ ಹೆಚ್ಚಳ ಮಾಡಿದ್ದಾರೆ. ಕೋವಿಡ್‌ ಸಂದರ್ಭದಲ್ಲಿ ನೀಡಿದ ರಿಯಾಯ್ತಿಯನ್ನು ವಿದ್ಯುತ್‌ ಇಲಾಖೆಯವರು ಈಗ ಮರಳಿ ಪಡೆದುಕೊಳ್ಳುತ್ತಿದ್ದಾರೆ. ಇದು ಭಾರಿ ಹೊಣೆಯಾಗಿದೆ. ಮಾರುಕಟ್ಟೆಯಲ್ಲಿ ಮಗ್ಗದ ಬಿಡಿ ಭಾಗಗಳು ದುಬಾರಿಯಾಗಿವೆ. ಇದರಿಂದಾಗಿ ಮಗ್ಗಗಳ ನಿರ್ವಹಣೆ ಕೂಡಾ ಸಮಸ್ಯೆಯಾಗಿದೆ ಎನ್ನುತ್ತಾರೆ ಜೋಡಣಿದಾರರು.

ಆದ್ದರಿಂದ ಜೋಡಣಿದಾರ ನೇಕಾರಿಕೆ ಅವಲಂಬಿಸಿದ ಕುಟುಂಬಗಳು ಎರಡು ಹೊತ್ತಿನ ಊಟ ಮಾಡಬೇಕಾದರೆ 9 ರೂ. ಮಜೂರಿ ಹೆಚ್ಚಳವಾಗಬೇಕಾಗಿದೆ ಎಂದು ಮುಖಂಡರಾದ ಬಸವರಾಜ ಮುರಗೋಡ, ಪರಮಾನಂದ ಭಾವಿಕಟ್ಟಿ,ಮಹಾದೇವ ನುಚ್ಚಿ, ಬಾಗಪ್ಪ ಬಾಣಕಾರ, ನಾಮದೇವ ಮಾನೆ, ರಮೇಶ ಸುಪ್ತಾನಪುರ ಸೇರಿದಂತೆ ನೂರಾರು ನೇಕಾರರು ಆಗ್ರಹಿಸಿದರು. ಬನಹಟ್ಟಿಯಲ್ಲಿ ಜೋಡಣಿದಾರ ನೇಕಾರರು ಮಜೂರಿ ಹೆಚ್ಚಳಕ್ಕಾಗಿ ಆಗ್ರಹಿಸಿ ಉಪ ತಹಶೀಲ್ದಾರ್‌ ಎಸ್‌.ಎಲ್‌.ಕಾಗಿಯವರ ಅವರಿಗೆ ಮನವಿ ಸಲ್ಲಿಸಿದರು.

ನೇಕಾರ ಮಾಲೀಕರ ಮುಖಂಡರಾದ ಶಂಕರ ಜಾಲಿಗಿಡದ ಮಾತನಾಡಿ, ಈಗಾಗಲೇ ನಾವು 4.50 ರೂ. ಹೆಚ್ಚಳ ಮಾಡುತ್ತೇವೆ ಎಂದು ಹೇಳಿದ್ದೇವೆ. ಇದಕ್ಕೆ ಸ್ಪಂದಿಸಿದ ಕೆಲವು ನೇಕಾರರು ಉದ್ಯೋಗದಲ್ಲಿ ತೊಡಗಿದ್ದಾರೆ. ನೇಕಾರ ಮಾಲೀಕರ ಮುಖಂಡರಿಗೂ ಸಾಕಷ್ಟು ಸಮಸ್ಯೆಗಳಿವೆ. ನೇಕಾರಿಕೆಯ ಉದ್ಯೋಗಕ್ಕೆ ಬೇಕಾದ ಕಚ್ಚಾ ನೂಲು, ಬಣ್ಣ, ಝರಿ, ಚಮಕಾ ಜೊತೆಗೆ ಜಿಎಸ್ಟಿ ಏರಿಕೆಯಿಂದಾಗಿ ನಮಗೂ ಕೂಡಾ ಹೊರೆಯಾಗಿದೆ. ಇವೆಲ್ಲವುಗಳಿಂದ ಮುಖ್ಯವಾಗಿ ನಮ್ಮ ಸೀರೆಗಳಿಗೆ ಮಾರುಕಟ್ಟೆಯೂ ಕೂಡಾ ಕಡಿಮೆಯಾಗುತ್ತಿದೆ. ನಾವು ನೇಕಾರರಿಗೂ ಮುಂಗಡ ಹಣ ನೀಡಬೇಕಾಗಿದೆ. ಜೊತೆಗೆ ಸೀರೆ ಖರೀದಿ ಮಾಡಿದವರಿಗೂ ಕೂಡಾ ಉದ್ರಿ ನೀಡಬೇಕಾಗಿದೆ. ಆದ್ದರಿಂದ ನಾವು 4.50 ರೂ. ಕೊಡಲು ಸಂಪೂರ್ಣ ಒಪ್ಪಿದ್ದೇವೆ ಎಂದರು.

ಟಾಪ್ ನ್ಯೂಸ್

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.