ಜನರ ದಾರಿ ತಪ್ಪಿಸುವ ಕೆಲಸ ಮಾಡಬೇಡಿ: ಬದ್ನೂರ

ವೈದ್ಯಕೀಯ ಕಾಲೇಜಿಗೆ ಶಾಸಕರು ಬರೆದ ಪತ್ರಗಳೆಷ್ಟು ?

Team Udayavani, Apr 4, 2021, 7:12 PM IST

fhghew

ಬಾಗಲಕೋಟೆ: ನಗರಕ್ಕೆ ಘೋಷಣೆ ಯಾಗಿರುವ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಅನುದಾನಕ್ಕೆ ನಮ್ಮದೇನು ತಕರಾರು ಇಲ್ಲ ಎಂದು ಶಾಸಕ ವೀರಣ್ಣ ಚರಂತಿಮಠ ನೀಡಿದ ಹೇಳಿಕೆ ಬಾಲಿಶತನದಿಂದ ಕೂಡಿದೆ ಎಂದು ಕರವೇ ಜಿಲ್ಲಾ ಅಧ್ಯಕ್ಷ ರಮೇಶ ಬದ್ನೂರ ಆರೋಪಿಸಿದ್ದಾರೆ.

ನವನಗರದ ಕಸಾಪ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಏ. 6ರಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ನೇತೃತ್ವದಲ್ಲಿ ಬೃಹತ್‌ ಜನಾಂದೋಲನ ಹೋರಾಟದ ಕುರಿತ ಜಿಲ್ಲೆಯ ವಿವಿಧ ಪಕ್ಷದ ಹಾಗೂ ಸಂಘಟನೆಯ ಮುಖಂಡರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಶಾಸಕ ವೀರಣ್ಣ ಚರಂತಿಮಠ 2018ರಿಂದ ಇಲ್ಲಿಯವರೆಗೆ ಕಾಲೇಜು ಅನುದಾನಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಎಷ್ಟು ಬಾರಿ ಪತ್ರ ಬರೆದಿದ್ದಾರೆ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕು. ಜಿಲ್ಲೆಯ ಬಿಜೆಪಿ ಶಾಸಕರು ಮತ್ತು ಸಂಸದರು ಎಷ್ಟು ಬಾರಿ ಮುಖ್ಯಮಂತ್ರಿಗಳ ಬಳಿ ನಿಯೋಗ ತೆಗೆದುಕೊಂಡು ಹೋಗಿದ್ದೇವೆ ಎಂದು ಸ್ಪಷ್ಟನೆ ನೀಡಬೇಕು.

ಬಜೆಟ್‌ ಅಧಿವೇಶನದಲ್ಲಿ ಕಾಲೇಜು ಆರಂಭಕ್ಕೆ ಮಾತನಾಡಿದ್ದೀರಿ ಎಂಬುದನ್ನು ವಿಡಿಯೋ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು. ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಅದೇ ರೀತಿ ತಾವು ಬಸವೇಶ್ವರ ಸಂಘವನ್ನು ಎಷ್ಟು ಪ್ರೀತಿಯಿಂದ ಬೆಳೆಸುತ್ತಿದ್ದೀರಿ, ಅದೇ ಮಾದರಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿರುವ ಸರಕಾರಿ ವೈದ್ಯಕೀಯ ಕಾಲೇಜನ್ನು ಜಿಲ್ಲೆಗೆ ತಂದು ಜಿಲ್ಲೆಯ ಅಭಿವೃದ್ಧಿಗೆ ಮುಂದಾಗಬೇಕು. ಜಿಲ್ಲೆಯ ಶ್ರಮಿಕರ ಹಾಗೂ ಬಡವರ, ದೀನ ದಲಿತರ, ಪರವಾಗಿ ಧ್ವನಿ ಎತ್ತಿ ಕಾಲೇಜನ್ನು ಆರಂಭಕ್ಕೆ ಮುಂದಾಗಬೇಕು ಎಂದು ವಿನಂತಿಸಿದ್ದೇವೆ ವಿನಃ ನಿಮ್ಮನ್ನು ತೇಜೋವಧೆ ಮಾಡುವ ಉದ್ದೇಶ ನಮ್ಮದಲ್ಲ ಎಂದು ಹೇಳಿದರು.

ಯುವ ಮುಖಂಡ ಸಂತೋಷ ಹೊಕ್ರಾಣಿ ಮಾತನಾಡಿ, ಜಿಲ್ಲೆಗೆ ಮಂಜೂರಾದ ಸರಕಾರಿ ವೈದ್ಯಕೀಯ ಕಾಲೇಜನ್ನು ಮಂಜೂರಿ ಮಾಡಿಸಲು ಪûಾತೀತ ಹೋರಾಟ ಅಗತ್ಯ. ಅದಕ್ಕೆ ನಮ್ಮ ಬೆಂಬಲವಿದೆ. ಕಾರಣ ಜಿಲ್ಲೆಯ ಪ್ರಗತಿಪರ ಚಿಂತಕರು, ಬುದ್ದಿ ಜೀವಿಗಳು, ವಿವಿಧ ಸಂಘಟನೆಯ ಮುಖಂಡರು ಬೃಹತ್‌ ಜನಾಂದೋಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಗೆ ಮಂಜೂರಾದ ಸರಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಸಹಕರಿಸಬೇಕು ಎಂದರು.

ಶಿವರಾಮೇಗೌಡ ಬಣದ ಕರವೇ ಜಿಲ್ಲಾಧ್ಯಕ್ಷ ಬಸನಗೌಡ ಪಾಟೀಲ, ಜಯ ಕರ್ನಾಟಕ ಸಂಘದ ಜಿಲ್ಲಾಧ್ಯಕ್ಷ ಆರ್‌.ಡಿ.ಬಾಬು ಮಾತನಾಡಿದರು. ಪೂರ್ವಭಾವಿ ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಮುಖಂಡ ಅಶೋಕ ಮುತ್ತಿನಮಠ, ನಗರಸಭಾ ಸದಸ್ಯರಾದ ಚೆನ್ನವೀರ ಅಂಗಡಿ, ಲಕ್ಷ್ಮೀ ಚವ್ಹಾಣ, ಕಾಂಗ್ರೆಸ್‌ ಮುಖಂಡರಾದ ಹಣಮಂತ ರಾಕುಂಪಿ, ಗೋವಿಂದ ಬಳ್ಳಾರಿ, ಎಸ್‌.ಎನ್‌. ರಾಂಪುರ, ನಿಂಗಪ್ಪ ಕೋಟಿ, ಮಹೇಶ ಜಾಲವಾದಿ, ಮಂಜುನಾಥ ಮುಚಖಂಡಿ, ಮಂಜುನಾಥ ಪುರತಗೇರಿ, ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಅಮರೇಶ ಕೊಳ್ಳಿ, ಮಹಿಳಾ ಮುಖಂಡರಾದ ಭಾಗ್ಯಶ್ರೀ ಬೆಟಗೇರಿ, ಕರವೇ ಪದಾಧಿಕಾರಿಗಳಾದ ಬಸವರಾಜ ಧರ್ಮಟ್ಟಿ, ಬಸವರಾಜ ಅಂಬಿಗೇರ, ವಿನೂತ ಮೇಲಿನಮನಿ, ಮಲ್ಲು ಕಟ್ಟಿಮನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.