ಎಂಜಿನಿಯರ್‌ ನೌಕರಿಗೆ ಬೈ; ಟಗರು ಸಾಕಾಣಿಕೆಗೆ ಸೈ

ಕಡಿಮೆ ಬಂಡವಾಳದ ಶೆಡ್‌ ನಿರ್ಮಿಸಿ ಟಗರು ಸಾಕಾಣಿಕೆ | 40 ಟಗರು ಸಾಕಿ 4 ಲಕ್ಷ ರೂ.ಲಾಭ ಪಡೆದ ರಾಜುಗೌಡ್ರ 

Team Udayavani, Jul 12, 2021, 9:32 PM IST

11 bgk-2a

ಎಚ್‌.ಎಚ್‌.ಬೇಪಾರಿ

ಅಮೀನಗಡ: ಚಿಂತಕಮಲದಿನ್ನಿ ಗ್ರಾಮದ ಬಿಇ ಪದವೀಧರ 36 ವರ್ಷದ ರಾಜುಗೌಡ್ರ ಟಗರು ಸಾಕಾಣಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದು ಇತರರಿಗೂ ಮಾದರಿಯಾಗಿದ್ದಾನೆ.

ಐಟಿ ಖಾಸಗಿ ಕಂಪನಿಯೊಂದರಲ್ಲಿ ಕೈ ತುಂಬಾ ಸಂಬಳ ಪಡೆಯುತ್ತಿದ್ದ ಈತ 12 ವರ್ಷ ನೌಕರಿ ಮಾಡಿ, ಈಗ ಅದನ್ನು ಬಿಟ್ಟು ಸ್ವ ಗ್ರಾಮ ಚಿಂತಕಮಲದಿನ್ನಿಗೆ ಬಂದು ಟಗರು ಸಾಕಾಣಿಕೆ ಮಾಡಿ ಉತ್ತಮ ಲಾಭ ಪಡೆದು ನೆಮ್ಮದಿ ಜೀವನ ನಡೆಸಿದ್ದಾರೆ.

ಕಡಿಮೆ ಬಂಡವಾಳದ ಶೆಡ್‌: ರಾಜುಗೌಡ್ರ ತಮ್ಮ ಸ್ವಂತ 6 ಎಕರೆ ಜಮೀನಿನಲ್ಲಿ 80/30 ಅಡಿ ಅಳತೆ ವಿಸ್ತೀರ್ಣದ ಜಾಗದಲ್ಲಿ ಕಡಿಮೆ ಬಂಡವಾಳ ಹಾಕಿ ಅತ್ಯಂತ ಶಿಸ್ತುಬದ್ಧವಾದ ಶೆಡ್‌ ನಿರ್ಮಿಸಿಕೊಂಡಿದ್ದಾರೆ. ಜಿಲ್ಲೆಯ ಅತ್ಯಂತ ಉತ್ತಮ ಯಳಗ ತಳಿಯ ಬಿಳಿ ಟಗರು ಮರಿಗಳನ್ನು ಅಮೀನಗಡ, ಮುಧೋಳ, ಕೆರೂರನಲ್ಲಿ ನಡೆಯುವ ಕುರಿಸಂತೆಯಲ್ಲಿ ಖರೀದಿಸಿ ತಂದಿದ್ದಾರೆ. ಸುಮಾರು ಒಂದು ವರ್ಷ ಅವುಗಳ ಪಾಲನೆ-ಪೋಷಣೆ ಮಾಡಿ ಒಂದು ವರ್ಷದ ನಂತರ ಅವುಗಳನ್ನು ಮಾರಾಟ ಮಾಡಿ ಉತ್ತಮ ಲಾಭ ಪಡೆಯುತ್ತಿದ್ದಾರೆ.

ಉತ್ತಮವಾಗಿ ಆರೈಕೆ: ಟಗರುಗಳಿಗೆ ತಮ್ಮ ಜಮೀನಿನಲ್ಲಿಯೇ ಬೆಳೆದ ಮೆಕ್ಕೆಜೋಳ, ತೊಗರಿ ಹೊಟ್ಟು,ಸೇಂಗಾ ಹೊಟ್ಟು, ಕಡಲೆ ಹೊಟ್ಟು ಆಹಾರವಾಗಿ ನೀಡಲಾಗುತ್ತಿದೆ. ವಾತಾವರಣಕ್ಕೆ ಅನುಗುಣವಾಗಿ ಡ್ರೈ ಫುಡ್‌, ಲಸಿಕೆ, ಕುಶಬಿ ಹಿಂಡಿ, ಸೇಂಗಾ ಹಿಂಡಿ ನೀಡಲಾಗುತ್ತಿದೆ. ವಿಶೇಷವಾಗಿ ಶೆಡ್‌ನ‌ಲ್ಲಿ ಸ್ವಚ್ಚತೆ ಕಾಪಾಡುವುದರೊಂದಿಗೆ ಹೆಚ್ಚಿನ ಕಾಳಜಿ ವಹಿಸಿ ಆರೈಕೆ ಮಾಡಲಾಗುತ್ತದೆ.

ಬಕ್ರೀದ್‌ನಲ್ಲಿ ಭಾರಿ ಬೇಡಿಕೆ: 6-8 ತಿಂಗಳಿನ ಸುಮಾರು 15ರಿಂದ 20 ಕೆಜಿ ತೂಕವಿರುವ ಟಗರು ಮರಿಗಳನ್ನು ಸುಮಾರು ಒಂದು ವರ್ಷ ಉತ್ತಮವಾಗಿ ಸಾಕಿ ನಂತರ ಬಕ್ರೀದ್‌ ಹಬ್ಬದ ಸಂದರ್ಭದಲ್ಲಿ ಮಾರಿ ಲಕ್ಷಾಂತರ ರೂ. ಲಾಭ ಪಡೆಯಲಾಗುತ್ತದೆ ಎನ್ನುತ್ತಾರೆ ಯುವ ರೈತ ರಾಜುಗೌಡ್ರ.

ಲಕ್ಷಾಂತರ ಲಾಭ: ಈ ವರ್ಷ 8ರಿಂದ 9 ಸಾವಿರ ರೂ.ಗಳಿಗೆ 40 ಟಗರು ಮರಿ ಖರೀದಿ ಮಾಡಿ ಅದನ್ನು ಒಂದು ವರ್ಷ ಸಾಕಿ ಎಲ್ಲ ಖರ್ಚು ವೆಚ್ಚಗಳನ್ನು ತೆಗೆದು ಈ ವರ್ಷ 4 ಲಕ್ಷ ರೂ. ಲಾಭ ಪಡೆದಿದ್ದಾರೆ. ಜತೆಗೆ ಆರು ಎಕರೆ ಜಮೀನಿನಲ್ಲಿ ವಿವಿಧ ರೀತಿಯ ಬೆಳೆ ಮತ್ತು ತರಕಾರಿಗಳನ್ನೂ ಬೆಳೆದು ಇತರರಿಗೂ ಮಾದರಿಯಾಗಿದ್ದಾರೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.