ರಸ್ತೆಯಲ್ಲಿ ತಗ್ಗು-ದಿನ್ನೆ; ಸಂಚಾರ ಸಂಚಕಾರ

ಅಗಲೀಕರಣ ಕಾಮಗಾರಿ ಅಪೂರ್ಣ

Team Udayavani, Apr 27, 2022, 4:18 PM IST

24

ತೇರದಾಳ: ಪಟ್ಟಣದ ಪೊಲೀಸ್‌ ಠಾಣೆಯಿಂದ ಬಸ್‌ ನಿಲ್ದಾಣದವರೆಗೆ ಕೈಗೊಂಡಿರುವ ಕಲಾದಗಿ -ಕಾಗವಾಡ ರಾಜ್ಯ ಹೆದ್ದಾರಿ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿ ಅಪೂರ್ಣಗೊಂಡಿದ್ದು, ಧೂಳು ತುಂಬಿ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ.

ಅಲ್ಲದೇ, ರಸ್ತೆ ಬಳಸಿ ಹೋಗುವ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದೆ. ಇದರಿಂದ ಚಿಕ್ಕ-ಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಜನರ ಆಗ್ರಹವಾಗಿದೆ.

ಲೋಕೋಪಯೋಗಿ ಇಲಾಖೆಯಡಿ ಅಂದಾಜು ಮೂರು ಕೋಟಿಗೂ ಅಧಿಕ ಅನುದಾನದಲ್ಲಿ ಕೈಗೊಂಡಿರುವ ರಸ್ತೆ ಕಾಮಗಾರಿ ಆರಂಭದಿಂದಲೂ ಕುಂಟುತ್ತ, ತೆವಳುತ್ತ ಸಾಗಿದ್ದು, 7-8 ತಿಂಗಳಾದರೂ ಸಹ ಅರ್ಧದಷ್ಟು ಮಾತ್ರ ಪೂರ್ಣಗೊಂಡಿದೆ. ಉಳಿದ ಅರ್ಧದಷ್ಟು ಮಾತ್ರ ಗರಸು ಹಾಕಿದ್ದು, ವಾಹನ ಸಂಚರಿಸಿದರೆ 10-15 ನಿಮಿಷ ಧೂಳು ತುಂಬುವುದು. ರಾಜ್ಯ ಹೆದ್ದಾರಿಯಾಗಿದ್ದರಿಂದ ದಿನಕ್ಕೆ ಸಾವಿರಾರು ವಾಹನಗಳು ಇದೇ ರಸ್ತೆ ಬಳಸಿ ಸಾಗುತ್ತವೆ. ರಸ್ತೆಯ ಬದಿಯಲ್ಲಿ ವಾಸದ ಮನೆಗಳು ಹಾಗೂ ಸಾಕಷ್ಟು ಅಂಗಡಿ-ಮಳಿಗೆಗಳಿವೆ. ವಿಪರೀತ ಧೂಳಿನಿಂದಾಗಿ ಆರೋಗ್ಯ ಮೇಲೂ ಪರಿಣಾಮವಾಗುತ್ತಿದೆ. ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಧೂಳಿನಲ್ಲಿ, ತಗ್ಗು-ದಿನ್ನೆ ರಸ್ತೆ ಮೂಲಕವೆ ಸಾಗುತ್ತಾರೆ. ಇದೆಲ್ಲದರ ಅರಿವಿದ್ದರೂ ಸಹ ಇಲಾಖೆಯ ಅ ಧಿಕಾರಿಗಳು ಉಳಿದರ್ಧ ಕಾಮಗಾರಿ ನಿಲ್ಲಿಸಿದ್ದು, ಪಟ್ಟಣದ ಅಭಿವೃದ್ಧಿ ಬಯಸುವ ಜನರಿಗೆ ನೋವಾಗಿದೆ. ಅರ್ಧದಷ್ಟು ರಸ್ತೆ ಕಾಮಗಾರಿ ಮಾತ್ರ ಡಾಂಬರೀರಣ ಪೂರ್ಣಗೊಂಡಿದ್ದು, ಪಕ್ಕಕ್ಕೆ ಚರಂಡಿ ನಿರ್ಮಾಣ ಕಾರ್ಯ ನಡೆದಿದೆ. ಈ ಉಳಿದ ಅರ್ಧ ರಸ್ತೆಯ ಕಾಮಗಾರಿಯನ್ನು ಸಹ ಬೇಗನೆ ಆರಂಭಿಸಿ, ಧೂಳಿನಿಂದ ಮುಕ್ತಿ ಕಲ್ಪಿಸಬೇಕೆಂದು ಸಾರ್ವಜನಿಕರ ಒತ್ತಾಸೆಯಾಗಿದೆ.

ಜಮಖಂಡಿ, ವಿಜಯಪುರ, ಸೊಲ್ಲಾಪುರ, ಕಲಬುರಗಿ, ಮುದ್ದೇಬಿಹಾಳ, ಬಾಗಲಕೋಟೆ, ಬಾದಾಮಿ, ಇಳಕಲ್‌, ಕುಷ್ಠಗಿ, ಸವದತ್ತಿ, ಧಾರವಾಡ, ಭಟ್ಕಳ, ಬೆಂಗಳೂರು, ಮಿರಜ, ಸಾಂಗಲಿ, ಕೋಲ್ಲಾಪುರ, ಪುಣೆ, ಮುಂಬಯಿ ಸೇರಿದಂತೆ ದೂರ ಪ್ರಯಾಣಿಸುವ ಬಸ್‌ಗಳು ಇದೇ ರಸ್ತೆ ಬಳಸಿ ಸಾಗುತ್ತವೆ. ಮಿರಜ ಸೇರಿದಂತೆ ವಿವಿಧೆಡೆ ಆಸ್ಪತ್ರೆಗಳಿಗೆ ಸಾಗುವ ಆಂಬ್ಯುಲೆನ್ಸ್‌ಗಳು ಸಹ ಈ ರಸ್ತೆಯಲ್ಲಿ ನಿಧಾನವಾಗಿ ಹೋಗುವುದು ಅನಿವಾರ್ಯವಾಗಿದೆ.

ತೇರದಾಳ ಪೊಲೀಸ್‌ ಠಾಣೆಯಿಂದ ಬಸ್‌ ನಿಲ್ದಾಣದ ವರೆಗಿನ ರಸ್ತೆ ದುರಸ್ತಿ ಕಾಮಗಾರಿ ನಡೆದಿದ್ದು, ಅದರಲ್ಲಿ ಮೊದಲ ಅರ್ಧ ಭಾಗದಷ್ಟು ರಸ್ತೆ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಕೇವಲ 10-15ದಿನಗಳಲ್ಲಿ ಚರಂಡಿ ಸಹಿತ ಪೂರ್ಣಗೊಳ್ಳುವುದು. ಇನ್ನುಳಿದ ಅರ್ಧ ಭಾಗದ ಟೆಂಡರ್‌ ಪ್ರಕ್ರಿಯೆ ಮೇ ತಿಂಗಳ ಮೊದಲ ವಾರದಲ್ಲಿ ನಡೆಯಲಿದೆ. ಎಲ್ಲ ಪ್ರಕ್ರಿಯೆ ಪೂರ್ಣಗೊಂಡ ಮೇಲೆ ಕಾಮಗಾರಿ ಆರಂಭಿಸಲಾಗುವುದು. ಶೀಘ್ರ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು. ಅಲ್ಲಿಯವರೆಗೆ ಸ್ವಲ್ಪ ಗರಸು ಹಾಕಿಸಿ, ನೀರು ಹೊಡೆದು ಧೂಳು ಕಡಿಮೆಯಾಗುವ ವ್ಯವಸ್ಥೆ ಮಾಡಲಾಗುವುದು. -ಎಸ್‌.ಆರ್‌. ಬಂಡಿವಡ್ಡರ, ಪಿಡಬ್ಲೂಡಿ ಎಇಇ ಜಮಖಂಡಿ.

ಟಾಪ್ ನ್ಯೂಸ್

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.