ವಿದ್ಯಾರ್ಥಿಗಳ ಮಾನಸಿಕ -ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ 


Team Udayavani, Sep 21, 2018, 3:17 PM IST

21-sepctember-16.jpg

ಬಾಗಲಕೋಟೆ: ವಿದ್ಯಾರ್ಥಿಗಳು ಹಾಗೂ ಬೆಳೆಯುವ ಮಕ್ಕಳು ದೈಹಿಕ, ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅವಶ್ಯ ಎಂದು ಶಾಸಕ ಡಾ| ವೀರಣ್ಣ ಚರಂತಿಮಠ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಿಇಒ ಕಚೇರಿ ಆಶ್ರಯದಲ್ಲಿ ಗುರುವಾರ ಹಮ್ಮಿಕೊಂಡ ಪ್ರಾಥಮಿಕ ಹಾಗೂ ಪ್ರೌಢಶಾಲಾ ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯಿಂದ ತಮಗರಿವಿಲ್ಲದೇ ದೇಹದ ಅಂಗಾಂಗಗಳು ತಂತಾನೆ ಪುಷ್ಟಿಗೊಂಡು ಸುಂದರ ಕಾಯವಾಗುವುದು. ಇದನ್ನು ಗಮನಿಸಿದ ಪ್ರಧಾನಿ ಮೋದಿ ಮಕ್ಕಳಿಗೆ ಬೌದ್ಧಿಕ ಹಾಗೂ ಕ್ರೀಡೆಗೆ ಪ್ರೋತ್ಸಾಹಕ ಯೋಜನೆ ಜಾರಿಗೆ ತಂದಿದ್ದಾರೆ. ಅಲ್ಲದೇ ಸ್ವಚ್ಛತೆ, ಶಿಸ್ತು, ದಕ್ಷತೆ ಮಕ್ಕಳಿಂದಲೇ ಆರಂಭಗೊಳ್ಳಲಿ ಎಂಬ ಉದ್ದೇಶದಿಂದ ಸ್ವಚ್ಛ ಭಾರತ ಯೋಜನೆ ಜಾರಿಗೆ ತಂದಿದ್ದಾರೆ ಎಂದರು.

ಇಂತಹ ಹಲವು ಸಣ್ಣ ವಿಷಯಗಳಿಗೂ ಪ್ರಧಾನಿ ಮೋದಿ ಹೆಚ್ಚಿನ ಗಮನ ಹರಿಸಿ, ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುತ್ತಿದ್ದಾರೆ. ವಿದ್ಯಾರ್ಥಿಗಳಿಗಾಗಿಯೇ ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ದೇಶದ ಅತೀ ಹಿಂದುಳಿದ ಹಾಗೂ ಅಭಿವೃದ್ಧಿ ಹಂತದಲ್ಲಿರುವ ಇಲಾಖೆಗಳಿಗಾಗಲಿ, ಜನರಿಗಾಗಲಿ ಅಂಗನವಾಡಿ ಕಾರ್ಯಕರ್ತೆಯಿಂದ ಹಿಡಿದು ಆಶಾ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ ಇಂತಹ ಸಣ್ಣ ವಿಷಯಗಳನ್ನು ಅಡಗಿರುವ ಮಹತ್ವ ತಿಳಿಸಿದ್ದಾರೆ ಎಂದರು. ಗ್ರಾಮೀಣ ಕ್ರೀಡೆಗಳಾದ ಮಲ್ಲ ಕಂಬ, ಖೋ ಖೋ ಕಬಡ್ಡಿಗಳಂತಹ ದೇಶಿ ಕ್ರೀಡೆಗೆ ಹೆಚ್ಚು ಒತ್ತು ನೀಡಬೇಕಾಗಿದ್ದು, ಈ ಹಿಂದೆ ಮಲ್ಲ ಕಂಬ ಸ್ಪರ್ಧೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ದಸರಾ ಪ್ರಶಸ್ತಿ ತಂದಿದ್ದು, ಜಿಲ್ಲೆಯ ಹೆಮ್ಮೆಯ ವಿಷಯ. ವಿದ್ಯಾರ್ಥಿಗಳು ಅಂತಹ ಕ್ರೀಡೆಗಳತ್ತ ಗಮನಹರಿಸಬೇಕು ಎಂದರು. ದೈಹಿಕ ಶಿಕ್ಷಕರು ಕ್ರೀಡೆಗಾಗಿ ಶ್ರಮ ವಹಿಸಿದ್ದು, 2008ರಲ್ಲಿ ಬಡ್ತಿ ಹೊರತುಪಡಿಸಿದರೆ ಇಲ್ಲಿಯವರೆಗೆ ಅವರ ಬಡ್ತಿ ಆಗಲಾರದನ್ನು ಸರಕಾರದ ಗಮನಕ್ಕೆ ಕೂಡಲೇ ತರುವುದಾಗಿ ಹೇಳಿದರು.

ತಾಪಂ ಅಧ್ಯಕ್ಷ ಚನ್ನನಗೌಡರ ಪರನಗೌಡರ ಮಾತನಾಡಿ, ಕ್ರೀಡಾಕೂಟಕ್ಕೆ ತಾಲೂಕಿನಿಂದ 23 ವಿದ್ಯಾರ್ಥಿಗಳು ಆಯ್ಕೆಯಾಗಿದ್ದು ಸಂತಸದ ವಿಷಯ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ, ರಾಷ್ಟ್ರ ಮಟ್ಟದವರೆಗೂ ಸ್ಪರ್ಧಿಸಿ ಕೀರ್ತಿ ತರಬೇಕೆಂದು ಸಲಹೆ ನೀಡಿದರು. ಡಿಡಿಪಿಐ ಎಂ.ಆರ್‌. ಕಾಮಾಕ್ಷಿ ಮಾತನಾಡಿ, ಮಕ್ಕಳಲ್ಲಿ ಹುದುಗಿದ ಕ್ರೀಡಾ ಸಾಮರ್ಥ್ಯ ಹೊರ ಹಾಕಲು ಇಂತಹ ಸ್ಪರ್ಧೆಗಳು ಅವಶ್ಯ. ಸರಕಾರ ಅದಕ್ಕಾಗಿ ಪ್ರತಿಭಾ ಪುರಸ್ಕಾರ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡಿದೆ ಎಂದರು. ಕ್ಷೇತ್ರ ಶಿಕ್ಷಣಾಧಿ ಕಾರಿ ದೊಡ್ಡಬಸಪ್ಪ ನೀರಲಕೇರಿ, ದೈಹಿಕ ಶಿಕ್ಷಣ ಪರಿವೀಕ್ಷಕ ಎಂ.ಎಸ್‌. ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಬಿ.ವಿ. ಪಾಟೀಲ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.