ಸಂಕಲ್ಪ, ಪರಿಶ್ರಮದಿಂದ ಸಾಧನೆ ಸಾಧ್ಯ: ಎಸ್. ಎಂ. ಮುಲ್ಲಾ


Team Udayavani, Feb 15, 2022, 5:42 PM IST

ಸಂಕಲ್ಪ, ಪರಿಶ್ರಮದಿಂದ ಸಾಧನೆ ಸಾಧ್ಯ: ಎಸ್. ಎಂ. ಮುಲ್ಲಾ

ರಬಕವಿ-ಬನಹಟ್ಟಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಜೀವನದಲ್ಲಿ ಪ್ರಮುಖ ಘಟ್ಟವಾಗಿದೆ. ಮುಂಬರುವ 40 ದಿನಗಳ ವಿದ್ಯಾರ್ಥಿಗಳು ಜೀವನದಲ್ಲಿ ಬಹಳಷ್ಟು ಮಹತ್ವದ ದಿನಗಳಾಗಿವೆ. ಆದ್ದರಿಂದ ಗುರಿ ಮುಟ್ಟಲು ವಿದ್ಯಾರ್ಥಿಗಳು ಸಂಕಲ್ಪ ಮಾಡುವುದರ ಜೊತೆಗೆ ಸತತ ಪರಿಶ್ರಮವನ್ನು ಪಡಬೇಕಾಗಿದೆ. ಇವೆರಡರಿಂದ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ಮುಧೋಳದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಎಂ. ಮುಲ್ಲಾ ತಿಳಿಸಿದರು.

ಅವರು ಮಂಗಳವಾರ ತಾಲ್ಲೂಕಿನ ಹೊಸೂರಿನ ಪದ್ಮಾವತಿ ಅಂತರರಾಷ್ಟ್ರೀಯ ಶಾಲೆಯಲ್ಲಿ ರಬಕವಿ ಬನಹಟ್ಟಿ ಹಾಗೂ ಮುಧೋಳದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನಕ್ಕೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಗಮನ ನೀಡಬೇಕು. ಪಾಲಕರಿಗೆ ಉತ್ತಮ ಮಕ್ಕಳವಾಗಿ, ಶಿಕ್ಷಕರಿಗೆ ಉತ್ತಮ ವಿದ್ಯಾರ್ಥಿಯಾಗಿ, ಸಮಾಜಕ್ಕೆ ಮತ್ತು ದೇಶಕ್ಕೆ ಉತ್ತಮ ಪ್ರಜೆಯಾಗಬೇಕಾಗಿದೆ. ಒಟ್ಟಿನಲ್ಲಿ ಈ ಮಹತ್ವದ ಘಟ್ಟಿನಲ್ಲಿ ಮಕ್ಕಳು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಪಡೆದುಕೊಂಡ ಉತ್ತಮ ಫಲಿತಾಂಶ ಪಡೆದುಕೊಂಡರೆ ಇಲಾಖೆ ಕೈಗೊಂಡ ಈ ಕಾರ್ಯ ಫಲದಾಯಕವಾಗುತ್ತದೆ ಎಂದು ಎಸ್. ಎಂ. ಮುಲ್ಲಾ ತಿಳಿಸಿದರು.

ಇದೇ ಸಂದರ್ಭದಲ್ಲಿ ಗೋಕಾಕದ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಿಗಾರ ವಿಶೇಷ ಉಪನ್ಯಾಸ ನೀಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬಗ್ಗೆ ವಿದ್ಯಾರ್ಥಿಗಳಿಗೆ ಭಯ ಬೇಡ, ಮನುಷ್ಯ ಹುಟ್ಟಿದಾಗಿನಿಂದ ಅನೇಕ ಪರೀಕ್ಷೆಗಳನ್ನು ಎದುರಿಸುತ್ತಾನೆ. ವಿದ್ಯಾರ್ಥಿಗಳ ಮೇಲೆ ಪಾಲಕರು, ಶಿಕ್ಷಕರು ಮತ್ತು ಸಮಾಜದವರು ಸಾಕಷ್ಟು ಭರವಸೆಯನ್ನು ಇಟ್ಟಿರುತ್ತಾರೆ. ಆದ್ದರಿಂದ ಯಾವುದೆ ಒತ್ತಡಗಳಿಗೆ ಒಳಗಾಗದೆ ಧೈರ್ಯವಾಗಿ ಪರೀಕ್ಷೆ ಎದುರಿಸುವುದರಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ ಎಂದರು.

ಜಮಖಂಡಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ನೇಮಗೌಡ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯ ಮೇಲೆ ಕ್ಷೇತ್ರ ಸಮನ್ವಯಾಧಿಕಾರಿ ವಿಜಯಕುಮಾರ ವಂದಾಲ, ರಬಕವಿ ಬನಹಟ್ಟಿ ತಾಲ್ಲೂಕು ನೋಡಲ್ ಅಧಿಕಾರಿ ಶ್ರೀಶೈಲ ಬುರ್ಲಿ, ಮುಧೋಳ ತಾಲ್ಲೂಕು ನೋಡಲ್ ಅಧಿಕಾರಿ ಎಸ್.ಡಿ. ನೀಲಗುಂದ, ಸಂಸ್ಥೆಯ ಆಡಳಿತಾಧಿಕಾರಿ ಭಾರತಿ ತಾಳಿಕೋಟಿ, ಶಿಕ್ಷಣಾಧಿಕಾರಿಗಳ ಸಂಘದ ಅಧ್ಯಕ್ಷ ಬಿ.ಎಸ್.ಕಡಕೋಳ, ಬಾಬಾಗೌಡ ಪಾಟೀಲ, ಎಚ್. ಪ್ರತಾಪ, ಪ್ರಾಚಾರ್ಯ ಬಸವರಾಜ ಕಲಾದಗಿ, ಶ್ರೀಶೈಲ ಕುಂಬಾರ ಇದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.