ಅತ್ಯಾಚಾರಿ ಆರೋಪಿ ಎನ್‌ಕೌಂಟರ್ ಮಾಡಿ
Team Udayavani, Feb 18, 2021, 6:38 PM IST
ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿಯ ಪ್ರತಿಭಾವಂತ ವಿದ್ಯಾರ್ಥಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಎನ್ ಕೌಂಟರ್ ಮಾಡುವಂತೆ ಹಿಂದು ಜಾಗರಣ ವೇದಿಕೆ ಒತ್ತಾಯಿಸಿದೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು. ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಅಶೋಕ ಮುತ್ತಿನಮಠ, ಶಂಕರಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿ, ಇಂತಹ ಲವ್ ಜಿಹಾದ್ ಘಟನೆಗಳನ್ನು ತಡೆಗಟ್ಟಬೇಕು. ಅತ್ಯಾಚಾರ ಮಾಡಿ, ಕೊಲೆ ಮಾಡಿದ ಕಲಾದಗಿಯ ಮುಸ್ಲಿಂ ಯುವಕನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷ ಆನಂದ ಮುತ್ತಗಿ, ಪ್ರಮುಖರಾದ ಬಸವರಾಜ ಕಟಗೇರಿ, ವಿಜಯ ಸುಲಾಖೆ, ಶಿವಕುಮಾರ ಮೇಲಾ°ಡ, ರಾಜು ನಾಯಕ, ಪರಶುರಾಮ ತಳವಾರ, ಕವಿ ಕಂಬಾರ ಮುಂತಾದವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸೋದು ತಪ್ಪಾ : 6 ಸಚಿವರ ಪರ ಕಟ್ಟಾ ಸುಬ್ರಮಣ್ಯ ಬ್ಯಾಟಿಂಗ್
ಮೋಡಿ ಮಾಡಿದ ಅಕ್ಷರ್ – ಅಶ್ವಿನ್: ಭಾರತದ ಪಾಲಿಗೆ ಟೆಸ್ಟ್ ಸರಣಿ, ಚಾಂಪಿಯನ್ ಶಿಪ್ ಗೆ ಆಯ್ಕೆ
ಕಸ ಸಂಗ್ರಹಕ್ಕೆ ಬೀದಿಗಿಳಿದ ಅಧ್ಯಕ್ಷರು
ಐಟಿ ದಾಳಿ ಬಗ್ಗೆ ಟ್ವೀಟ್ ಮಾಡಿದ ನಟಿ ತಾಪ್ಸಿ ಪನ್ನು
ನಮ್ಮ ಗೌರವ ರಕ್ಷಣೆಗೆ ನ್ಯಾಯಾಲಯದ ಮೊರೆ, ನಮಗೆ ಯಾವುದೇ ಭಯವಿಲ್ಲ: ಸಚಿವ ನಾರಾಯಣಗೌಡ