ವಸತಿ ನಿಲಯಕ್ಕೆ ಸೌಕರ್ಯ ಒದಗಿಸಿ
•ವಿದ್ಯಾರ್ಥಿಗಳ ಪ್ರತಿಭಟನೆ •ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಗೆ ಖಂಡನೆ
Team Udayavani, Jul 29, 2019, 12:53 PM IST
ಹುನಗುಂದ: ಪಟ್ಟಣದ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿರುವ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಆಗ್ರಹಿಸಿ ವಸತಿ ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಶಿರಸ್ತೇದಾರ ಸುಭಾಸ ಗೌಡರಗೆ ಮನವಿ ಸಲ್ಲಿಸಿದರು.
ಹುನಗುಂದ: ಪಟ್ಟಣದ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ನೀಗಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ವಸತಿ ನಿಲಯದ ವಿದ್ಯಾರ್ಥಿಗಳ ಅನೇಕ ಸಮಸ್ಯೆಗೆ ಸ್ಪಂದಿಸದಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿಯ ಮೇಲೆ ಶಿಸ್ತಿನ ಕ್ರಮ ಜರುಗಿಸುವಂತೆ ಒತ್ತಾಯಿಸಿ ಶಿರಸ್ತೇದಾರ ಸುಭಾಸ ಗೌಡರಗೆ ಮನವಿ ಸಲ್ಲಿಸಿದರು.
ಕಳೆದ 2017ರಲ್ಲಿ 1.99 ಕೋಟಿ ಅನುದಾನದಲ್ಲಿ ನೂರು ವಿದ್ಯಾರ್ಥಿಗಳ ವಾಸಕ್ಕೆ ಅನುಕೂಲವಾಗುವ ಕಟ್ಟಡ ನಿರ್ಮಿಸಲಾಗಿದೆ. ಆದರೆ ಎರಡು ವರ್ಷಗಳಾದರೂ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯ ಒದಗಿಸುವುದರಲ್ಲಿ ಸಮಾಜ ಕಲ್ಯಾಣ ಇಲಾಖೆ ವಿಫಲವಾಗಿದೆ. ಇಲ್ಲಿನ ಅನೇಕ ಸಮಸ್ಯೆಗಳಿಂದ ನಿತ್ಯ ಪಡಬಾರದ ಕಷ್ಟ ಸಂಕಷ್ಟ ಅನುಭವಿಸುತ್ತಿದ್ದು, ಇದರ ಬಗ್ಗೆ ಸಾಕಷ್ಟು ಸಾರಿ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ನಿಲಯದ ಮೇಲ್ವಿಚಾರಕರ ಮೂಲಕ ತಾಲೂಕ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ಲಿಖೀತ ರೂಪದಲ್ಲಿ ಮನವಿ ಮಾಡಿಕೊಂಡರೂ ಸ್ಪಂದಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಹಾಸ್ಟೆಲ್ ಕಟ್ಟಡವು ಮಳೆಯಾದರೇ ಅಲ್ಲಲ್ಲಿ ಸೋರುತ್ತಿದೆ. ಇದನ್ನು ದುರಸ್ತಿಗೊಳಿಸದೇ ಇರುವುದರಿಂದ ಮಳೆ ಬಂದಾಗ ನರಕಯಾತನೆ ಅನುಭವಿಸುವಂತಾಗಿದೆ. ಸೋಲಾರ್ ವಾಟರ್ ಹೀಟರ್ ವ್ಯವಸ್ಥೆ ಇಲ್ಲದಿರುವುದರಿಂದ ನಿತ್ಯ ತಣ್ಣೀರಿನ ಸ್ನಾನ ಮಾಡುವಂತಾಗಿದೆ. ಆಟದ ಮೈದಾನವಿಲ್ಲ ಮತ್ತು ಕ್ರೀಡಾ ಸಾಮಗ್ರಿಗಳು ಮೊದಲೇ ಇಲ್ಲ. ಗಣಕಯಂತ್ರವು ಕೂಡಾ ಇಲ್ಲ. ಕಾಲೇಜು ಪಠ್ಯದ ಜೊತೆಗೆ ಇತರೆ ಪುಸ್ತಕ ಅಧ್ಯಯನ ಮಾಡಲು ಗ್ರಂಥಾಲಯವಿಲ್ಲ. ಕಳೆದ ಜು. 25 ರಂದು ಮೂಲಭೂತ ಸೌಲಭ್ಯ ಕೇಳಲು ಹೋದ ವಸತಿ ವಿದ್ಯಾರ್ಥಿಗಳಿಗೆ ತಾಲೂಕ ಸಹಾಯಕ ನಿರ್ದೇಶಕಿ ಎಸ್.ಆರ್. ನದಾಫ್ ವಸತಿ ನಿಲಯಕ್ಕೆ ಭೇಟಿ ನೀಡಿದಾಗ ನಿತ್ಯ ಅನುಭವಿಸುತ್ತಿರುವ ಈ ಎಲ್ಲ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿಕೊಂಡಾಗ ಅವರು ತಮ್ಮ ಜೀವನದ ಕಥೆಯನ್ನು ಹೇಳಿದರೇ ಹೊರೆತು ಬೇಡಿಕೆ ಈಡೇರಿಸುವ ಬಗ್ಗೆ ಮಾತನಾಡಿಲ್ಲ ಎಂದರು.
ಪ್ರತಿಭಟನೆಯಲ್ಲಿ ಎಬಿವಿಪಿಯ ನಗರ ಘಟಕದ ಅಧ್ಯಕ್ಷ ನವೀನ ಪಾಟೀಲ, ಬೀರೇಶ ಮಾದರ, ಮಾರುತಿ ದಾಸರ, ಕೃಷ್ಣ ವಡ್ಡರ, ಸಂತೋಷ ಚಲವಾದಿ, ಮಂಜುನಾಥ ಚಲವಾದಿ, ನಟರಾಜ ವಡ್ಡರ, ಹನಮಂತ ಮಾದರ, ಶಶಿಕುಮಾರ ಮಾಗಿ, ಅನಿಲಕುಮಾರ, ಮಂಜುನಾಥ ದಾಸರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನಸು ಹುಟ್ಟಿಸಿದ ಸಿದ್ದರಾಮಯ್ಯ ನಡೆ: ಬಾದಾಮಿಯಲ್ಲಿ ಕೈ ಕಾರ್ಯಕರ್ತರ ಒಗ್ಗಟ್ಟಿನ ಮಂತ್ರ
ನಾವು ಬಂಡುಕೋರರಲ್ಲ, ಬಿಜೆಪಿಯಲ್ಲೇ ಇದ್ದೇವೆ: ಟಿಕೆಟ್ ಕೇಳಿದ ರಾಜೇಂದ್ರ ಅಂಬಲಿ
ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಿ – ಶಾಸಕ ಸಿದ್ದು ಸವದಿ
ಚುನಾವಣೆಯಲ್ಲಿ ಬಿಎಲ್ಒಗಳ ಸೇವೆ ಅಮೂಲ್ಯ: ಸಿದ್ನಾಳ
ಬಾಗಲಕೋಟೆ: ಒಂದೂವರೆ ವರ್ಷದಲ್ಲಿ 156 ಉಪ ವಿದ್ಯುತ್ ಸ್ಟೇಷನ್ ಸ್ಥಾಪನೆ
MUST WATCH
ಹೊಸ ಸೇರ್ಪಡೆ
ಅಮೃತಪಾಲ್ ಗಾಗಿ ಶೋಧ; ಐದು ಸಹಚರರರ ವಿರುದ್ಧ NSA ; ಐಎಸ್ಐ ಪಾತ್ರ?
ಏನು ಹೇಳಿದರೂ ನಿನದೇ ಸರಿ …ಸಂಕಟ ಕಾಲದಲ್ಲಿ ಮತದಾರನೇ ವೆಂಕಟರಮಣ !
ಮೂಡಿಗೆರೆ JDS ನಲ್ಲಿ ಭಿನ್ನಮತ: ಬಿ.ಬಿ ನಿಂಗಯ್ಯಗೆ ಟಿಕೆಟ್ ನೀಡಲು ಸ್ವಪಕ್ಷದಲ್ಲೇ ವಿರೋಧ
ಮಂಗಳೂರು: ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಆರೋಪಿ ಬಂಧನ
ರಾಜ್ಯ ಸರಕಾರಕ್ಕೆ ಇನ್ನು 35 ದಿನ ಮಾತ್ರ ಆಯಸ್ಸು: ಸರಕಾರದ ವಿರುದ್ಧ ಯು.ಟಿ.ಖಾದರ್ ಟೀಕೆ