ಬಾಳೆಹೊನ್ನೂರಲ್ಲೂ ಭಾರೀ ಮಳೆ: ಭದ್ರೆ ನೀರಿನ ಮಟ್ಟ ಹೆಚ್ಚಳ

Team Udayavani, Sep 9, 2019, 7:49 PM IST

ಬಾಳೆಹೊನ್ನೂರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರುತ್ತಿದೆ.

ಬಾಳೆಹೊನ್ನೂರು: ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಭದ್ರಾ ನದಿಯಲ್ಲಿ ನೀರಿನ ಮಟ್ಟ ಹಂತಹಂತವಾಗಿ ಏರುತ್ತಿದೆ.

ಕಳಸ, ಹೊರನಾಡು, ಕುದುರೆಮುಖ, ಬಾಳೆಹೊಳೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮಳೆಯಿಂದಾಗಿ ನಾಟಿ ಮಾಡಿದ ಗದ್ದೆಯಲ್ಲಿ ಭತ್ತದ ಸಸಿ ಕೊಳೆತು ಹೋಗುತ್ತಿದ್ದು, ಏಡಿಗಳ ಕಾಟ ಹೆಚ್ಚಾಗಿದೆ.

ಕೊಳೆ ರೋಗದಿಂದ ಅಡಕೆ ಮಿಡಿ ಉದುರುತ್ತಿದ್ದರೆ, ಮತ್ತೂಂದೆಡೆ ಮಂಗಗಳು ಅಳಿದುಳಿದ ಅಡಕೆ ಮಿಡಿಗಳನ್ನು ಕಿತ್ತು ಹಾಕುತ್ತಿರುವುದರಿಂದ ರೈತರಿಗೆ ನಷ್ಟ ಉಂಟಾಗುತ್ತಿದೆ. ಕಾಫಿ ತೋಟದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಕಾಫಿ ಕಾಯಿಗಳು ಉದುರಲು ಪ್ರಾರಂಭವಾಗಿವೆ. ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ನಷ್ಟ ಸಂಭವಿಸಿರುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ