ಅಪ್ಪಟ ಗ್ರಾಮೀಣ ಯುವಪ್ರತಿಭೆ; ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾದ ಹೊನ್ನಪ್ಪ

Team Udayavani, Oct 27, 2022, 8:52 PM IST

15

ಮಹಾಲಿಂಗಪುರ: ಸಾಧಿಸಿಬೇಕೆಂಬ ಛಲ, ಕಠಿಣ ಪರಿಶ್ರಮವಿದ್ದವರಿಗೆ ವಯಸ್ಸು, ಪ್ರದೇಶ, ಅನುಭವಗಳ ಹಂಗಿಲ್ಲದೇ ಕಡಿಮೆ ಅವಧಿತಲ್ಲಿಯೇ ಯಾವ ಕ್ಷೇತ್ರದಲ್ಲಾದರೂ ಸಾಧಿಸಬಲ್ಲರೂ ಎಂಬುದಕ್ಕೆ ಉತ್ತಮ ಮಾದರಿಯಾದವನೇ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಸಮೀಪದ ಮಾರಾಪೂರ ಎಂಬ ಪುಟ್ಟ ಗ್ರಾಮದ ಯುವಪ್ರತಿಭೆ ಉದಯೋನ್ಮುಖ ಸೈಕ್ಲಿಂಗ್ ಕ್ರೀಡಾಪಟು ಹೊನ್ನಪ್ಪ ಚಿದಾನಂದ ಧರ್ಮಟ್ಟಿ.

ಹೌದು ಸಮೀಪದ ಮಾರಾಪೂರ ಗ್ರಾಮದ ಉದಯೋನ್ಮುಖ ಸೈಕ್ಲಿಂಗ್ ಕ್ರೀಡಾಪಟು ಹೊನ್ನಪ್ಪ ಚಿದಾನಂದ ಧರ್ಮಟ್ಟಿ ಅವರು ಇತ್ತಿಚಿಗೆ ಮೈಸೂರಿನಲ್ಲಿ ನಡೆದ 13ನೇ ರಾಜ್ಯ ಸೈಕ್ಲಿಂಗ್ ಚಾಂಪಿಯನ್‍ಷಿಪ್‍ನಲ್ಲಿ 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡು ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ಬರುವ ಡಿಸೆಂಬರ್ ತಿಂಗಳಲ್ಲಿ ಪುಣೆ ಅಥವಾ ಮುಂಬೈನಲ್ಲಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಗಳು ನಡೆಯಲಿವೆ.

ಅಪ್ಪಟ ಗ್ರಾಮೀಣ ಪ್ರತಿಭೆ :

ಬಾಗಲಕೋಟೆ ಜಿಲ್ಲೆಯ ಗಡಿಗ್ರಾಮವಾದ ಮಾರಾಪೂರದ ಮಧ್ಯಮ ಕುಟುಂಬದ ಚಿದಾನಂದ ಮತ್ತು ಶಾಂತಾ ಧರ್ಮಟ್ಟಿ ದಂಪತಿಗಳ ಪುತ್ರನಾದ ಹೊನ್ನಪ್ಪ ಸದ್ಯ 8ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ. ಅಪ್ಪಟ ಗ್ರಾಮೀಣ ಭಾಗದ ಯುವಪ್ರತಿಭೆಯಾಗಿರುವ ಹೊನ್ನಪ್ಪ 1 ರಿಂದ 5ನೇ ತರಗತಿವರೆಗೆ ಸೈದಾಪೂರ-ಸಮೀರವಾಡಿಯ ಸೋಮೈಯಾ ಸಿಬಿಎಸ್‍ಸಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ್ದಾರೆ. ನಂತರ 6ನೇ ತರಗತಿಯಿಂದ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಕಲ್ಯಾಣ ಚಂದರಗಿಯ ಕ್ರೀಡಾ ವಸತಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಮೊದಲಿನಿಂದಲೂ ಬ್ಯಾಟ್ಮಿಟನ್ ಆಟದಲ್ಲಿ ಆಸಕ್ತಿ ಹೊಂದಿದ್ದರೂ ಕೂಡಾ ಕೋವಿಡ್ ಕಾರಣ ಎರಡು ವರ್ಷ ಯಾವುದೇ ಸ್ಪರ್ಧೆಗಳು ನಡೆಯದಿರುವುದು ಹಾಗೂ ಸರಿಯಾದ ಕೋಚ್ ಸಿಗದ ಕಾರಣ ಅನಿವಾರ್ಯವಾಗಿ ಕಳೆದ ಮೂರು ತಿಂಗಳ ಹಿಂದೆಯಿಂದ ಸೈಕ್ಲಿಂಗ್ ತರಬೇತಿಯನ್ನು ಪಡೆಯುತ್ತಿದ್ದಾನೆ.

ಮೂರು ತಿಂಗಳ ಸೈಕ್ಲಿಂಗ್ ಸಾಧನೆ:

8ನೇ ತರಗತಿಯಲ್ಲಿ ಓದುತ್ತಾ ಕಳೆದ ಮೂರು ತಿಂಗಳಿನಿಂದ ಚಂದರಗಿ ಕ್ರೀಡಾವಸತಿ ಶಾಲೆಯ ಸೈಕ್ಲಿಂಗ್ ಕೋಚ್ ಭೀಮಶಿ ವಿಜಯನಗರ ಅವರ ಮಾರ್ಗದರ್ಶನದಲ್ಲಿ ದಿನನಿತ್ಯ ಮುಂಜಾನೆ-ಸಂಜೆ ಸೇರಿ ನಿತ್ಯ 4 ಗಂಟೆಗಳ ಕಠಿಣ ಅಭ್ಯಾಸದ ಫಲವಾಗಿ ಇಂದು ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ತೃತೀಯ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸೈಕ್ಲಿಂಗ್ ಸ್ಪರ್ಧೆಯಲ್ಲಿ ಭಾಗವಹಿಸುತ್ತಿದ್ದಾನೆ. ಈ ಕ್ರೀಡಾಸಾಧನೆಗೆ ಕೇವಲ ಮೂರು ತಿಂಗಳ ಅವಿರತ ಪರಿಶ್ರಮ ಮತ್ತು ಹೊನ್ನಪ್ಪನಲ್ಲಿರುವ ಕ್ರೀಡಾಸಕ್ತಿಯೇ ಕಾರಣ ಎಂಬುವದು ವಿಶೇಷ.

ಹೊನ್ನಪ್ಪನಿಗೆ ಉತ್ತಮ ಭವಿಷ್ಯವಿದೆ: ಹೊನ್ನಪ್ಪ ಕಳೆದ ಮೂರು ವರ್ಷಗಳಿಂದ ನಮ್ಮ ಶಾಲೆಯ ವಿದ್ಯಾರ್ಥಿ. ಕಳೆದ ಮೂರು ತಿಂಗಳಿನಿಂದ ಸೈಕ್ಲಿಂಗ್ ಕ್ರೀಡೆಯಲ್ಲಿ ಆತ ತೊಡಗಿಸುಕೊಂಡಿರುವ ಆಸಕ್ತಿ, ಸಾಧಿಸಬೇಕೆಂಬ ಛಲ, ಕಠಿಣ ಪರಿಶ್ರಮ, ನಿರಂತರ ಅಭ್ಯಾಸ, ಶಾಲೆ ಮತ್ತು ಇವರ ತಂದೆಯವರ ಪ್ರೋತ್ಸಾಹ-ಸಹಕಾರದಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ತರಬೇತಿ ಪಡೆದ ಕ್ರೀಡಾಪಟುಗಳೊಂದಿಗೆ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಇಂದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಉತ್ತಮ ಭವಿಷ್ಯವಿರುವ ಹೊನ್ನಪ್ಪ 12 ತರಗತಿ ಮುಗಿಯುವರೆಗೆ ನಮ್ಮ ಶಾಲೆಯಲ್ಲಿಯೇ ಇರುವದರಿಂದ, ಪಿಯುಸಿ ಮುಗಿಯುವದರೊಳಗೆ ಇಂಡಿಯಾ ಬೆಸ್ಟ್ ಸೈಕ್ಲಿಂಗ್ ರೈಡರ್ ಆಗುತ್ತಾನೆ ಎಂಬ ವಿಶ್ವಾಸವಿದೆ. -ಭೀಮಶಿ ವಿಜಯನಗರ, ಸೈಕ್ಲಿಂಗ್ ತರಬೇತಿದಾರರು, ಕ್ರೀಡಾ ವಸತಿ ಶಾಲೆ, ಕೆ.ಚಂದರಗಿ.

ಮಗನ ಕ್ರೀಡಾಸಕ್ತಿಗೆ ಪ್ರೋತ್ಸಾಹ ನಮ್ಮ ಕರ್ತವ್ಯ: ಮೊದಲ ಗಂಡು ಮಗನಾದ ಹೊನ್ನಪ್ಪ ಸೈಕ್ಲಿಂಗ್ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದಾನೆ. ಅವರ ಅಭಿರುಚಿ, ಕ್ರೀಡಾಸಕ್ತಿಗೆ ಪೋಷಕರಾಗಿ ಬೆಂಬಲಿಸುತ್ತಿದ್ದೇವೆ. ಇಂದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದು ನಮಗೆ ಮತ್ತು ನಮ್ಮ ಗ್ರಾಮಕ್ಕೆ ಹೆಮ್ಮೆಯ ಸಂಗತಿ. ಭವಿಷ್ಯದ ಅವನ ಕ್ರೀಡಾ ಜೀವನಕ್ಕೆ ಬೇಕಾದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ನೀಡಲು, ಪಾಲಕರಾಗಿ ನಮ್ಮ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ. – ಶಾಂತಾ ಮತ್ತು ಚಿದಾನಂದ ಧರ್ಮಟ್ಟಿ, ಹೊನ್ನಪ್ಪನ ಹೆತ್ತವರು  

ಚಂದ್ರಶೇಖರ ಮೋರೆ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.