Israel-Hamas War ಇಸ್ರೇಲ್ ನಲ್ಲಿ ಸಿಲುಕಿದ ರಬಕವಿಯ ಪೂಜಾ! ಆತಂಕದಲ್ಲಿ ತಂದೆ-ತಾಯಿ

ಪ್ರಧಾನಿ ಮೋದಿಯವರೆ ಮಗಳನ್ನು ಸುರಕ್ಷಿತವಾಗಿ ಕರೆಸಿ ಎಂದು ಬೇಡಿಕೊಂಡ ತಂದೆ

Team Udayavani, Oct 10, 2023, 9:12 PM IST

Israel-Hamas War ಇಸ್ರೇಲ್ ನಲ್ಲಿ ಸಿಲುಕಿದ ರಬಕವಿಯ ಪೂಜಾ! ಆತಂಕದಲ್ಲಿ ತಂದೆ-ತಾಯಿ

ಬಾಗಲಕೋಟೆ: ಇಸ್ರೇಲ್ ದೇಶದಲ್ಲಿ ಜಿಲ್ಲೆಯ ರಬಕವಿಯ ಸಾಫ್ಟ್‌ವೇರ್ ಎಂಜಿನಿಯರ್ ಸಿಲುಕಿದ್ದು, ಮಗಳನ್ನು ಸುರಕ್ಷಿತವಾಗಿ ಕರೆಸಿ ಎಂದು ಹೆತ್ತವರು ಪ್ರಧಾನಿ ನರೇಂದ್ರ ಮೋದಿ ಬಳಿ ಮೊರೆ ಇಟ್ಟಿದ್ದಾರೆ.

ರಬಕವಿ ಬನಹಟ್ಟಿ ತಾಲೂಕಿನ ರಬಕವಿ ಪಟ್ಟಣದ ಪೂಜಾ ಸಂಗಪ್ಪ ಉಮದಿ ಎಂಬ ಸಾಫ್ಟ್‌ವೇರ್ ಎಂಜಿನಿಯರ್, ಎರಡು ವರ್ಷಗಳ ಅವಧಿಗೆ ಟಿಸಿಎಸ್ ಕಂಪನಿ ಪರವಾಗಿ ಇಸ್ರೇಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.ಸದ್ಯ ಇಸ್ರೇಲ್ ನಲ್ಲಿ ಯುದ್ಧ ನಡೆಯುತ್ತಿರುವುದನ್ನು ಕೇಳಿ ಹೆತ್ತವರು ತೀವ್ರ ಆತಂಕದಲ್ಲಿದ್ದಾರೆ.

ಪೂಜಾಳ ತಂದೆ ಸಂಗಪ್ಪ ಮತ್ತು ತಾಯಿ ನಿರ್ಮಲಾ ಅವರು, ಮಗಳ ಸುರಕ್ಷತೆ ಹಾಗೂ ಭಾರತಕ್ಕೆ ಮರಳಲಿ ಎಂದು ಬೇಡಿಕೊಳ್ಳುತ್ತಿದ್ದಾರೆ.

ಇಸ್ರೇಲ್ ನ ಗಾಜಾಪಟ್ಟಿಯಿಂದ 300 ಕಿಮೀ ಅಂತರದಲ್ಲಿ ಪೂಜಾ ಇದ್ದು, ಸೈರನ್ ಆದ ತಕ್ಷಣ ಬಂಕರ್ ನಲ್ಲಿ ರಕ್ಷಣೆ ಪಡೆಯುತ್ತಿದ್ದೇವೆ ಎಂದು ಫೋನ್ ಮೂಲಕ ಮಾಹಿತಿ ನೀಡಿದ್ದಾಳೆ ಎಂದು ಪೂಜಾಳ ತಂದೆ ಸಂಗಪ್ಪ ಉಮದಿ ಉದಯವಾಣಿಗೆ ತಿಳಿಸಿದರು.

ನಾನು ಸುರಕ್ಷಿತವಾಗಿದ್ದೇನೆ ಎಂದು ಮಗಳು ಹೇಳುತ್ತಿದ್ದಾಳೆ. ಆದರೆ, ಬಹಳ ಪ್ರೀತಿಯಿಂದ ಸಾಕಿದ ಮಗಳು ಸಂಕಷ್ಟದಲ್ಲಿ ಸಿಲುಕಿರುವುದು ಕೇಳಿ ಆತಂಕವಾಗುತ್ತಿದೆ. ನಮಗೆ ಒಬ್ಬಳೇ ಮಗಳು. ಒಂದೂವರೆ ವರ್ಷದ ಹಿಂದೆ ಇಸ್ರೇಲ್ ಗೆ ಹೋಗಿದ್ದಾಳೆ. ನಿತ್ಯವೂ ಫೋನ್ ಮಾಡಿ ಮಾತಾಡುತ್ತಾಳೆ. ಆದರೂ ನಮಗೆ ತೀವ್ರ ಆತಂಕವಾಗಿದೆ. ಪ್ರಧಾನಿ‌ ಮೋದಿ ಅವರೇ ನಮ್ಮ ನೆರವಿಗೆ ಬರಬೇಕು ಎಂದು ಕೇಳಿಕೊಂಡಿದ್ದಾರೆ. ನಮ್ಮ ಮಗಳು ಪೂಜಾ ಸೇರಿ, ಮೂವರು ಭಾರತೀಯರು ಅಲ್ಲಿದ್ದಾರೆ ಎಂದು ಮಗಳು ತಿಳಿಸಿದ್ದಾಳೆ. ಎಲ್ಲರನ್ನೂ ಸುರಕ್ಷಿತವಾಗಿ ಭಾರತಕ್ಕೆ ಕರೆಸಬೇಕು ಎಂದು ಸಂಗಪ್ಪ ಉಮದಿ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.