ಒತ್ತಡ ನಿವಾರಣೆಗೆ ಕ್ರೀಡೆ ಅವಶ್ಯ


Team Udayavani, Jan 6, 2019, 10:35 AM IST

6-january-20.jpg

ಬಾಗಲಕೋಟೆ: ಇಂದು ಪ್ರತಿಯೊಬ್ಬರು ಒತ್ತಡದ ಬದುಕಿನಲ್ಲಿ ಸಾಗುತ್ತಿದ್ದೇವೆ. ಅದಕ್ಕೆ ಪ್ರತಿನಿತ್ಯ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ಪಾಲ್ಗೊಂಡು ಒ್ತತಡ ನಿವಾರಣೆ ಮಾಡಿಕೊಳ್ಳಬೇಕು ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು. ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 11ನೇ ರಾಜ್ಯ ಮಟ್ಟದ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಆಯ್ಕೆ ಪ್ರಕ್ರಿಯೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಆವರು ಮಾತನಾಡಿದರು.

ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವುದರಿಂದ ಒತ್ತಡ, ಸಮಸ್ಯೆಗಳಿದ್ದರೂ ನಿವಾರಣೆ ಮಾಡಬಹುದಾಗಿದೆ. ಕ್ರೀಡೆಯಲ್ಲಿ ಸೋಲು ಗೆಲವು ಸಹಜ. ಅವುಗಳನ್ನು ಸಮನಾಗಿ ಸ್ವೀಕರಿಸುವ ಮನೋಭಾವ ಬೆಳೆಸಿಕೊಳ್ಳಬೇಕು. 11ನೇ ರಾಜ್ಯ ಮಟ್ಟದ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಆಯ್ಕೆ ಪ್ರಕ್ರಿಯೆ ತೀರ್ಪುಗಾರರು ಕ್ರೀಡಾಪಟುಗಳ ಪ್ರತಿಭೆ ಪರಿಗಣಿಸಿ ತೀರ್ಪು ನೀಡಬೇಕು. ಪ್ರತಿಭೆಗಳಿಗೆ ಹೆಚ್ಚಿನ ಒತ್ತು ನೀಡಿ ಅವರ ಸಾಧನೆಗೆ ಬೆನ್ನು ತಟ್ಟಬೇಕು ಎಂದು ತಿಳಿಸಿದರು.

ಬಾಗಲಕೋಟೆ-ವಿಜಯಪುರದ ಸೈಕ್ಲಿಂಗ್‌ ಕ್ರೀಡಾಪಟುಗಳು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆ ತೋರಿ ಸಾಧನೆ ಮಾಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಸೈಕ್ಲಿಸ್ಟ್‌ಗಳು ಹೆಚ್ಚು ಇರುವುದರಿಂದ ಆವರ ಸಾಧನೆಗೆ ಪೂರಕವಾಗಿರುವ ಟ್ರ್ಯಾಕ್‌ ಸೆ„ಕ್ಲಿಂಗ್‌ ಕ್ರೀಡಾಕೂಟ ಆಯೋಜಿಸಬೇಕು. ಇದರಿಂದ ಆವರ ಸಾಮರ್ಥ್ಯ ತಿಳಿಯುತ್ತದೆ ಎಂದರು. ಕರ್ನಾಟಕ ರಾಜ್ಯ ಅಮೆಚೂರ್‌ ಸೈಕ್ಲಿಂಗ್‌ ಅಸೋಸಿಯೇಷನ್‌ ಕಾರ್ಯದರ್ಶಿ ಶ್ರೀಶೈಲ್‌ ಎಂ. ಕುರಣಿ ಮಾತನಾಡಿ, 11ನೇ ರಾಜ್ಯ ಮಟ್ಟದ ಟ್ರ್ಯಾಕ್‌ ಸೈಕ್ಲಿಂಗ್‌ ಚಾಂಪಿಯನ್‌ಶಿಪ್‌ ಆಯ್ಕೆ ಪ್ರಕ್ರಿಯೆಯಲ್ಲಿ ಬಾಲಕರು ಮತ್ತು ಬಾಲಕಿಯರು ಸೇರಿ ಒಟ್ಟು 129 ಸೈಕ್ಲಿಂಗ್‌ ಕ್ರೀಡಾಪಟುಗಳು ಪಾಲ್ಗೊಂಡಿದ್ದಾರೆ. 16 ವೈಯಕ್ತಿಕ, 10 ಗುಂಪು ಸ್ಪರ್ಧೆಗಳು ನಡೆಯಲಿವೆ ಎಂದು ಹೇಳಿದರು.

129 ಕ್ರೀಡಾಪಟುಗಳಲ್ಲಿ ರಾಷ್ಟ್ರೀಯ ಸೈಕ್ಲಿಂಗ್‌ಗೆ 30 ಜನರ ರಾಜ್ಯ ತಂಡ ರಚನೆ ಮಾಡಿ ರಾಷ್ಟ್ರೀಯ ಮಟ್ಟಕ್ಕೆ ಕಳಿಸುವ ಕಾರ್ಯಮಾಡಲಾಗುವುದು. ರಾಜ್ಯದ ಸೈಕ್ಲಿಸ್ಟ್‌ಗಳು ಅಂತಾರಾಜ್ಯವಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡಿದ್ದಾರೆ. 2018ರಲ್ಲಿ ಪುಣಾ, ಹರಿಯಾಣಾದಲ್ಲಿ ನಡೆದ ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಕರ್ನಾಟಕದ ಸೈಕ್ಲಿಸ್ಟ್‌ಗಳು ಸಮಗ್ರ ವೀರಾಗ್ರಣಿ ಪ್ರಶಸ್ತಿ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಅಮೆಚೂರ್‌ ಸೈಕ್ಲಿಂಗ್‌ ಅಸೋಸಿಯೇಶ‌ನ್‌ ಅಧ್ಯಕ್ಷ ಶ್ರೀಧರ ಗೋರೆ, ಉಪಾಧ್ಯಕ್ಷ ಆರ್‌.ಎಚ್. ಪೂಜಾರ, ರಾಜ್ಯ ಅಮೆಚೂರ್‌ ಸೈಕ್ಲಿಂಗ್‌ ಅಸೋಸಿಯೇಷನ್‌ ಜಿಲ್ಲಾ ಅಧ್ಯಕ್ಷ ಯಂಕಪ್ಪ ಎಂಟೆತ್ತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪಿ.ಎಂ. ಸರಶೆಟ್ಟಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.