
ಹಿಪ್ಪರಗಿಯಲ್ಲಿ ಬಿರುಗಾಳಿಗೆ ಗೋಡೆ ಕುಸಿದು ಮಹಿಳೆ ಸಾವು
Team Udayavani, May 31, 2023, 12:02 AM IST

ರಬಕವಿ-ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಗ್ರಾಮದಲ್ಲಿ ಮಂಗಳವಾರ ಮಧ್ಯಾಹ್ನ ಬೀಸಿದ ಬಿರುಗಾಳಿಗೆ ಗ್ರಾಮದ ರಾಮಣ್ಣ ನೇಸೂರ ಅವರ ಮನೆಯ ಪತ್ರಾಸ ಗೋಡೆಗೆ ಹೊಂದಿಕೊಂಡಿದ್ದ ಕಚ್ಚಾ ಇಟ್ಟಿಗೆ ಗೋಡೆ ಕುಸಿದ ಪರಿಣಾಮವಾಗಿ ಪಾರ್ವತಿ ನೇಸರೂ(45) ಎಂಬ ಮಹಿಳೆ ಬಲಿಯಾದ ವರದಿಯಾಗಿದೆ.
ಗೋಡೆ ಕುಸಿದು ಗಾಯಗೊಂಡಿದ್ದ ಪಾರ್ವತಿಯವರನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು. ಆದರೆ ಮಾರ್ಗ ಮಧ್ಯದಲ್ಲಿ ನಿಧನರಾದರು.
ಘಟನಾ ಸ್ಥಳಕ್ಕೆ ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ, ಗ್ರಾಮ ಲೆಕ್ಕಾಧಿಕಾರಿ ಅಮಸಿದ್ಧ ಬಿರಾದಾರ ಇದ್ದರು.
ತಹಶೀಲ್ದಾರ್ ಡಾ.ಹೂಗಾರ ದೂರವಾಣಿಯ ಮೂಲಕ ಪತ್ರಿಕೆಯ ಜೊತೆಗೆ ಮಾತನಾಡಿ, ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪದ ಅಡಿಯಲ್ಲಿ ಸರ್ಕಾರದಿಂದ ದೊರೆಯಬಹುದಾದ ಪರಿಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ