ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ


Team Udayavani, Sep 18, 2020, 6:20 PM IST

ಸಂಕಷದಲ್ಲಿ ಕಲಾವಿದರಿಗೆ ನೆರವು ನೀಡಿ

ಬಾಗಲಕೋಟೆ: ಕೋವಿಡ್  ಸಂಕಷ್ಟದ ಸಂದರ್ಭದಲ್ಲಿ ಜಿಲ್ಲೆಯ ಬೀದಿ ನಾಟಕ ಕಲಾವಿದರೂ ತೀವ್ರ ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ನೆರವಿಗೆ ಬರಬೇಕುಎಂದು ಜಿಲ್ಲೆಯ ಬೀದಿ ನಾಟಕ ಕಲಾವಿದರು ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕಲಾವಿದರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಬಾದಾಮಿ ತಾಲೂಕುಗೋವಿನಕೊಪ್ಪ ಕಲಾ ತಂಡದ ಮಂಜುನಾಥ ದ್ಯಾವನ್ನವರ ಮಾತನಾಡಿ, ರಾಜ್ಯದಲ್ಲಿ ಸುಮಾರು 4500ಕ್ಕೂ ಹೆಚ್ಚು ಬೀದಿ ನಾಟಕಕಲಾವಿದರಿದ್ದೇವೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಗ್ರಾಮೀಣ ಜನರಲ್ಲಿ ನಾಟಕದ ಮೂಲಕ ಜಾಗೃತಿ ಮೂಡಿಸಿ,ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಪ್ರಮುಖ ಪಾತ್ರ ವಹಿಸುತ್ತ ಬಂದಿದ್ದೇವೆ. ಆದರೆ, ಈಚಿನ ದಿನಗಳಲ್ಲಿ ಬೀದಿ ನಾಟಕಕಲಾವಿದರಿಗೆ ಯಾವುದೇ ಐಇಸಿ ಚಟುವಟಿಕೆ ನೀಡಿಲ್ಲ. ಇದರಿಂದ ಕಲಾವಿದರ ಬದುಕು ದುಸ್ತರವಾಗಿದೆ ಎಂದರು.

ಬೀದಿಯಲ್ಲಿ ಅರಿವು ಮೂಡಿಸುವವರು ನಾವು, ಬೀದಿ ಪಾಲಾಗುವ ಆತಂಕದಲ್ಲಿದ್ದೇವೆ. ಸರ್ಕಾರ ಕೂಡಲೇ ನಮ್ಮ ಸಮಸ್ಯೆಯನ್ನು ಅರಿತು ನೆರವಿಗೆ ಬರಬೇಕು ಎಂದು ಮನವಿ ಮಾಡಿದರು.

ಲೋಕಾಪುರದ ದುರ್ಗಾದೇವಿ ಗೀ ಗೀ ಪದ ಕಲಾವಿದರ ಸಂಘ, ಕೆರೂರಿನ ಬನಶಂಕರಿ ಜಾನಪದ ಸಂಪ್ರದಾಯ ಕಲಾ ಸಂಘ, ನರೇನೂರದ ಡಿಡಿ ಮತ್ತು ಆಕಾಶವಾಣಿಕಲಾವಿದರು, ಕೆರೂರಿನ ಶಾಕಾಂಬರಿಜಾನಪದ ಕಲಾವಿದರ ಸಂಘ, ನವನಗರದ ಅಂಬಾಭವಾನಿ ಗೋಂದಳಿ ಕಲಾವಿದರ ಸಂಘ ಸೇರಿದಂತೆ ವಿವಿಧ ಬೀದಿ ನಾಟಕ ಕಲಾ ತಂಡಗಳ ಕಲಾವಿದರು ಪಾಲ್ಗೊಂಡಿದ್ದರು.

……………………………………………………………………………………………………………………………………………………..

ಶಿಕಣ ಇಲಾಖೆ ಅಧಿಕಾರಿಗಳ ಭೇಟಿ : ಶಿರೂರ: ಸ್ಥಳೀಯ ಸಿದ್ದೇಶ್ವರ ಪ್ರೌಢಶಾಲೆಯಿಂದ ವಿದ್ಯಾರ್ಥಿಗಳ ಶಿಕ್ಷಣದ ಉನ್ನತಿಗಾಗಿ ಗ್ರಾಮದ ಎಂಟು ಕಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ  ಕೇಂದ್ರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕಾರ್ಯಾಲಯದ ವಿಷಯ ಪರಿವೀಕ್ಷಕರಾದ ಎಂ.ಎ ಬಾಳಿಕಾಯಿ, ಎನ್‌.ವೈ. ಮಾಡಮಗೇರಿ ಭೇಟಿ ನೀಡಿ ಪರಿಶಿಲಿಸಿದರು.

ನಂತರ ವಿದ್ಯಾರ್ಥಿಗಳನ್ನು ವಿವಿಧ ವಿಷಯಗಳ ಕುರಿತು ಪ್ರಶ್ನಿಸಿ ಅವರಿಂದ ಉತ್ತರಪಡೆದರು. ತಾಲೂಕಿನ ಪ್ರತಿ ಶಾಲೆಗಳಲ್ಲಿ ಮುಖ್ಯ ಗುರುಗಳು ಆಯಾ ಸಹ ಶಿಕ್ಷಕರು, ಈ ವಿದ್ಯಾಗಮದ ಯೋಜನೆಯನ್ನು ಉತ್ತಮರೀತಿಯಲ್ಲಿ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು.

ಗ್ರಾಮದ ಕಿತ್ತೂರು ಚೆನ್ನಮ್ಮ ಪ್ರೌಢಶಾಲೆಯವತಿಯಿಂದ ಶಿರೂರ, ಬೂದಿನಗಡ, ಗುಂಡನಪಲ್ಲೆ, ಮಲ್ಲಾಪುರ ಗ್ರಾಮಗಳಲ್ಲಿ 4 ಕಲಿಕಾ ತಂಡಗಳು ವಿಷಯವಾರು ಬೋಧನೆ ನಡೆಯುತ್ತಿದೆ. ಸಿದ್ದೇಶ್ವರ ಪ್ರೌಢಶಾಲೆಯಮುಖ್ಯ ಗುರುಮಾತೆ, ಎಲ್‌.ಟಿ. ಪೂಜಾರ ಸೇರಿದಂತೆ 8 ಶಿಕ್ಷಕರು ಕಿತ್ತೂರು ಚನ್ನಮ್ಮ ಪ್ರೌಢಶಾಲೆಯ ಮುಖ್ಯ ಗುರುಮಾತೆ ವಿಜಯಲಕ್ಷ್ಮೀ ಹಿರೇಮಠ ಸೇರಿದಂತೆ ವಿದ್ಯಾಗಮ ಕೇಂದ್ರಗಳಲ್ಲಿ ಸಾಮಾಜಿಕ ಅಂತರದೊಂದಿಗೆ ಪಾಠ ಮಾಡುತ್ತಿದ್ದಾರೆ.

ಗ್ರಾಮ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕನ್ನಡ ಹೆಣ್ಣು ಮಕ್ಕಳ ಶಾಲೆ, ಉರ್ದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮುಖ್ಯಗುರುಗಳಾದ ಎಚ್‌.ಕೆ. ಮಗಸಜ್ಜಿ, ಆರ್‌.ಎಚ್‌ ಬೇವಿನಗಿಡದ, ಎಚ್‌.ಎಂಮಾಚಾ, ವೈ.ಎಂ. ಮಲಘಾಣ, ಎಸ್‌. ಎಂ. ನಾಲವತ್ವಾಡ ಸೇರಿದಂತೆ ಸಹಶಿಕ್ಷಕರುನಡೆಸುತ್ತಿರುವ ಗ್ರಾಮದ 50 ಕ್ಕೂ ಹೆಚ್ಚು ಕಲಿಕಾ ತಂಡಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.