
ಅಪಾರ್ಟ್‌ಮೆಂಟ್‌ನಲ್ಲಿ ಕಲುಷಿತ ನೀರು ಸೇವಿಸಿ 132 ಮಕ್ಕಳು ಅಸ್ವಸ್ಥ
Team Udayavani, Jun 9, 2023, 3:34 PM IST

ಬೆಂಗಳೂರು: ಕಲುಷಿತ ನೀರು ಸೇವಿಸಿ ಒಂದೇ ಅಪಾರ್ಟ್‌ಮೆಂಟ್‌ನ 132 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯ ಮಹಾವೀರ್ ರಾಂಚಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ.
ಈ ಸಂಬಂಧ ಅಪಾರ್ಟ್‌ಮೆಂಟ್ ನಿವಾಸಿಗಳು ಮಾಲೀಕರು ಮತ್ತು ನಿರ್ವಾಹಕರ ವಿರುದ್ಧ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.
ಬುಧವಾರ ಅಪಾರ್ಟ್‌ಮೆಂಟ್‌ನಲ್ಲಿರುವ ಮಕ್ಕಳು ನೀರು ಸೇವಿಸಿ ವಾಂತಿ ಮತ್ತು ಭೇದಿ ಮತ್ತು ಜ್ವರದಿಂದ ಅಸ್ವಸ್ಥಗೊಂಡಿದ್ದರು. ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ಆರು ಮಕ್ಕಳು ತೀವ್ರ ಸುಸ್ತಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು, ನಿಗಾವಹಿಸಲಾಗಿದೆ. ಇತರೆ ಮಕ್ಕಳು ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಎಂದು ಪೊಲೀಸರು ಹೇಳಿದರು.
ಮೂರು ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ: ಪ್ರಾಥಮಿಕ ತನಿಖೆಯಲ್ಲಿ ಅಪಾರ್ಟ್‌ಮೆಂಟ್ ನಲ್ಲಿರುವ ನೀರಿನ ಟ್ಯಾಂಕ್‌ಗಳನ್ನು ಮೂರು ವರ್ಷಗಳಿಂದ ಸ್ವಚ್ಛಗೊಳಿಸಿಲ್ಲ. ಹೀಗಾಗಿ ನೀರು ಕಲುಷಿತಗೊಂಡಿದೆ. ಈ ನೀರು ಸೇವಿಸಿದ ಪರಿಣಾಮ ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಹೀಗಾಗಿ ಆರೇಳು ಮಂದಿಯ ವೈದ್ಯರ ತಂಡ ಅಪಾರ್ಟ್‌ಮೆಂಟ್‌ನಲ್ಲೇ ಉಳಿದುಕೊಂಡಿದ್ದು, ಮಕ್ಕಳ ಮೇಲೆ ನಿಗಾವಹಿಸಿದೆ ಎಂದು ಪೊಲೀಸರು ಹೇಳಿದರು. ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ

World cup cricket ವೈಭವ ವಿಶ್ವಕಪ್ ಪ್ರಶಸ್ತಿಗಳ ಹ್ಯಾಟ್ರಿಕ್ ಸಾಧಿಸಿದ ಆಸ್ಟ್ರೇಲಿಯ

ಮಂಗಳೂರಿನಲ್ಲಿ ಹಸುರು ಹೈಡ್ರೋಜನ್ ಘಟಕ?- ವಿವಿಧ ಕಂಪೆನಿಗಳ ಆಸಕ್ತಿ; NMPA ಸನಿಹ ಸರ್ವೇ

Khalistani: ಇಂಗ್ಲೆಂಡ್ನಲ್ಲೂ ಖಲಿಸ್ಥಾನಿ ಪುಂಡಾಟ

Rain: ಕರ್ನಾಟಕ, ಕೇರಳ: ಉತ್ತಮ ವರ್ಷಧಾರೆ