159 ವಾಹನ ಕದ್ದಿದ್ದ 60 ಕಳ್ಳರ ಸೆರೆ


Team Udayavani, Aug 24, 2017, 11:49 AM IST

blore 4.jpg

ಬೆಂಗಳೂರು: ಮೋಜಿನ ಜೀವನಕ್ಕಾಗಿ ಕಾರು ಮತ್ತು ಬೈಕ್‌ಗಳನ್ನು ಕಳವು ಮಾಡುತ್ತಿದ್ದ 60 ಮಂದಿ ಕಳ್ಳರನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಇವರಿಂದ ಸುಮಾರು 80 ಲಕ್ಷ ಮೌಲ್ಯದ 159 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೇಂದ್ರ, ಉತ್ತರ, ಪಶ್ಚಿಮ ಹಾಗೂ ದಕ್ಷಿಣ ವಿಭಾಗಗಳಲ್ಲಿ ಬಂಧಿಸಲಾದ 60 ಆರೋಪಿಗಳಿಂದ 153 ದ್ವಿಚಕ್ರ, 5 ತ್ರಿಚಕ್ರ ಹಾಗೂ ನಾಲ್ಕು ಚಕ್ರದ ಒಂದು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ಅಶೋಕ್‌ನಗರ, ಕಬ್ಬನ್‌ಪಾರ್ಕ್‌, ವಿಧಾನಸೌಧ, ವಿವೇಕನಗರ, ಹಲಸೂರು ಗೇಟ್  ವೈಯಾಲಿಕಾವಲ್‌, ಸದಾಶಿವನಗರ, ಮಲ್ಲೇಶ್ವರಂ, ರಾಜಾಜಿನಗರ, ಬನಶಂಕರಿ, ಸುಬ್ರಹ್ಮಣ್ಯನಗರ, ಬಸವನಗುಡಿ ಸೇರಿದಂತೆ ನಗರದ ವಿವಿಧ ವಲಯಗಳ ಠಾಣೆಗಳಲ್ಲಿ ದಾಖಲಾಗಿದ್ದ 46 ವಾಹನ ಕಳವು ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳಿಂದ ವಶಕ್ಕೆ ಪಡೆಯಲಾಗಿದ್ದ ವಾಹನಗಳನ್ನು ಬುಧವಾರ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಮಾಲೀಕರಿಗೆ ಹಸ್ತಾಂತರಿಸಿದರು. ಜನರ ನಿರ್ಲಕ್ಷ್ಯವೇ ಕಳವಿಗೆ ಕಾರಣ: ಈ ವೇಳೆ ಮಾತನಾಡಿದ ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌, ಕಾರು, ದ್ವಿಚಕ್ರ ವಾಹನ
ಪಾರ್ಕಿಂಗ್‌ ಮಾಡುವ ಸಾರ್ವಜನಿಕರು ಅದನ್ನು ಬೀಗ ಹಾಕಿ ಭದ್ರವಾಗಿ ನಿಲ್ಲಿಸದೆ ನಿರ್ಲಕ್ಷ್ಯತನ ತೋರುವುದು ಕೂಡಾ ವಾಹನಗಳ ಕಳವಿಗೆ ಪ್ರಮುಖ ಕಾರಣ. ಸಾಕಷ್ಟು ಬಾರಿ ಜನ ಬೈಕ್‌, ಕಾರಿನಲ್ಲೇ ಕೀಲಿ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಹ್ಯಾಂಡಲ್‌ ಲಾಕ್‌ ಮಾಡುವುದಿಲ್ಲ. ಇದು ಕಳ್ಳರಿಗೆ ವಾಹನ ಕಳವು ಮಾಡಲು ಅವಕಾಶ ಕೊಟ್ಟಂತಾಗುತ್ತದೆ. ಈ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದರು. ಜತೆಗೆ ಸಾರ್ವಜನಿಕರು ವಾಹನದಲ್ಲೇ ಕೀ ಬಿಡಬಾರದು. ಜಿಪಿಎಸ್‌ ಟ್ರಾಕಿಂಗ್‌, ಅಲಾರ್ಮ್ ಸಿಸ್ಟಂ ಅಳವಡಿಸಿಕೊಳ್ಳಿ. ಕಾರುಗಳ ಕಿಟಕಿ ತೆರೆದ ಸ್ಥಿತಿಯಲ್ಲಿ ಬಿಡಬಾರದು. ಕಳವು ನಿರೋಧಕ ವ್ಯವಸ್ಥೆ ಅಳವಡಿಸಿಕೊಳ್ಳಿ. ಹಾಗೆಯೇ ಬೆಲೆ ಬಾಳುವ ವಸ್ತುಗಳನ್ನು ವಾಹನದಲ್ಲಿ ಇಡಬಾರದು ಎಂದು ಸಾರ್ವಜನಿಕರಿಗೆ ಆಯುಕ್ತರು ಸಲಹೆ ನೀಡದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.