ಅಕ್ರಮವಾಗಿ ವಾಸವಿದ್ದ 12 ವಿದೇಶಿ ಪ್ರಜೆಗಳ ಬಂಧನ


Team Udayavani, Jun 17, 2019, 3:03 AM IST

arrest2

ಬೆಂಗಳೂರು: ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ವಾಸವಿದ್ದ 12 ವಿದೇಶಿ ಪ್ರಜೆಗಳನ್ನು ಯಲಹಂಕ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆಫ್ರಿಕಾದ ನೈಜಿರಿಯಾ, ಐವರಿಕೋಸ್ಟ್‌, ಕೀನ್ಯಾ, ಸೈರಾಲಿಯೋನೆ ದೇಶಗಳಿಂದ ವಿದ್ಯಾಭ್ಯಾಸ, ವ್ಯವಹಾರ, ಪ್ರವಾಸ ವೀಸಾದಡಿ ಭಾರತಕ್ಕೆ ಬಂದಿರುವ ಆರೋಪಿಗಳು, ವೀಸಾ ಅವಧಿ ನವೀಕರಣ ಮಾಡಿಕೊಳ್ಳದೆ ನಗರದಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದರು.

ಅಲ್ಲದೆ, ಈ ಪೈಕಿ ಕೆಲವರು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ವಿಶೇಷ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಪಾಸ್‌ಪೋರ್ಟ್‌ ಮತ್ತು ವಿದೇಶಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತರಲ್ಲಿ ಐವರು ವೀಸಾ ಅವಧಿ ಮುಗಿದರೂ ನಗರದಲ್ಲಿ ವಾಸಿಸುತ್ತಿದ್ದರೆ, ಆರು ಮಂದಿ ವಿದ್ಯಾಭ್ಯಾಸದ ವೀಸಾದಲ್ಲಿ ನಗರಕ್ಕೆ ಬಂದು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರು. ಒಬ್ಬ ವ್ಯಕ್ತಿ ಬಳಿ ನಕಲಿ ಪಾಸ್‌ಪೋರ್ಟ್‌ ಪತ್ತೆಯಾಗಿದೆ. ಹೀಗಾಗಿ ಆರೋಪಿಗಳು ಎಷ್ಟು ವರ್ಷಗಳ ಹಿಂದೆ ಭಾರತಕ್ಕೆ ಬಂದಿದ್ದಾರೆ,

ಅವರ ಹಿನ್ನೆಲೆ ಏನು ಎಂಬ ಕುರಿತು ಮಾಹಿತಿ ನೀಡುವಂತೆ ವಿದೇಶಿ ಪ್ರಾದೇಶಿಕ ನೋಂದಣಿ ಕಚೇರಿಗೆ(ಎಫ್ಆರ್‌ಆರ್‌ಒ) ಮನವಿ ಮಾಡಲಾಗಿದೆ. ಬಂಧಿತರ ವಿರುದ್ಧ ಯಾವುದೇ ಪ್ರಕರಣಗಳಿಲ್ಲ ಎಂಬುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿರುವುದಾಗಿ ಪೊಲೀಸರು ಹೇಳಿದರು.

35 ಮಂದಿ ಮನೆಗಳ ಮೇಲೆ ದಾಳಿ: ಶನಿವಾರ ತಡರಾತ್ರಿ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದ 35 ಮಂದಿ ವಿದೇಶಿ ಪ್ರಜೆಗಳ ಮೇಲೆ ದಾಳಿ ನಡೆಸಲಾಯಿತು. ಈ ವೇಳೆ 12 ಮಂದಿಯನ್ನು ಅಕ್ರಮ ವಾಸ ಆರೋಪದಡಿ ಬಂಧಿಸಲಾಗಿದೆ.

ಇನ್ನುಳಿದ 23 ಮಂದಿ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಅಪರಾಧ ಪ್ರಕರಣಗಳು ದಾಖಲಾಗಿದ್ದು, ಕೋರ್ಟ್‌ಗಳಲ್ಲಿ ವಿಚಾರಣೆ ನಡೆಯುತ್ತಿದೆ. ಹೀಗಾಗಿ ಅವರನ್ನು ಬಂಧಿಸಿಲ್ಲ. ಆದರೆ, ಅಂತಹ ವ್ಯಕ್ತಿಗಳ ಹೆಸರುಗಳನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ವಿಚಾರಣೆ ಮುಗಿಯುತ್ತಿದ್ದಂತೆ ವಶಕ್ಕೆ ಪಡೆದು ಗಡಿಪಾರು ಮಾಡಲು ಚಿಂತನೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.