ಮತದಾರರೇ ನನ್ನ ಮಾಲೀಕರು: ವೀಣಾ

Team Udayavani, Apr 19, 2019, 2:56 PM IST

bag-2

ರಾಂಪುರ: ಮತದಾರರೇ ನನ್ನ ಮಾಲೀಕರು. ನಾನು ಜನರ ಸೇವೆ ಮಾಡುವ ಕೂಲಿ ಕಾರ್ಮಿಕಳು ಎಂದು ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ವೀಣಾ ಕಾಶಪ್ಪನವರ ಹೇಳಿದರು. ಬೇವೂರ ಗ್ರಾಮ ಸೇರಿದಂತೆ ಹಳ್ಳೂರ, ಚವಡಾಪುರ, ಸಂಗಾಪುರ, ಬೋಡನಾಯಕದಿನ್ನಿ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿಗೆ ಮೋದಿ ಅವರ ಹೆಸರು ಬಂಡವಾಳವಾಗಿದೆ. ಕ್ಷೇತ್ರಕ್ಕೆ ಅವರ ಸಾಧನೆ ಶೂನ್ಯವಾಗಿದೆ. ತಮ್ಮನ್ನು ನೋಡಿ ಯಾರೂ ಮತ ಹಾಕುವುದಿಲ್ಲ ಎಂದು ತಿಳಿದು, ಮೋದಿ ಮುಖ ನೋಡಿ ಮತ ಹಾಕಿ ಎಂದು ಕೇಳಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಮಾತನಾಡಿ, ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚಕಾರ ಎತ್ತದೆ ಕೇವಲ ಮೋದಿ ಜಪ ಮಾಡುತ್ತಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸಬೇಕು.

ಕ್ರಿಯಾಶೀಲರಾಗಿರುವ ವೀಣಾ ಕಾಶಪ್ಪನವರ ಅವರನ್ನು ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. ದೇಶದಲ್ಲಿ ಇದುವರೆಗೆ ಯಾವ ಪಕ್ಷದವರೂ ದೇಶದ ಹೆಮ್ಮೆ ಆಗಿರುವ ಯೋಧರನ್ನು ರಾಜಕೀಯಕ್ಕೆ ಬಳಸಿಕೊಂಡಿರಲಿಲ್ಲ. ಆದರೆ ಮೋದಿ ಅವರು ಅದನ್ನು ಮಾಡಿ ಕೀಳು ರಾಜಕೀಯ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಮುಖಂಡರಾದ ಸಿದ್ದಪ್ಪ ಗಡೇದ, ಹುಚ್ಚಪ್ಪ ಗೌಡರ, ವೀರೇಶ ಗಡೇದ ಮುಂತಾದವರು ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡರು. ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ವಿಧಾನಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ, ಮಾಜಿ ಸಚಿವ ಎಚ್‌.ವೈ. ಮೇಟಿ, ಪ್ರಮುಖರಾದ ಬಸವರಾಜ ಮೇಟಿ, ಜಿ.ಜಿ. ಮಾಗನೂರ, ಎಸ್‌.ವೈ. ಶಿರೂರ, ಮುರೆಗೆಪ್ಪ ವೈಜಾಪುರ, ಆರ್‌.ಎಸ್‌. ವೈಜಾಪುರ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

ಪ್ರಜಾಪ್ರಭುತ್ವ ಪರಿಕಲ್ಪನೆ ನೀಡಿದ ಬಸವಣ್ಣವರು

1-nirani

ಮುಖ್ಯಮಂತ್ರಿಯಾಗುತ್ತಾರೆ: ಈಶ್ವರಪ್ಪ ಹೇಳಿಕೆಗೆ ನಾನು ಋಣಿ ಎಂದ ನಿರಾಣಿ

11teaching

ಶಿಕ್ಷಕ ವೃತ್ತಿಯ ಗೌರವ-ಘನತೆ- ಪಾವಿತ್ರ್ಯತೆ ಕಾಪಾಡಿಕೊಳ್ಳಿ

10study

ನಿರಂತರ ಅಧ್ಯಯನದಿಂದ ಯಶಸ್ಸು: ಬಿಡಿಕರ್‌

9boot-polish

ಕರವೇಯಿಂದ ಬೂಟ್‌ ಪಾಲಿಶ್‌ ಅಭಿಯಾನ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಆರೋಗ್ಯ ವ್ಯವಸ್ಥೆಗೆ ಸರ್ಕಾರಿ ವೆಚ್ಚ ಪ್ರಮಾಣ ಹೆಚ್ಚಳ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.