ಆಯಾ ತಾಲೂಕಿನಲ್ಲಿ ಕ್ವಾರಂಟೈನ್‌


Team Udayavani, May 14, 2020, 1:22 PM IST

ಆಯಾ ತಾಲೂಕಿನಲ್ಲಿ ಕ್ವಾರಂಟೈನ್‌

ಮಹಾಲಿಂಗಪುರ: ದುಡಿಯಲು ಹೋದ ರಾಜ್ಯದ ಕಾರ್ಮಿಕರು ಮರಳಿ ಬರುತ್ತಿರುವದರಿಂದ ನಮ್ಮ ಜಿಲ್ಲೆಗೆ ಆಗಮಿಸುವ ವಲಸೆ ಕಾರ್ಮಿಕರನ್ನು ಆಯಾ ತಾಲೂಕಿನಲ್ಲೇ ಕ್ವಾರಂಟೈನ್‌
ಮಾಡುವ ಮೂಲಕ ಕೋವಿಡ್ ತಡೆಗಟ್ಟಲು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಡಾ| ಕೆ.ರಾಜೇಂದ್ರ ಹೇಳಿದರು.

ಪಟ್ಟಣದ ಕೋವಿಡ್ ಚೆಕ್‌ ಪೋಸ್ಟ್‌ಗೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದ ಅವರು, ಚೆಕ್‌ಪೋಸ್ಟ್‌‌ನಲ್ಲಿ ಕಾರ್ಯನಿರ್ವಹಿಸುವವರು ತೀವ್ರ ನಿಗಾ ವಹಿಸಿ, ಮಹಾರಾಷ್ಟ್ರ, ಗೋವಾ, ಗುಜರಾತ್‌ ಸೇರಿದಂತೆ ಬೇರೆ ರಾಜ್ಯಗ ಳಿಂದ ಆಗಮಿಸುವಎಲ್ಲ ವಾಹನಗಳ ತಪಾಸಣೆ ಮಾಡಿ, ಪ್ರತಿಯೊಬ್ಬರನ್ನು ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಲು ಸೂಚಿಸಿದರು.

ಕ್ವಾರಂಟೈನ್‌ ಸ್ಥಳಗಳ ಪರಿಶೀಲನೆ: ಪರರಾಜ್ಯಗಳಿಂದ ಬರುವ ವಲಸೆ ಕಾರ್ಮಿಕರು ಚೆಕ್‌ಪೋಸ್ಟ್‌ನಲ್ಲಿ ಸಿಕ್ಕ ನಂತರ ಅವರನ್ನು ಪಕ್ಕದಲ್ಲೇ ಇರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವಸತಿ ನಿಲಯಕ್ಕೆ ಸ್ಥಳಾಂತರಿಸಲಾಗುವುದು. ಬಳಿಕ ಅವರನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕಳುಹಿಸಿ ಅಲ್ಲಿ ಅವರ ತಪಾಸಣೆ ನಡೆಸಿ. ನಂತರ ಅವರ ತಾಲೂಕಿಗೆ ಸಂಬಂಧಿಸಿದ ನಿಗದಿತ ಕ್ವಾರಂಟೈನ್‌ಗಳಿಗೆ ಇರಿಸಲಾಗುವುದು. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಿಗಾ ವಹಿಸಲು ಪಟ್ಟಣದಲ್ಲಿ ನಿಗದಿಪಡಿಸಿದ ಕ್ವಾರಂಟೈನ್‌ ಸ್ಥಳಗಳನ್ನು ಜಿಲ್ಲಾ ಧಿಕಾರಿಗಳು, ಎಸ್‌ಪಿ ಮತ್ತು ತಾಲೂಕು ಅಧಿ ಕಾರಿಗಳ ತಂಡ ಪರಿಶೀಲನೆ ನಡೆಸಿತು.

ಸಾರ್ವಜನಿಕರ ಸಹಕಾರ ಅಗತ್ಯ: ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲೊಕೇಶ ಜಗಲಾಸರ್‌ ಮಾತನಾಡಿ, ಜಿಲ್ಲೆಗೆ ಹೆಚ್ಚಿನ ಸಂಖ್ಯೆಯಲ್ಲಿ ವಲಸೆ ಕಾರ್ಮಿಕರು ಆಗಮಿಸುತ್ತಿರುವ ಕಾರಣ ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಕ್ವಾರಂಟೈನ್‌ ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಕ್ವಾರಂಟೈನ್‌ ಸುತ್ತಮುತ್ತಲಿನ ಸಾರ್ವಜನಿಕರು ಅನಾವಶ್ಯಕವಾಗಿ ಓಡಾಡದೇ, ತಮ್ಮ ಸುರಕ್ಷತೆಗಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ, ಸ್ಯಾನಿಟೈಸರ್‌ ಬಳಕೆಯೊಂದಿಗೆ ಕೊರೊನಾ ತಡೆಯಲು ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಪೊಲೀಸ್‌ ಇಲಾಖೆಗೆ ಸಹಕಾರ
ನೀಡಬೇಕು ಎಂದರು.

ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೋಳ್ಳಿ, ರಬಕವಿ-ಬನಹಟ್ಟಿ ತಹಶೀಲ್ದಾರ ರ್‌ ಪ್ರಶಾಂತ ಚನಗೊಂಡ, ಉಪ ತಹಶೀಲ್ದಾರ್‌ ಎಸ್‌.ಬಿ. ಕಾಂಬಳೆ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ಮಹಾಲಿಂಗಪುರ ಠಾಣಾಧಿ ಕಾರಿ ಜಿ.ಎಸ್‌. ಉಪ್ಪಾರ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.