ಉಕ್ಕಿ ಹರಿದ ಭದ್ರೆ ಜನರಿಗಿಲ್ಲ ನಿದ್ರೆ

Team Udayavani, Aug 10, 2019, 3:01 PM IST

10-Naveen-20

ಬಾಳೆಹೊನ್ನೂರು: ಆಶ್ಲೇಷ ಮಳೆ ಅಬ್ಬರಕ್ಕೆ ಭದ್ರಾ ನದಿಯಲ್ಲಿ ಮೂರನೇ ದಿನವೂ ಪ್ರವಾಹ ಉಂಟಾಗಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹಾಗಾಗಿ, ಬಾಳೆಹೊನ್ನೂರು ಮಾಗುಂಡಿ, ಹುಯಿಗೆರೆ, ಹೊರನಾಡು, ಕಳಸ, ಬಾಳೆಹೊಳೆ, ಕುದುರೆಮುಖ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಹೊಳೆಬಾಗಿಲು, ತೆಪ್ಪದಗಂಡಿ ಹಾಗೂ ಮಾಗುಂಡಿ ಮತ್ತು ಮಹಲ್ಗೋಡಿನಲ್ಲಿ ರಸ್ತೆ ಮೇಲೆ ನೀರು ನಿಂತಿದ್ದರಿಂದ ಸಂಚಾರಕ್ಕೆ ಅಡಚಣೆಯಾಗಿದೆ. ಬಾಳೆಹೊನ್ನೂರಿನಿಂದ ನರಸಿಂಹರಾಜಪುರ- ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಡೊಬಿಹಳ್ಳದಲ್ಲಿ ನೀರಿನ ಪ್ರಮಾಣ ಹೆಚ್ಚಾಗಿ ಅಕ್ಕಪಕ್ಕದಲ್ಲಿದ್ದ ಅಂಗಡಿ, ಮಳಿಗೆಗಳು ಹಾಗೂ ಬಹುತೇಕ ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನೆಲೆಯಲ್ಲಿ ಗೃಹೋಪಯೋಗಿ ಹಾಗೂ ದಿನಸಿ ವಸ್ತುಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಲಾಗಿದೆ.

ಮುಖ್ಯ ರಸ್ತೆಯ ಅಕ್ಕಪಕ್ಕದ ಗದ್ದೆ ಹಾಗೂ ಅಡಕೆ ತೋಟಗಳು ಜಲಾವೃತಗೊಂಡಿದ್ದು, ಸಾರ್ವಜನಿಕರು ಆಂತಕಗೊಂಡಿದ್ದಾರೆ. ಮುಂಜಾಗ್ರತೆಗಾಗಿ ನದಿ ಪಾತ್ರದ ಜನರಿಗೆ ಸುರಕ್ಷಿತ ಜಾಗಕ್ಕೆ ತೆರಳುವಂತೆ ಸೂಚಿಸಲಾಗಿದೆ.

ಶುಕ್ರವಾರವು ಕೂಡ ಮಳೆ ಪ್ರಮಾಣ ಜಾಸ್ತಿಯಾಗಿದ್ದು, ಭದ್ರಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಬಾಳೆಹೊನ್ನೂರಿನಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ವಾಟುಕುಡಿಗೆ ಎಂಬಲ್ಲಿ ಭದ್ರಾ ನದಿ ನೀರು ರಸ್ತೆಗೆ ಬಂದು ಸಂಚಾರ ಸ್ಥಗಿತಗೊಂಡಿದೆ.

ದ್ವೀಪವಾದ ಬನ್ನೂರು ಗ್ರಾಮ: ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿ ಬನ್ನೂರು, ಮಾಗುಂಡಿ ಹಾಗೂ ಹುಯಿಗೆರೆ ಗ್ರಾಮಸ್ಥರು ಪಟ್ಟಣದ ಸಂಪರ್ಕವನ್ನೇ ಕಡಿದುಕೊಂಡು ದ್ವೀಪದಲ್ಲಿ ವಾಸಿಸುವಂತಾಗಿದೆ. ಅಂಡುವಾನೆಗೆ ಹೋಗುವ ದಾರಿಯಲ್ಲಿ ಭದ್ರಾನದಿ ನೀರು ರಸ್ತೆ ಮೇಲೆ ಹರಿದಿದ್ದರಿಂದ ಬಿಕ್ಕರಣೆ, ಹುಯಿಗೆರೆ, ಮಾವಿನಕಟ್ಟೆ, ಮಣಬೂರು ಸೇರಿದಂತೆ ಇತರ ಗ್ರಾಮಗಳ ಸಂಪರ್ಕ ಕಡಿಗೊಂಡಿದೆ.

1995ರಲ್ಲಿ ಇದೇ ರೀತಿ ಪ್ರವಾಹ ಏರ್ಪಟ್ಟಿದ್ದು, ಈ ಬಾರಿ ಸತತ ಮೂರು ಬಾರಿ ಪ್ರವಾಹ ಉಂಟಾಗಿ ದಾಖಲೆ ನಿರ್ಮಿಸಿದೆ. ಭಾರೀ ಮಳೆ ಹಿನ್ನೆಲೆಯಲ್ಲಿ ನೀರಿನ ಮಟ್ಟ ಒಂದೇ ಸಮನೆ ಏರುತ್ತಿದ್ದು, ಜನರನ್ನು ಆಂತಕಕ್ಕೀಡು ಮಾಡಿದೆ.

ಪಟ್ಟಣದ ಡೋಬಿ ಹಳ್ಳದ ಸಮೀಪ ವಿದ್ಯುತ್‌ ಕಂಬವೊಂದು ವಾಲಿಕೊಂಡಿದ್ದು ಅಪಾಯದ ಹಂತದಲ್ಲಿತ್ತು. ತಕ್ಷಣವೇ ಮೆಸ್ಕಾಂ ಸಿಬ್ಬಂದಿ ಸ್ಥಳಕ್ಕಾಗಮಿಸಿ ವಾಲಿದ್ದ ಕಂಬವನ್ನು ಸರಿಪಡಿಸಿದರು. ನದಿ ನೀರು ಏರಿಕೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ ಪ್ರವಾಹವನ್ನು ವೀಕ್ಷಿಸಿದರು.

ವಿದ್ಯುತ್‌ ಸಂಪರ್ಕ ಕಡಿತ: ಅಕ್ಷರನಗರ, ಮೆಣಸುಕೂಡಿಗೆ, ಹಲಸೂರು, ದೊಡ್ಡಮುಂಡುಗ ಇನ್ನಿತರೆ ಭಾಗದಲ್ಲೂ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, ಪಟ್ಟಣದಲ್ಲಿ ಕುಡಿಯುವ ನೀರಿನ ಸರಬರಾಜಿಗೆ ಸಮಸ್ಯೆ ಉಂಟಾಗಿದೆ. ಭಾರೀ ಮಳೆಯಿಂದ ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಹೊಳೆಬಾಗಿಲಿನಲ್ಲಿ ಜಿಪಂ ಸದಸ್ಯೆ ಚಂದ್ರಮ್ಮ ಅವರ ಮನೆಗೆ ನೀರು ನುಗ್ಗಿದ್ದು, ಒಟ್ಟು 5ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿದೆ.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.