ಸಿದ್ದರಾಮಯ್ಯಗೆ ಮತ್ತಷ್ಟು ಶಾಸಕರು ಪಕ್ಷ ಬಿಡುವ ಹತಾಶೆ: ಗೋವಿಂದ ಕಾರಜೋಳ

Team Udayavani, Nov 1, 2020, 1:08 PM IST

ಸಿದ್ದರಾಮಯ್ಯಗೆ ಮತ್ತಷ್ಟು ಶಾಸಕರು ಪಕ್ಷ ಬಿಡುವ ಹತಾಶೆ: ಗೋವಿಂದ ಕಾರಜೋಳ

ಬಾಗಲಕೋಟೆ: ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಪಕ್ಷ ಬಿಡುವ ಭೀತಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗಿದೆ. ಹೀಗಾಗಿ ಹತಾಶೆಗೊಂಡಿರುವ ಅವರು ಏನೇನೋ ಹೇಳುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ ಹೋಗಿರುವ ಎಲ್ಲ ಶಾಸಕರಿಗೆ ಉಪಚುನಾವಣೆಯ ಬಳಿಕ ನಾಯಿಪಾಡು ಆಗಲಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಕಾರಜೋಳ, ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಎಲ್ಲ ಶಾಸಕರಿಗೆ ಸಚಿವ ಸ್ಥಾನ ನೀಡುವ ಜತೆಗೆ ಗೌರವಯುತವಾಗಿ ನಡೆಸಿಕೊಳ್ಳಲಾಗಿದೆ ಎಂದರು.

ಕಾಂಗ್ರೆಸ್‌ನ ಇನ್ನಷ್ಟು ಶಾಸಕರು ಆ ಪಕ್ಷ ಬಿಡುವ ಭೀತಿ ಸ್ವತಃ ಸಿದ್ದರಾಮಯ್ಯ ಅವರಿಗಿದೆ. ಹೀಗಾಗಿ ಹತಾಶೆಗೊಂಡು ಈ ರೀತಿ ಹೇಳುತ್ತಿದ್ದಾರೆ. ನಾವು ಕಾಂಗ್ರೆಸ್‌ನ ಇನ್ನಷ್ಟು ಶಾಸಕರನ್ನು ಕರೆತರುವ ಕೆಲಸ ಮಾಡಲ್ಲ. ಆದರೆ, ಯಾರೇ ಬಂದರೂ ಪಕ್ಷ ಅವರನ್ನು ಕರೆದುಕೊಳ್ಳುತ್ತದೆ. ಪಕ್ಷ ಬೆಳೆಯಬೇಕು. ಬಿಜೆಪಿ ನಿಂತ ನೀರಲ್ಲ ಎಂದು ಹೇಳಿದರು.

ತನ್ವೀರ್ ಶೇಠ್‌ಗೆ ನರಿ ಕಥೆ ಪರಿಸ್ಥಿತಿ

ಉಪಚುನಾವಣೆ ಬಳಿಕ ಬಿಜೆಪಿ ಸರ್ಕಾರ ಬೀಳುತ್ತದೆ ಎಂದು ಹೇಳಿರುವ ಮಾಜಿ ಸಚಿವ ತನ್ವೀರ್ ಶೇಠ್‌ರನ್ನು ನರಿ ಕಥೆಗೆ ಹೋಲಿಸಿದ ಕಾರಜೋಳ, ಹೋರಿಯೊಂದು ಮುಂದೆ ಹೋಗುತ್ತಿರುತ್ತದೆ. ಅದರ ಹಿಂದೆ ನರಿ ಬೆನ್ನು ಹತ್ತಿ, ಹೋರಿ ಬಾಯಿಯಿಂದ ಬೀಳುವ ಅನ್ನ ತಿನ್ನಲು ಹಾತೋರೆಯುತ್ತದೆ. ಹೋರಿಯ ಬಾಯಿಯಿಂದ ಏನೂ ಬೀಳಲ್ಲ, ನರಿಗೆ ಏನೂ ಸಿಗುವುದೂ ಇಲ್ಲ. ಈ ಕಥೆಯಂತೆ ತನ್ವೀರ ಶೇಠ್ ಹೇಳುತ್ತಲೇ ಹೋಗುತ್ತಾರೆ. ಸರ್ಕಾರ ಬೀಳುವುದಿಲ್ಲ ಎಂದರು.

ನ್ಯಾ.ಸದಾಶಿವ ವರದಿ ಬಗ್ಗೆ ಸಂಪುಟದಲ್ಲಿ ಚರ್ಚೆ

ನ್ಯಾ.ಸದಾಶಿವ ಆಯೋಗದ ವರದಿ ಕುರಿತು ಬರುವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ ಎಂದು ಪ್ರಶ್ನೆಯೊಂದಕ್ಕೆ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.