
ರಬಕವಿ-ಬನಹಟ್ಟಿ: ರಾಷ್ಟ್ರ ಮಟ್ಟದ ಮಹಿಳಾ ಟೆನಿಸ್ ಬಾಲ್ ಕ್ರಿಕೆಟ್ ಸ್ಪರ್ಧೆ
Team Udayavani, Nov 25, 2022, 10:52 PM IST

ರಬಕವಿ-ಬನಹಟ್ಟಿ : ಬಿಸಿಸಿಐ, ಕರ್ನಾಟಕ ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಬೆಂಗಳೂರು ಹಾಗೂ ರಬಕವಿ-ಬನಹಟ್ಟಿ ತಾಲೂಕಾ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಸಿಯೇಶನ್ ಸಂಯುಕ್ತವಾಗಿ ಏರ್ಪಡಿಸಿರುವ ರಾಷ್ಟ್ರಮಟ್ಟದ ಟೆನ್ನಿಸ್‌ಬಾಲ್ ಕ್ರಿಕೆಟ್ ಚಾಂಪಿಯನ್‌ಶಿಪ್ 2022-23 ಪಂದ್ಯಾವಳಿಯ ಉದ್ಘಾಟನಾ ಸಮಾರಂಭ ನಾಳೆ ಶನಿವಾರ 11ಕ್ಕೆ ಬನಹಟ್ಟಿಯ ಎಸ್‌ಆರ್‌ಏ ಮೈದಾನದಲ್ಲಿ ಆರಂಭಗೊಂಡು ಮೊದಲ ದಿನದಂದು ಎರಡು ರಾಜ್ಯ ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ.
ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಸಿದ್ದು ಸವದಿ ಕಾರ್ಯಕ್ರಮದ ಉದ್ಘಾಟಕರಾಗಿದ್ದು, ತಾಲೂಕು ಘಟಕದ ಅಧ್ಯಕ್ಷ ಪ್ರೊ.ಬಸವರಾಜ ಕೊಣ್ಣೂರ ಅಧ್ಯಕ್ಷತೆ ವಹಿಸಲಿದ್ದಾರೆ.
ರಾಜ್ಯ ಟೆನ್ನಿಸ್‌ಬಾಲ್ ಕ್ರಿಕೆಟ್ ಅಸೋಶಿಯೇಶನ್ ಅಧ್ಯಕ್ಷೆ ಶಾಹಿದಾಬೇಗಂ ಅಬ್ದುಲ್ ಹಕೀಮ್ ಮುಖ್ಯ ಅತಿಥಿಗಳಾಗಿ, ಮಾಜಿ ಸಚಿವೆ ಉಮಾಶ್ರೀ, ನಗರಾಧ್ಯಕ್ಷ ಸಂಜಯ ತೆಗ್ಗಿ, ಡಾ.ಎ.ಆರ್.ಬೆಳಗಲಿ, ಡಾ.ಎಂ.ಎಸ್.ದಡ್ಡೇನವರ, ಸಿದ್ದು ಕೊಣ್ಣೂರ, ಶ್ರೀಶೈಲ ದಳವಾಯಿ, ಅಂಬಾದಾಸ ಕಾಮೂರ್ತಿ, ಸಂಜೀವ ಜೋತಾವರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಪಂದ್ಯಗಳು ಜರುಗಲಿದ್ದು, ಒಟ್ಟು ಏಳು ರಾಜ್ಯಗಳ ಮಹಿಳಾ ತಂಡಗಳು ಪ್ರದರ್ಶನ ನೀಡಲಿವೆ. ಭಾನುವಾರ ಸಮಾರೋಪ ಸಮಾರಂಭ ಜರುಗಲಿದ್ದು, ಅಧ್ಯಕ್ಷತೆಯನ್ನು ಜನತಾ ಶಿಕ್ಷಣ ಸಂಘದ ಅಧ್ಯಕ್ಷ ಬಿ.ಡಿ.ಭದ್ರನ್ನವರ, ಧಾರವಾಡ ಸಾ.ಶಿ.ಇ. ಆಯುಕ್ತ ಎಸ್.ಎಸ್.ಬಿರಾದಾರ ಮುಖ್ಯ ಅತಿಥಿಗಳಾಗಿ ಬೆಳಗಾವಿ ವಲಯದ ಅಧ್ಯಕ್ಷೆ ಗೀತಾಂಜಲಿ ಪಾಟೀಲ, ನಗರ ಯೋಜನಾ ಪ್ರಾದಿಕಾರದ ಅಧ್ಯಕ್ಷ ಬಸವಪ್ರಭು ಹಟ್ಟಿ, ಸಿದ್ಧನಗೌಡ ಪಾಟೀಲ, ಶಂಕರ ಜುಂಜಪ್ಪನವರ, ಸುರೇಶ ಚಿಂಡಕ, ಗಣಪತರಾವ ಹಜಾರೆ, ಮಲ್ಲಿಕಾರ್ಜುನ ನಾಶಿ, ಧರೆಪ್ಪ ಉಳ್ಳಾಗಡ್ಡಿ, ಪರಪ್ಪ ಬಿಳ್ಳೂರ ಅತಿಥಿಗಳಾಗಿ ಆಗಮಿಸಲಿದ್ದಾರೆ. ಈ ಸಂದರ್ಭದಲ್ಲಿ ವಿಜೇತ ತಂಡಕ್ಕೆ ಪಾರಿತೋಷಕ ವಿತರಿಸಲಾಗುತ್ತದೆಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ಮತ ಎಣಿಕೆಗೆ ಎರಡು ದಿನ ಬೇಕೆ ?! ;ಏನು ಕಾಮೆಂಟ್ಸ್ ಗಳು?! ; ಕಿಡಿ ಕಾರಿದ ಉಪೇಂದ್ರ

ಮಂಗಳೂರು: ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ತೆರವುಗೊಳಿಸಲು ಸೂಚನೆ

14 ವರ್ಷದ ಕೆಲಸದ ಅವಧಿಯಲ್ಲಿ 4,512 ಬಾರಿ ಸಿಗರೇಟ್ ಸೇದಿದ ವ್ಯಕ್ತಿಗೆ 11,000 ಡಾಲರ್ ದಂಡ!

ನೀರಿನಲ್ಲಿ ಮುಳುಗುತ್ತಿದ್ದ ಮೂವರ ಪ್ರಾಣ ಉಳಿಸಿದ ನಾಲ್ಕನೇ ತರಗತಿ ವಿದ್ಯಾರ್ಥಿ

ಐಸಿಸಿ ಏಕದಿನ ರ‍್ಯಾಂಕಿಂಗ್ : ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಪ್ರಗತಿ