ಶಂಕರಾಚಾರ್ಯರ ಜಯಂತಿ; ಸರಳ ಆಚರಣೆ
Team Udayavani, Apr 29, 2020, 4:08 PM IST
ಬಾಗಲಕೋಟೆ: ಕೋವಿಡ್ 19 ಭೀತಿ ಹಿನ್ನಲೆಯಲ್ಲಿ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಜಿಲ್ಲಾಡಳಿತದ ವತಿಯಿಂದ ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
ಮಂಗಳವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಪಂ ಸಿಇಒ ಗಂಗೂಬಾಯಿ ಮಾನಕರ, ಅಪರ ಜಿಲ್ಲಾ ಧಿಕಾರಿ ಮಹಾದೇವ ಮುರಗಿ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಟ ನಮನ ಅರ್ಪಿಸಿದರು. ಜಿಲ್ಲಾ ಕೃಷಿ ಜಂಟಿ ನಿರ್ದೇಕಿ ಚೇತನಾ ಪಾಟೀಲ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಶಿರೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.