ಮೂರು ಏತ ನೀರಾವರಿ ಯೋಜನೆಗೆ ಸಿಎಂ ಚಾಲನೆ

Team Udayavani, Apr 23, 2022, 3:49 PM IST

11

ಬಾಗಲಕೋಟೆ: ಜಿಲ್ಲೆಯಲ್ಲಿ ಮೂರು ಪ್ರಮುಖ ನದಿಗಳು ಹರಿದರೂ ಕಾಲುವೆ ನಿರ್ಮಾಣಗೊಂಡರೂ ನೀರಿನ ಲಭ್ಯತೆ ಇಲ್ಲದೇ ನೀರಾವರಿಯಿಂದ ವಂಚಿತವಾಗಿದ್ದ ಭೂಮಿಗೆ ನೀರಾವರಿ ಕಲ್ಪಿಸುವ ಮೂರು ಪ್ರಮುಖ ಏತ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.

ಸುಮಾರು 528 ಕೋಟಿ ಮೊತ್ತದ, ಬಾದಾಮಿ ಹಾಗೂ ಬೀಳಗಿ ಮತಕ್ಷೇತ್ರಗಳ 39 ಹಳ್ಳಿಗಳ, 40 ಸಾವಿರ ಎಕರೆ ಭೂಮಿಗೆ ನೀರಾವರಿ ಕಲ್ಪಿಸುವ ಕೆರೂರ ಏತ ನೀರಾವರಿ ಯೋಜನೆಗೆ ಬಾದಾಮಿ ತಾಲೂಕಿನ ಉಗಲವಾಟದಲ್ಲಿ ಭೂಮಿಪೂಜೆ ನೆರವೇರಿಸಿದರೆ, ಘಟಪ್ರಭಾ ಯೋಜನೆಯಡಿ ನೀರಿನ ಹಂಚಿಕೆ ಇದ್ದರೂ ಕಾಲುವೆ ನಿರ್ಮಾಣಗೊಂಡರೂ ನೀರಿನ ಕೊರತೆ ಎದುರಿಸುತ್ತಿದ್ದ ಮುಧೋಳ, ಮಹಾಲಿಂಗಪುರ ಭಾಗದ 22198.57 ಹೆಕ್ಟೇರ್‌ ಭೂಮಿಗೆ ನೀರಾವರಿ ಕಲ್ಪಿಸುವ 266 ಕೋಟಿ ಮೊತ್ತದ ಸಸಾಲಟ್ಟಿ ಶಿವಲಿಂಗೇಶ್ವರ ಏತ ನೀರಾವರಿ, ಘಟಪ್ರಭಾ ಎಡದಂಡೆ ಕಾಲುವೆ ಕೊನೆಯಂಚಿನ 103 ಕಿ.ಮೀ ಕೆಳ ಭಾಗದಲ್ಲಿ ಒಟ್ಟು 12007.14 ಹೆಕ್ಟೇರ್‌ ಭೂಮಿಗೆ ನೀರಾವರಿ ಕಲ್ಪಿಸುವ 228 ಕೋಟಿ ಮೊತ್ತದ ಮಂಟೂರ ಮಹಾಲಕ್ಷ್ಮೀ ಯೋಜನೆಗೆ ಮೂಧೋಳದಲ್ಲಿ ಭೂಮಿಪೂಜೆ ನೆರವೇರಿಸಿದರು.

ಮುಧೋಳ ಮತಕ್ಷೇತ್ರ ವ್ಯಾಪ್ತಿಯಲ್ಲಿ ಎರಡು ಏತ ನೀರಾವರಿ ಯೋಜನೆ, ವರ್ತುಲ ರಸ್ತೆ, ಘಟಪ್ರಭಾ ನದಿಗೆ ಬ್ಯಾರೇಜ್‌, ವಿವಿಧ ಸಮುದಾಯ ಭವನ ಸಹಿತ ಸುಮಾರು 1500ಕ್ಕೂ ಹೆಚ್ಚು ಕೋಟಿ ಅನುದಾನ 18 ಕಾಮಗಾರಿಗಳ ಉದ್ಘಾಟನೆ ಹಾಗೂ 36 ಹೊಸ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಭೂಮಿಪೂಜೆ ನೆರವೇರಿಸಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ನನ್ನ ಕ್ಷೇತ್ರದ ಸವಣೂರ ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡಿ ಭೂಮಿಪೂಜೆಯೂ ನೆರವೇರಿಸಿದ್ದರು. ಆಗ ಶಾಸಕನಾಗಿ ನಾನು ಆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದೆ. ನಾನು ಕನಸು-ಮನಸ್ಸಿನಲ್ಲೂ ಅಂದುಕೊಂಡಿರಲಿಲ್ಲ. ಇಂದು ಅದೇ ಸಿದ್ದರಾಮಯ್ಯ ಅವರ ಕ್ಷೇತ್ರದ ಕೆರೂರ ಏತ ನೀರಾವರಿ ಯೋಜನೆಗೆ ನಾನು ಭೂಮಿಪೂಜೆ ನೆರವೇರಿಸುತ್ತಿದ್ದೇನೆ. ಅವರು ಅಧ್ಯಕ್ಷತೆ ವಹಿಸಿಕೊಂಡಿದ್ದಾರೆ. ಈ ಯೋಜನೆಗೆ 2019-20ರಲ್ಲಿ ಯಡಿಯೂರಪ್ಪ ಸಿಎಂ ಆಗಿದ್ದಾಗ ಅನುಮೋದನೆ ದೊರೆತಿದೆ. ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರ ಮೇಲೆ ಒತ್ತಾಯ ಮಾಡಿ ಯೋಜನೆ ಮಂಜೂರು ಮಾಡಿಸಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಲ್ಲ. ಯಡಿಯೂರಪ್ಪ-ಸಿದ್ದರಾಮಯ್ಯ ಇಬ್ಬರೂ ಅನ್ಯೋನ್ಯವಾಗಿದ್ದಾರೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸುಮ್ಮನೆ ನಾವು ಜಗಳಾಡ್ತಿವಿ. –ಬಸವರಾಜ ಬೊಮ್ಮಾಯಿ, ಸಿಎಂ

ಸ್ವಾತಂತ್ರ್ಯ  ಬಂದು 75 ವರ್ಷ ಮುಗಿಯುತ್ತಿದ್ದರೂ ಅಖಂಡ ವಿಜಯಪುರ ಜಿಲ್ಲೆಯ ಹಲವು ಭಾಗದಲ್ಲಿ ನೀರಾವರಿ ಆಗಿರಲಿಲ್ಲ. ಕೆರೂರ ಭಾಗದಲ್ಲಿ ನೀರಾವರಿ ಅಷ್ಟೇ ಅಲ್ಲ, ಕುಡಿಯುವ ನೀರಿಗೂ ತೀವ್ರ ತೊಂದರೆ ಇತ್ತು. ನನ್ನ ಸೌಭಾಗ್ಯ ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕೆರೂರ, ಸಸಾಲಟ್ಟಿ ಹಾಗೂ ಮಂಟೂರ ಏತ ನೀರಾವರಿ ಯೋಜನೆಗಳು ಚಾಲನೆಗೊಳ್ಳುತ್ತಿವೆ. ಗೋವಿಂದ ಕಾರಜೋಳ, ಜಲಸಂಪನ್ಮೂಲ ಸಚಿವ

ಯುಕೆಪಿ 3ನೇ ಹಂತದ ಯೋಜನೆ ಶೀಘ್ರ ಮುಗಿಯಬೇಕು. ಅದಕ್ಕಾಗಿ ಆಲಮಟ್ಟಿ ಜಲಾಶಯ 524.256 ಮೀಟರ್‌ಗೆ ಎತ್ತರಿಸಲು ಹಾಗೂ ಹಂಚಿಕೆಯಾದ ನೀರು ಬಳಕೆಗೆ ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸಬೇಕು. ಕೃಷ್ಣಾ, ಮಹದಾಯಿ ವಿಷಯದಲ್ಲಿ ಅಧಿಸೂಚನೆ ಹೊರಡಿಸಲು ಕೇಂದ್ರದ ಮೇಲೆ ರಾಜ್ಯ ಸರ್ಕಾರ ಒತ್ತಡ ಹಾಕಬೇಕು.ಸಿದ್ದರಾಮಯ್ಯ, ವಿಧಾನಸಭೆ ವಿಪಕ್ಷ ನಾಯಕ

ಟಾಪ್ ನ್ಯೂಸ್

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.