ಬಾರದ ಪ್ರಶ್ನೆ ಪತ್ರಿಕೆ, ಪರೀಕ್ಷೆ ರದ್ದು -ಪ್ರತಿಭಟನೆ

ಚನ್ನಮ್ಮ ವಿವಿ ವಿರುದ್ಧ ಪತ್ರಿಕೋದ್ಯಮ ವಿದ್ಯಾರ್ಥಿಗಳ ಆಕ್ರೋಶ

Team Udayavani, Mar 31, 2022, 12:49 PM IST

8

ಮಹಾಲಿಂಗಪುರ: ಪದವಿ ಪರೀಕ್ಷೆಗಳು ಮಾ.22ರಿಂದ ಪ್ರಾರಂಭವಾಗಿವೆ. ಬುಧವಾರ ನಡೆಯಬೇಕಿದ್ದ ಪದವಿ ಮೂರನೇ ಸೆಮಿಸ್ಟರ್‌ನ ಪತ್ರಿಕೋದ್ಯಮ ವಿಭಾಗದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮಗಳು ವಿಷಯದ ಪಶ್ನೆ ಪತ್ರಿಕೆ ಬಾರದೇ ಪರೀಕ್ಷೆ ರದ್ದಾಗಿದೆ. ಇದರಿಂದ ಕೋಪಗೊಂಡ ವಿದ್ಯಾರ್ಥಿಗಳು ಬೆಳಗಾವಿ ರಾಣಿ ಚನ್ನಮ್ಮ ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು.

ಬುಧವಾರ ಪದವಿ ಇತರ ವಿಷಯದ ಪರೀಕ್ಷೆ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿರುವ ಕಾರಣ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು ಕಾಲೇಜಿನ ಆವರಣದ ಹೊರಗೆ ಪ್ರತಿಭಟನೆ ನಡೆಸಿದರು.

2ನೇ ಬಾರಿ ಪರೀಕ್ಷೆ ರದ್ದು: ಮಾ.28ರಂದು ನಡೆಯಬೇಕಿದ್ದ ಪತ್ರಿಕೋದ್ಯಮ ವಿಭಾಗದ ಬರವಣಿಗೆಯ ಕೌಶಲ್ಯಗಳು ವಿಷಯದ ಪ್ರಶ್ನೆ ಪತ್ರಿಕೆ ಬಾರದೇ ಒಂದು ಗಂಟೆ ಕಾಲ ಕಾಯ್ದು ಪರೀಕ್ಷೆ ರದ್ದಾಗಿ ವಿದ್ಯಾರ್ಥಿಗಳು ಮನೆಗೆ ಮರಳಿದ್ದರು. ಇಂದು ನಡೆಯಬೇಕಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಮಾಧ್ಯಮಗಳು ವಿಷಯದ ಪ್ರಶ್ನೆ ಪತ್ರಿಕೆಯೂ ಬಂದಿಲ್ಲ.

ಪತ್ರಿಕೋದ್ಯಮ ವಿಭಾಗದ ಎರಡನೇ ಪ್ರಶ್ನೆ ಪತ್ರಿಕೆ ಬಾರದಿರುವ ಕಾರಣ ರೊಚ್ಚಿಗೆದ್ದ ವಿದ್ಯಾರ್ಥಿಗಳು ಬೆಳಗಾವಿ ಚನ್ನಮ್ಮ ವಿವಿ ವಿರುದ್ಧ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿಗಳು, ಚನ್ನಮ್ಮ ವಿವಿ ಎಡವಟ್ಟುಗಳ ವಿವಿಯಾಗಿದೆ. ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸಿದ್ದರೆ ಒಳ್ಳೆಯದಿತ್ತು. ನಮ್ಮ ವಿಭಾಗದ ಎರಡು ಪತ್ರಿಕೆಗಳು ರದ್ದಾಗಿವೆ. ಪರೀಕ್ಷೆ ಅರ್ಜಿ ಫಾರ್ಮ್ ತುಂಬುವಾಗ ಒಂದು ದಿನ ತಡವಾದರೆ ದಿನಕ್ಕೆ 100 ದಂಡ ಹಾಕುವ ವಿವಿ ಇಂದು ಪ್ರಶ್ನೆ ಪತ್ರಿಕೆ ತಲುಪಿಸುವಲ್ಲಿ ಯಡವಟ್ಟು ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಠಾಣಾಧಿಕಾರಿ ಭೇಟಿ: ವಿದ್ಯಾರ್ಥಿಗಳು ಕಾಲೇಜಿನ ಗೇಟ್‌ ಹೊರಗೆ, ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿ ಮೇಲೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಹಾಲಿಂಗಪುರ ಠಾಣಾಧಿಕಾರಿ ವಿಜಯ ಕಾಂಬಳೆ ಕಾಲೇಜು ಪ್ರಾಚಾರ್ಯ ಬಿ.ಎಂ. ಪಾಟೀಲ್‌ ಅವರನ್ನು ಕರೆಸಿ, ಅವರೊಂದಿಗೆ ಚರ್ಚಿಸಿ ಇದು ಪರೀಕ್ಷಾ ವಿಭಾಗದಿಂದ ಆಗಿರುವ ತೊಂದರೆ. ದಯವಿಟ್ಟು ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಡಲು ವಿನಂತಿಸಿದರು.

ನಂತರ ಚನ್ನಮ್ಮ ವಿವಿಯಿಂದ ಪರೀಕ್ಷೆ ಮುಂದೂಡಿರುವ ಸೂಚನಾ ಪತ್ರ ಬಂದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟು ಮನೆಗೆ ತೆರಳಿದರು.

ಈ ವೇಳೆ ಕೆಎಎಲ್‌ ಸಂಸ್ಥೆಯ ಎಸ್‌ಸಿಪಿ ಪದವಿ ಕಾಲೇಜು ಪ್ರಾಚಾರ್ಯ ಡಾ| ಬಿ.ಎಂ. ಪಾಟೀಲ್‌, ಉಪನ್ಯಾಸಕರಾದ ವಿ.ಎ. ಅಡಹಳ್ಳಿ, ಶಂಕರ ಕೋಳಿ, ಅಭಯ ಉಗಾರೆ, ಎಎಸೈ ಎಲ್‌.ಕೆ. ಅಗಸರ, ಪೇದೆಗಳಾದ ಜೆ.ಜಿ. ಪಾಟೀಲ್‌, ರಾಘವೇಂದ್ರ ಕಾಂಬಳೆ, ಎಬಿವಿಪಿಯ ಅಭಿ ಲಮಾಣಿ, ಮಹಾಲಿಂಗ ಪಾಟೀಲ ಹಾಗೂ ಪತ್ರಿಕೋದ್ಯಮ ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.