ಮೂರು ದಿನದಲ್ಲಿ 1533 ಜನರ ಸ್ಯಾಂಪಲ್‌ ರವಾನೆ

Team Udayavani, May 27, 2020, 2:16 PM IST

ಮೂರು ದಿನದಲ್ಲಿ 1533 ಜನರ ಸ್ಯಾಂಪಲ್‌ ರವಾನೆ

ಬಾಗಲಕೋಟೆ: ರಾಜ್ಯದ ವಿವಿಧ ಜಿಲ್ಲೆಗಳಿಗೆ ಮಹಾರಾಷ್ಟ್ರದಿಂದ ಮರಳಿದ ವಲಸೆ ಕಾರ್ಮಿಕರು ಸಹಿತ ಹಲವು ವ್ಯಕ್ತಿಗಳಲ್ಲಿ ಕೋವಿಡ್  ಪಾಸಿಟಿವ್‌ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಗೂ ಬಂದಿರುವ ವ್ಯಕ್ತಿಗಳ ಸಾಮೂಹಿಕ ತಪಾಸಣೆಗೆ ಜಿಲ್ಲಾಡಳಿತ ಮುಂದಾಗಿದೆ.

ಕೋವಿಡ್  ಪಾಸಿಟಿವ್‌ ಬಂದ್‌ ವ್ಯಕ್ತಿಗಳಲ್ಲಿ ಸೋಂಕಿನ ಯಾವುದೇ ಲಕ್ಷಣಗಳೂ ಕಾಣದ ಹಿನ್ನೆಲೆಯಲ್ಲಿ ಅವರನ್ನು ಪತ್ತೆ ಮಾಡುವುದು ತೀವ್ರ ಭೀತಿ ಉಂಟು ಮಾಡಿದೆ. ಹೀಗಾಗಿ ಮಹಾರಾಷ್ಟ್ರದಿಂದ ಆಗಮಿಸಿ, ಸದ್ಯ ಕ್ವಾರಂಟೈನ್‌ ಕೇಂದ್ರದಲ್ಲಿ ಇರುವ ಬಹುತೇಕ ಜನರ ಗಂಟಲು ದ್ರವ ತಪಾಸಣೆಗೆ ಕಳುಹಿಸಲಾಗುತ್ತಿದೆ. ಕಳೆದ ಮೂರು ದಿನಗಳಲ್ಲಿ ಜಿಲ್ಲೆಯಿಂದ ಒಟ್ಟು 1533 ಸ್ಯಾಂಪಲ್‌ ತಪಾಸಣೆಗೆ ಕಳುಹಿಸಿದ್ದು, ವರದಿ ನಿರೀಕ್ಷೆಯಲ್ಲಿ ಜಿಲ್ಲಾಡಳಿತವಿದೆ. ಎರಡು ದಿನಗಳಿಂದ ಜಿಲ್ಲೆಯಿಂದ ಕಳುಹಿಸಲಾಗಿದ್ದ 978 ಸ್ಯಾಂಪಲ್‌ಗ‌ಳ ವರದಿ ಬರಬೇಕಾಗಿದ್ದು, ಮಂಗಳವಾರ ಮತ್ತೆ ಹೊಸದಾಗಿ 555 ಸ್ಯಾಂಪಲ್‌ ರವಾನಿಸಲಾಗಿದೆ.

ಬಾಕಿ 978 ಹಾಗೂ ಹೊಸ ಸ್ಯಾಂಪಲ್‌ 555 ಸೇರಿ ಒಟ್ಟು 1533 ಸ್ಯಾಂಪಲ್‌ಗ‌ಳ ವರದಿ ಬರಬೇಕಿದೆ. ಸಧ್ಯ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ 2343 ಜನರ ಮೇಲೆ ನಿಗಾ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ|ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 7,197 ಸ್ಯಾಂಪಲ್‌ ಪರೀಕ್ಷೆಗೆ ಕಳುಹಿಸಲಾಗಿದೆ. ಈ ಪೈಕಿ 5,557 ನೆಗೆಟಿವ್‌ ಬಂದಿದ್ದು, 77 ಜನರಿಗೆ ಪಾಸಿಟಿವ್‌ ಬಂದಿದೆ. ಓರ್ವ ವ್ಯಕ್ತಿ ಕೋವಿಡ್ ದಿಂದ ಮೃತಪಟ್ಟಿದ್ದಾರೆ. ಕೋವಿಡ್  ಸೋಂಕು ತಗುಲಿದ್ದ 62 ಜನ ಗುಣಮುಖರಾಗಿ, ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದಾರೆ. ಇನ್ನು 14 ಜನರಿಗೆ ಕೋವಿಡ್‌-19 ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಇನ್ನು 6 ಕಂಟೈನ್‌ಮೆಂಟ್‌ ಝೋನ್‌ಗಳಿವೆ. ಇಲ್ಲಿವರೆಗೆ ಒಟ್ಟು 13 ಸ್ಯಾಂಪಲ್‌ಗ‌ಳು ಮಾತ್ರ ರಿಜೆಕ್ಟ್ ಆಗಿರುತ್ತವೆ. 14 ದಿನಗಳ ಕಾಲ ಇನ್‌ಸ್ಟಿಟ್ಯೂಶನ್‌ ಕ್ವಾರಂಟೈನ್‌ನಲ್ಲಿದ್ದ 399 ಜನ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ. ಜಿಲ್ಲೆಯಲ್ಲಿ ಸ್ಥಾಪಿಸಲಾದ 9 ಚೆಕ್‌ಪೋಸ್ಟ್‌ಗಳ ಪೈಕಿ 4 ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸುತ್ತಿವೆ. ಇಲ್ಲಿವರೆಗೆ ಚೆಕ್‌ಪೋಸ್ಟ್‌ಗಳ ಮೂಲಕ 54066 ವಾಹನಗಳ ತಪಾಸಣೆ ಹಾಗೂ 2,08,886 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain: ಬಾಗಲಕೋಟೆಯ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

Heavy Rain: ಬಾಗಲಕೋಟೆ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 26) ರಜೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

ರಬಕವಿ-ಬನಹಟ್ಟಿ: ಭೋರ್ಗರೆಯುತ್ತಿರುವ ಕೃಷ್ಣೆ… ಪ್ರವಾಹ ಭೀತಿಯಲ್ಲಿ ಜನತೆ

Fetoside

Bagalakote: ಸರಕಾರಿ ವೈದ್ಯೆಯಿಂದಲೇ ಭ್ರೂಣಹತ್ಯೆ!

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

Mudhol ಸಾವಿರ ಶ್ರೀಗಂಧ ಸಸಿಗಳ ಸರದಾರ; ಅರಣ್ಯ ಕೃಷಿಯಲ್ಲಿ ಖುಷಿ ಜೀವನ ಕಂಡ‌‌ ನಾಗಪ್ಪ

4-

Mahalingpur: ಘಟಪ್ರಭಾ ನದಿಗೆ ಹೆಚ್ಚಿದ ನೀರು: ಮೂರು ಸೇತುವೆಗಳು ಜಲಾವೃತ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.