ಬಾಗಲಕೋಟೆ: ಧಾನ್ಯ ಬೀಸಿದ ಡಿಸಿ; ಮಜ್ಜಿಗೆ ಕಡಿದ ಎಸಿ!

ಎಳ್ಳಮಾವಾಸ್ಯೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆಯಿತು

Team Udayavani, Jan 12, 2024, 5:55 PM IST

ಬಾಗಲಕೋಟೆ: ಧಾನ್ಯ ಬೀಸಿದ ಡಿಸಿ; ಮಜ್ಜಿಗೆ ಕಡಿದ ಎಸಿ!

ಉದಯವಾಣಿ ಸಮಾಚಾರ
ಬಾಗಲಕೋಟೆ: ರೈತರ ಸಂಭ್ರಮದ ಹಬ್ಬ ಎಂದೇ ಕರೆಸಿಕೊಳ್ಳುವ ಎಳ್ಳಮಾವಾಸ್ಯೆ ನಿಮಿತ್ತ ಜಿಲ್ಲೆಯ ಬೀಳಗಿ ತಾಲೂಕಿನ ಕೃಷ್ಣೆ-ಘಟಪ್ರಭೆಯ ಸಂಗಮದ ತಾಣ ಚಿಕ್ಕಸಂಗಮದಲ್ಲಿ ಸಂಭ್ರಮ ಮನೆ ಮಾಡಿತ್ತು. ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ಹಿರಿಯ ಅಧಿಕಾರಿಗಳ ಪತ್ನಿಯರು ಹಾಗೂ ಸಚಿವ ಆರ್‌.ಬಿ. ತಿಮ್ಮಾಪುರ ಅವರ ಪತ್ನಿ, ಸಹೋದರಿ ಸಹಿತ ಹಲವರು ಸಂಕ್ರಾಂತಿ ಸಂಭ್ರಮದಲ್ಲಿ ಭಾಗಿಯಾಗಿ, ದೇಶೀಯ ಸಂಸ್ಕೃತಿ ಇಮ್ಮಡಿಗೊಳಿಸಿದರು.

ಮುಧೋಳದ ಸಪ್ತಸ್ವರ ಸಂಗೀತ ಹಾಗೂ ನೃತ್ಯ ಸಾಂಸ್ಕೃತಿಕ ಸಂಸ್ಥೆಯ ಅಡಿಯಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಚಿಕ್ಕಸಂಗಮದಲ್ಲಿ ಎಳ್ಳಮಾವಾಸ್ಯೆ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕ್ರಮ ನೋಡುಗರ ಕಣ್ಮನ ಸೆಳೆಯಿತು.

ಬಾಗಲಕೋಟೆ ನಗರ, ಬೀಳಗಿ ಹಾಗೂ ಮುಧೋಳ ತಾಲೂಕಿನಿಂದ ಅಂದಾಜು 500ಕ್ಕೂ ಹೆಚ್ಚು ಜನ ಮಹಿಳಾ ಮಣಿಗಳು ಸಂಕ್ರಾಂತಿ ಸಂಭ್ರಮದಲ್ಲಿ ಭಾಗಿಯಾಗಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಅವರ ಪತ್ನಿ ಶಕುಂತಲಾ ತಿಮ್ಮಾಪುರ, ಸಹೋದರಿ ಕವಿತಾ ತಿಮ್ಮಾಪುರ, ಜಿಲ್ಲಾಧಿಕಾರಿ ಕೆ.ಎಂ. ಜಾನಕಿ, ಬಾಗಲಕೋಟೆ ಉಪ ವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಜಿ.ಪಂ. ಸಿಇಒ ಶಶಿಧರ ಕುರೇರ ಅವರ ಪತ್ನಿ ಸುಚಿತಾ ಸೇರಿದಂತೆ ನೂರಾರು ಮಹಿಳೆಯರು ಸಂಕ್ರಾಂತಿ ಸುಗ್ಗಿ ಸಂಭ್ರಮದಲ್ಲಿ ಮಿಂದೆದ್ದರು. ಗ್ರಾಮೀಣ ಸೊಗಡು, ಸಂಸ್ಕೃತಿ, ಪರಂಪರೆ, ಬಿಂಬಿಸುವ ಸಂಕ್ರಾಂತಿ ವೇಳೆಯ ಸುಗ್ಗಿ ಆಚರಣೆ
ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಇಳಕಲ್ಲ ಸೀರೆ, ಮೂಗುತಿ, ಕೈತುಂಬ ಬಳೆ, ತಲೆಗೆ ಹೂವು ಮುಡಿದ ನಾರಿಮಣಿಗಳು ಹಬ್ಬದ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.

ಚಿಕ್ಕ ಸಂಗಮನಾಥನಿಗೆ ಪೂಜೆ ಸಲ್ಲಿಸಿದ ಮಹಿಳೆಯರು ದಂಡಿಹಾರ ಹಾಕಿ ಉಡಿ ತುಂಬುವ ಕಾರ್ಯಕ್ರಮ ನಡೆಸಿಕೊಟ್ಟರು. ರೈತ ಕುಟುಂಬದಲ್ಲಿ ನಡೆಯುವಂತೆ ಬೀಸುವ ಕಲ್ಲಿನಿಂದ ಧಾನ್ಯ ಬೀಸಿದ ಜಿಲ್ಲಾಧಿಕಾರಿ ಜಾನಕಿ, ಎಸಿ ಶ್ವೇತಾ ಅವರು, ಮಹಿಳೆಯರಿಗೆ ಹರುಷ ತಂದರು.

ಎತ್ತುಗಳಿಗೆ ಪೂಜೆ ಸಲ್ಲಿಸಿ, ಸಕಲ ವಾದ್ಯ ಮೇಳದೊಂದಿಗೆ ನದಿಗೆ ತೆರಳಿ ಗಂಗಾಮಾತೆಗೆ ಪೂಜೆ ಸಲ್ಲಿಸಿದರು. ಬಳಿಕ ಅಧಿಕಾರಿಗಳ ಸಮ್ಮುಖದಲ್ಲಿ ನದಿಗೆ ಬಾಗಿನ ಅರ್ಪಿಸಿದರು. ಕೂರಿಗೆಯಿಂದ ಸಾಂಕೇತಿಕವಾಗಿ ಬಿತ್ತನೆ, ಕಬ್ಬಿನ ಮಂಟಪ, ಗಡಿಗೆ ಇಟ್ಟು, ಬೆಲ್ಲದ ಅಚ್ಚು, ದವಸಧಾನ್ಯದಿಂದ ಪೂಜೆ ಸಲ್ಲಿಸಿ ಉತ್ತಮ ಮಳೆ ಆಗಿ, ರೈತರಿಗೆ ಸಮೃದ್ಧ ಫಸಲು ಬರಲಿ ಎಂದು ಪ್ರಾರ್ಥಿಸಿದರು.

ಪೂಜಾ ಕೈಂಕರ್ಯದ ಬಳಿಕ ಉತ್ತರ ಕರ್ನಾಟಕ ಶೈಲಿಯ ಪಕ್ಕಾ ಜವಾರಿ ಊಟವಾದ ಖಡಕ್‌ ರೊಟ್ಟಿ, ಬದನೆಕಾಯಿ, ಹೆಸರು ಕಾಳು, ಶೇಂಗಾ ಚಟ್ನಿ, ಕೆನೆ ಮೊಸರು, ಶೇಂಗಾ ಹೋಳಿಗೆ, ತುಪ್ಪ, ಉಪ್ಪಿನಕಾಯಿ, ಅನ್ನ ಸಾಂಬರ ಸವಿದರು. ಆಧುನಿಕತೆ ಅಬ್ಬರದಲ್ಲಿ ಮರೆಯಾಗುತ್ತಿರುವ ದೇಶಿ ಹಬ್ಬ ಆಚರಣೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಳೆದ ಆರು ವರ್ಷಗಳಿಂದ, ಮುಧೋಳದ ಸಪ್ತಸ್ವರ ಸಂಸ್ಥೆಯವರು ಸಂಕ್ರಾಂತಿಗೂ ಮುನ್ನ ಈ ಸುಗ್ಗಿ-ಹುಗ್ಗಿ ಕಾರ್ಯಕ್ರಮ ಆಯೋಜಿಸುತ್ತಿದ್ದಾರೆ. ಈ ಬಾರಿ ವಿಶೇಷ ಎನ್ನುವಂತೆ ಮಹಿಳಾ ಅಧಿಕಾರಿಗಳು ಕೆಲಸದ ಒತ್ತಡ ಬದಿಗಿಟ್ಟು, ಇಡೀ ದಿನ ಹಬ್ಬ ಆಚರಿಸಿ, ಸೇರಿದ್ದ ಮಹಿಳೆಯರ ಉತ್ಸಾಹ ಇಮ್ಮಡಿಗೊಳಿಸಿ ತಾವೂ ಖುಷಿ ಪಟ್ಟರು. ಪೂಜೆ ಹಾಗೂ ಭೂರಿ ಭೋಜನದ ಬಳಿಕ ಜಾನಪದ ಗೀತೆ, ಚಿತ್ರಗೀತೆ, ಸುಗ್ಗಿ ಹಾಡುಗಳಿಗೆ ನಾರಿಯರು ಸಖತ್‌ ಹೆಜ್ಜೆ ಹಾಕಿ ಸಂಭ್ರಮಿಸಿ ಹಬ್ಬದ ಸಂಭ್ರಮ ಇಮ್ಮಡಿಗೊಳಿಸಿದರು.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.