ಶಾಸಕರ ಬಂಧನಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Team Udayavani, Oct 26, 2019, 12:06 PM IST

bk-tdy-2

ಬಾಗಲಕೋಟೆ: ಬಿವಿವಿ ಸಂಘದ ದಲಿತ ನೌಕರನ ಮೇಲೆ ದೌರ್ಜನ್ಯ ಎಸಗಿದ ಶಾಸಕ ಡಾ| ವೀರಣ್ಣ ಚರಂತಿಮಠ ಬಂಧಿಸುವಂತೆ ಮತ್ತು ಮುಧೋಳ ತಾಲೂಕಿನ ಶಿರೋಳದ ಜೋಡಿ ಕೊಲೆ ಪ್ರಕರಣವನ್ನು ಸಿಐಡಿಗೆ ಒಪ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಳೆಯಲ್ಲೇ ಪ್ರತಿಭಟನೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾರ್ಯಕರ್ತರು, ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ. ರಾಜೇಂದ್ರ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಡಿಎಸ್‌ಎಸ್‌ ಸಂಚಾಲಕ ಪರಶುರಾಮ ನೀಲನಾಯಕ, ಬಿವಿವಿ ಸಂಘದ ಬಸವೇಶ್ವರ ಇಂಜನಿಯರಿಂಗ್‌ ಕಾಲೇಜು ಸರ್ಕಾರದಿಂದ ಅನುದಾನಕ್ಕೆ ಒಳಪಟ್ಟ ದಿನದಿಂದ ಇಲ್ಲಿಯವರೆಗೂ ಪರಿಶಿಷ್ಟ ಜಾತಿಯವರಿಗೆ ಮುಂಬಡ್ತಿ ನಿರಾಕರಿಸಲಾಗಿದೆ. ಮುಂಬಡ್ತಿ ಕೋರಿದ ಸದಾಶಿವ ಕೆಂಭಾವಿ ಅವರನ್ನು ಸೇವೆಯಿಂದ ವಜಾ ಮಾಡಲಾಗಿತ್ತು. ನ್ಯಾಯಾಲಯದ ಆದೇಶದಂತೆ ಸದಾಶಿವ ಅವರನ್ನು ಪುನಃ ಸೇವೆಗೆ ಸೇರಿಸಿಕೊಳ್ಳದೇ ದೌರ್ಜನ್ಯ, ಕಿರುಕುಳ ಹಾಗೂ ಅವಮಾನ ಮಾಡಿದ್ದಾರೆ. ಸೇವೆಗೆ ಸೇರಿಸಿಕೊಳ್ಳದೇ ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಆರೋಪಿಸಿದರು.

ಎಸ್‌ಸಿ, ಎಸ್‌ಟಿ ದೌರ್ಜನ್ಯ ಪ್ರತಿಬಂಧ ಅಡಿಯಲ್ಲಿ ಶಾಸಕ ಡಾ| ವೀರಣ್ಣ ಚರಂತಿಮಠ, ಚಂದ್ರಶೇಖರ ಶಿವಯೋಗಿಮಠ ಮತ್ತು ರಾಮಚಂದ್ರ ನಾರಾಯಣ ಹೆರಕಲ್‌ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತರಿಗೆ ದೌರ್ಜನ್ಯ ಎಸಗುತ್ತಿರುವ ಬಿವಿವಿ ಸಂಘಕ್ಕೆ ಸರ್ಕಾರ ಆಡಳಿತಾಧಿಕಾರಿಯನ್ನು ನೇಮಿಸಬೇಕು. ಇಂಜನಿಯರಿಂಗ್‌ ಕಾಲೇಜಿನ ಅವ್ಯವಹಾರ ಕುರಿತಂತೆ ಸೂಕ್ತ ತನಿಖೆ ನಡೆಸಬೇಕು. ಪೊಲೀಸರು ಶಾಸಕ ಡಾ| ವೀರಣ್ಣ ಚರಂತಿಮಠ ಮತ್ತು ಅವರ ಸಂಗಡಿಗರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.

ಶಿರೋಳ ಗ್ರಾಮದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಳಗೇರಿ ಕುಟುಂಬವು ಸಾಕಷ್ಟು ಬಾರಿ ಡಿಎಸ್‌ಪಿ, ಸಿಪಿಐ ಮತ್ತು ಪಿಎಸ್‌ಐ ಅವರಿಗೆ ನಮಗೆ ಜೀವ ಬೆದರಿಕೆ ಇದೆ ಎಂದು ಹೇಳಿಕೊಂಡರೂ ಸಹ ಅಧಿಕಾರಿಗಳು ಬೇಜವಾಬ್ದಾರಿಯಿಂದ ಕರ್ತವ್ಯ ಲೋಪ ಎಸಗಿದ್ದಾರೆ. ಈ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಜಮಖಂಡಿಯ ರಾಯಲ್‌ ಸ್ಕೂಲ್‌ನಲ್ಲಿ ಅನುಮಾನಸ್ಪದವಾಗಿ ಸಾವಿಗೀಡಾದ ಚಿಮ್ಮಡ ಗ್ರಾಮದ ಪ್ರಿಯಾಂಕ ಪ್ರಕರಣವನ್ನು ಕೂಡಾ ಸಿಐಡಿಗೆ ಒಪ್ಪಿಸಬೇಕು. ಶಾಸಕ ಡಾ| ವೀರಣ್ಣ ಚರಂತಿಮಠ ಅವರನ್ನು ಬಂಧಿಸಬೇಕು. ಇಲ್ಲದಿದ್ದರೆ ನವೆಂಬರ್‌ 5ರಂದು ಬಾಗಲಕೋಟೆ ಬಂದ್‌ಗೆ ಕರೆ ನೀಡ, ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಡಿಎಸ್‌ಎಸ್‌ನ ಜಿಲ್ಲಾ ಸಂಚಾಲಕ ಶ್ಯಾಮ ಕಾಳೆ, ಸರಸ್ವತಿ ಕಾಂಬಳೆ, ಆರ್‌ ಪಿಐ ಜಿಲ್ಲಾಧ್ಯಕ್ಷ ಯಮನಪ್ಪ ಗುಣದಾಳ, ಜಿಲ್ಲಾ ಸಂಘಟನಾ ಸಂಚಾಲಕರಾದ ಸತೀಶ ಗಾಡಿ, ಬಸವರಾಜ ಚಲವಾದಿ, ಮುತ್ತಣ್ಣ ಚಲವಾದಿ, ಪ್ರಮುಖರಾದ ಪಡೆಯಪ್ಪ ಕಳ್ಳಿಮನಿ, ಸಿದ್ದು ಮಾದರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.