Election 2023 ಹುನ್ನೂರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 2.10 ಕೋಟಿ ರೂ. ಜಪ್ತಿ


Team Udayavani, Apr 10, 2023, 5:19 PM IST

Election 2023 ಹುನ್ನೂರ ಚೆಕ್ ಪೋಸ್ಟ್ ನಲ್ಲಿ ದಾಖಲೆಯಿಲ್ಲದ 2.10 ಕೋಟಿ ರೂ. ಜಪ್ತಿ

ಬಾಗಲಕೋಟೆ: ಜಮಖಂಡಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಹುನ್ನೂರ ಚೆಕ್‍ಪೋಸ್ಟ್ ನಲ್ಲಿ ಸಂಶಯಾಸ್ಪದವಾದ ಹಾಗೂ ದಾಖಲೆ ಇಲ್ಲದ ಒಟ್ಟು 2.10 ಕೋಟಿ ರೂ.ಗಳ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಸುನೀಲ್‍ಕುಮಾರ ತಿಳಿಸಿದ್ದಾರೆ.

ಜಮಖಂಡಿಯ ಹುಣ್ಣೂರು ಚೆಕ್ ಪೋಸ್ಟನಲ್ಲಿ ಕಾರ್ಯನಿರತ ಸ್ಟಾಟಿಸ್ಟಿಕಲ್ ಸರ್ವೆನೆಸ್ಟ್ ತಂಡದ ಸದಸ್ಯರು ತಪಾಸಣೆ ನಡೆಸುತ್ತಿರುವ ವೇಳೆಯಲ್ಲಿ ಅನುಮಾನಾಸ್ಪದ ಒಂದು ವಾಹನವನ್ನು ತಡೆದು ನಿಲ್ಲಿಸಿ ತಪಾಸನೆಗೊಳಪಡಿಸಿದಾಗ ದಾಖಲೆ ಇಲ್ಲದ ಅಂದಾಜು 2.10 ಕೋಟಿ ರೂ.ಗಳ ಮೊತ್ತವನ್ನು ವಶಪಡಿಸಿಕೊಳ್ಳಲಾಗಿದೆ.

ಸೌಹಾರ್ದ ಬ್ಯಾಂಕಿಗೆ ಸಂಬಂಧಿಸಿದವರಾಗಿ ತಿಳಿಸಿದ್ದು, ಒದಗಿಸಿರುವ ದಾಖಲಾತಿಗಳು ಪರಿಪೂರ್ಣ ವೆಂದು ಪರಿಗಣಿಸಲು ಸಾಧ್ಯವಾಗದೆ ಇದ್ದ ಹಿನ್ನೆಲೆಯಲ್ಲಿ ಅವರಿಗೆ ದಾಖಲೆ ಒದಗಿಸಲು ಹೆಚ್ಚಿನ ಅವಕಾಶವನ್ನು ನೀಡಿ, ಸದರಿ ಮೊತ್ತವನ್ನು ಮುಟ್ಟುಗೋಲು ಹಾಕಿಕೊಂಡು ಚುನಾವಣಾಧಿಕಾರಿಗಳ ಕಚೇರಿಯಿಂದ ಜಮಖಂಡಿಯ ಸರ್ಕಾರಿ ಖಜಾನೆಗೆ ಜಮಾ ಮಾಡಲಾಗಿದೆ. ಪಂಚನಾಮೆ ಸಹಿತ ಜಿಲ್ಲಾಮಟ್ಟದ ಹಣ ಮುಟ್ಟುಗೋಲು ಪರಿಹಾರ ಸಮಿತಿಗೆ ವರದಿ ಸಲ್ಲಿಸಲಾಗಿದ್ದು,  ಸದರಿ ಸಮಿತಿಯು ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಿದ್ದಾರೆ.

ಚೆಕ್‍ಪೋಸ್ಟ್ ನಲ್ಲಿ ದೊರೆತಿರುವ ಹಣದ ಮಾಲಿಕರು ಒಂದು ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್‍ಗೆ ಸಂಬಂಧಿಸಿದವರಾಗಿದ್ದು, ಅವರು ಹಿಪ್ಪರಗಿ ಸತ್ತಿ ಅಥನಿ ಬನಹಟ್ಟಿ ರಬಕವಿ ಬೇರೆ ಬೇರೆ ಶಾಖೆಗಳಿಗೆ ಹಣ ರವಾನಿಸುತಿರುವುದಾಗಿ ಮೌಖಿಕವಾಗಿ ಮಾಹಿತಿ ನೀಡಿರುತ್ತಾರೆ.

ಚೆಕ್ ಪೋಸ್ಟ್ ನಲ್ಲಿ ತಪಾಸನೆ ನಡೆಸುವ ವೇಳೆಯಲ್ಲಿ ನಿಗದಿತ ನಮೂನೆಯಲ್ಲಿ ದಾಖಲೆಗಳು ಇಲ್ಲದೆ ಇರುವುದಕ್ಕೆ ಮತ್ತು ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಸಾಗಾಣಿಕೆಗೆ ಬಳಸುವ ಸಂಶಯ ಕಂಡು ಬಂದಿರುವುದರಿಂದ ಪ್ರಸ್ತುತ ಮುಟ್ಟುಗೋಲು ಕ್ರಮವನ್ನು ಕೈಗೊಳ್ಳಲಾಗಿದ್ದು, ಮುಂದಿನ ಕಾನೂನಿನ ಕ್ರಮದ ಬಗ್ಗೆ ಜಿಲ್ಲಾಮಟ್ಟದ ಸಮಿತಿಯು ಕೈಗೊಳ್ಳುವ ಕ್ರಮದ ಆಧಾರದಲ್ಲಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.