209 ಕೋಟಿ ಮೌಲ್ಯದ ಆಸ್ತಿ ಜಪ್ತಿ

Team Udayavani, Jun 29, 2019, 3:07 AM IST

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ಐಎಂಎಗೆ ಸೇರಿದ ಸ್ಥಿರಾಸ್ತಿ ಹಾಗೂ ನಗದು ಸೇರಿ 209 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ ಮಾಡಿದೆ.

ಸಾರ್ವಜನಿಕರಿಂದ ಸಾವಿರಾರು ಕೋಟಿ ರೂ. ಹಣ ಹೂಡಿಕೆ ಮಾಡಿಸಿಕೊಂಡು ವಂಚಿಸಿ ತಲೆಮರೆಸಿಕೊಂಡಿರುವ ಐಎಂಎ ಮಾಲೀಕ ಮೊಹಮದ್‌ ಮನ್ಸೂರ್‌ ಖಾನ್‌ ವಿರುದ್ಧ ಪಿಎಂಎಲ್‌ಎ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿದೆ. ಜತೆಗೆ, ಮನ್ಸೂರ್‌ ವಿರುದ್ಧ ದೇಶಭ್ರಷ್ಟ ಅರ್ಥಿಕ ಅಪರಾಧ ಸಂಬಂಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗಿದೆ ಎಂದು ಇ.ಡಿ ತಿಳಿಸಿದೆ.

ಐಎಂಎ ಕಂಪನಿ ಮೂಲಕ ಮನ್ಸೂರ್‌ ಖಾನ್‌ ಹಾಗೂ ಇತರೆ ನಿರ್ದೇಶಕರು ಶೇ.2.5ರಿಂದ ಶೇ.3ರಷ್ಟು ಬಡ್ಡಿ ನೀಡುವುದಾಗಿ ಆಮಿಷವೊಡ್ಡಿ ಮಧ್ಯಮ ವರ್ಗದ ಸುಮಾರು 40 ಸಾವಿರ ಹೂಡಿಕೆದಾರರಿಂದ 4000 ಕೋಟಿ ರೂ. ಗಳನ್ನು ಸಂಗ್ರಹಿಸಿ ವಂಚಿಸಿದ್ದಾರೆ. ಆದರೆ, ವಾಸ್ತವದಲ್ಲಿ ಯಾವುದೇ ವ್ಯವಹಾರವನ್ನು ಕಂಪನಿ ನಡೆಸುತ್ತಿರಲಿಲ್ಲ.

ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಆರೋಪಿಗಳು ಸ್ಥಿರಾಸ್ತಿ ಖರೀದಿಗೆ ಬಳಸಿದ್ದಾರೆ. ಈ ಪೈಕಿ ಮೊಹಮದ್‌ ಮನ್ಸೂರ್‌ ಹೆಸರಿನಲ್ಲಿದ್ದ 197.98 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಐಎಂಎ ಮನ್ಸೂರ್‌ ಖಾನ್‌ ಹಾಗೂ ನಿರ್ದೇಶಕರು ಕಂಪನಿಯ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳು ಹಾಗೂ ಕೋ ಆಪರೇಟಿವ್‌ ಸೊಸೈಟಿಗಳಲ್ಲಿ 105 ಖಾತೆಗಳನ್ನು ತೆರೆದಿರುವುದು ತನಿಖೆ ವೇಳೆ ಗೊತ್ತಾಗಿದೆ. ಮನ್ಸೂರ್‌ ಖಾನ್‌ ಸಾರ್ವಜನಿಕರಿಂದ ಸಂಗ್ರಹಿಸಿದ ಹಣವನ್ನು ಆತನ ಸಹಚರರು ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾವಣೆ ಮಾಡುತ್ತಿದ್ದರು. ಇಂತಹ ಹಲವು ಖಾತೆಗಳಲ್ಲಿದ್ದ 12 ಕೋಟಿ. ರೂ.ಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ.

ನೋಟು ಅಮಾನ್ಯದ ವೇಳೆಯೂ ಗೋಲ್‌ಮಾಲ್‌!: ಆರೋಪಿ ಮನ್ಸೂರ್‌ ಖಾನ್‌, 2016ರಲ್ಲಿ ನೋಟು ಅಮಾನ್ಯಗೊಂಡ ಸಂಧರ್ಭದಲ್ಲಿ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 44 ಕೋಟಿ ರೂ. ಠೇವಣಿ ಇರಿಸಿದ್ದಾನೆ. ಐಎಂಎ ಕಂಪನಿಯಿಂದ ಆದಾಯ ತೆರಿಗೆ ಇಲಾಖೆಗೆ 22 ಕೋಟಿ ರೂ. ತೆರಿಗೆ ಪಾವತಿಸಿದ್ದು, ಅದೇ ಸಂಧರ್ಭದಲ್ಲಿ ಬ್ಯಾಂಕ್‌ವೊಂದರಲ್ಲಿ 11 ಕೋಟಿ ರೂ. ಠೇವಣಿ ಇಟ್ಟಿರುವುದು ತನಿಖೆಯಲ್ಲಿ ಗೊತ್ತಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೂಂದೆಡೆ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ್‌ ಯೋಜನೆ ಅಡಿಯಲ್ಲಿ ಬ್ಯಾಂಕ್‌ ಖಾತೆಗಳನ್ನು ತೆರೆಸಿರುವ ಐಎಂಎ ಪ್ರತಿನಿಧಿಗಳು, ಆ ಖಾತೆಗಳಲ್ಲಿ ಇರಿಸಿದ್ದ 11 ಕೋಟಿ ರೂ.ಗಳನ್ನೂ ಜಾರಿ ನಿರ್ದೇಶನಾಲಯ ಜಪ್ತಿ ಮಾಡಿಕೊಂಡಿದೆ.

ಆರೋಪಿ ಮನ್ಸೂರ್‌ ಖಾನ್‌ ವಂಚನೆ ಮಾಡುವ ಉದ್ದೇಶದಿಂದಲೇ ಕಂಪನಿ ತೆರೆದಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸುತ್ತಿದ್ದು, ಹಲವು ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶಭ್ರಷ್ಟ ಆರ್ಥಿಕ ಅಪರಾಧಿ ಸ್ಥಾನ!: ಆರೋಪಿ ಮನ್ಸೂರ್‌ ವಿರುದ್ಧ ಈಗಾಗಲೇ ಇ.ಡಿ ರೆಡ್‌ ಕಾರ್ನರ್‌ ನೋಟಿಸ್‌ ಜಾರಿಗೊಳಿಸಿದ್ದು, ಕೇಂದ್ರ ಸರ್ಕಾರ ಬ್ಲೂ ಕಾರ್ನರ್‌ ನೋಟಿಸ್‌ ಕೂಡ ಜಾರಿ ಮಾಡಿದೆ. ಒಂದು ವೇಳೆ ಮನ್ಸೂರ್‌ ವಿರುದ್ಧ ದೇಶಭ್ರಷ್ಟ ಆರ್ಥಿಕ ಅಪರಾಧ ಕೇಸ್‌ ದಾಖಲಾದರೆ, ಮನ್ಸೂರ್‌ ಖಾನ್‌, ರಾಜ್ಯದಲ್ಲಿಯೇ ಈ ಆರೋಪ ಹೊತ್ತ ಎರಡನೇ ವ್ಯಕ್ತಿಯಾಗಲಿದ್ದಾನೆ. ಇದೇ ವರ್ಷ ಜನವರಿಯಲ್ಲಿ ಉದ್ಯಮಿ ವಿಜಯ್‌ ಮಲ್ಯರನ್ನು ಪಿಎಂಎಲ್‌ಎ ವಿಶೇಷ ನ್ಯಾಯಾಲಯ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಿದೆ.

ಜಿಮ್‌ನಲ್ಲಿ 2.8 ಕೋಟಿ ಮೌಲ್ಯದ ವಸ್ತು ಜಪ್ತಿ: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪುಲಕೇಶಿನಗರದ ಪಾಟರಿ ರಸ್ತೆಯಲ್ಲಿ ಐಎಂಎಗೆ ಸೇರಿದ ಜಿಮ್‌ನಲ್ಲಿ ಶೋಧ ಕಾರ್ಯಾಚರಣೆ ನಡೆಸಿ 2.80 ಕೋಟಿ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಐಎಎಂ ಕಂಪನಿಗೆ ಸೇರಿದ ಜಿಮ್‌ ಎಂಬ ಮಾಹಿತಿ ತನಿಖೆ ವೇಳೆ ಬಯಲಾದ ಹಿನ್ನೆಲೆಯಲ್ಲಿ, ಅಡಪ್ಟ್ ಫಿಟ್ನೆಸ್‌ ಹೆಸರಿನ ಜಿಮ್‌ನಲ್ಲಿ ಶೋಧ ನಡೆಸಲಾಯಿತು. ಅಲ್ಲದೆ, ಮೊಹಮದ್‌ ಮನ್ಸೂರ್‌ ಖಾನ್‌ಗೆ ಸೇರಿದ ಇನೋವಾ ಕಾರು ಕೂಡ ಜಪ್ತಿ ಮಾಡಲಾಗಿದ್ದು, ಅದನ್ನು ಮನ್ಸೂರ್‌ ತನ್ನ ಸಹಚರನಿಗೆ ನೀಡಿದ್ದ. ಮತ್ತೂಂದೆಡೆ ಐಎಂಎಗೆ ಸೇರಿದ 92 ಬ್ಯಾಂಕ್‌ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಅತ್ತ ಸರ್ಕಾರ ಮಾರ್ಚ್‌ 5ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‌ಗೆ ಸಜ್ಜಾಗುತ್ತಿದ್ದರೆ, ಇತ್ತ ಸ್ಥಳೀಯ ಸಂಸ್ಥೆಗಳು ಬೆಂಗಳೂರಿಗೆ ಏನೇನು ಅವಶ್ಯಕತೆ ಇದೆ ಎಂಬುದರ...

  • ಬೆಂಗಳೂರು: ನಗರದ ಪಾರಂಪರಿಕ ಕಟ್ಟಡಗಳು ಹಾಗೂ ಪರಿಸರ ಸಂರಕ್ಷಣೆ ಉದ್ದೇಶದಿಂದ ತಜ್ಞರ ಸಮಿತಿ ರಚನೆ ಮಾಡಲು ಪಾಲಿಕೆ ನಿರ್ಧರಿಸಿದೆ. ಬೆಂಗಳೂರಿನಲ್ಲಿ ಕೃಷ್ಣರಾಜೇಂದ್ರ...

  • ಬೆಂಗಳೂರು: ಮಹಿಳೆಯೊಬ್ಬರ ಮನೆಗೆ ನುಗ್ಗಿ ದಾಂಧಲೆಗೆ ಮುಂದಾಗಿ, ಅವರ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳನ್ನು ಜಖಂ ಮಾಡಿದ್ದ ಆರೋಪಿ ಶ್ರೀನಿವಾಸ ಅಲಿಯಾಸ್‌ ಸೀಗಡಿ...

  • ಬೆಂಗಳೂರು: ಜನಪ್ರತಿನಿಧಿಗಳು ಮತ್ತು ಅಧಿ ಕಾರಿಗಳಿಗೆ ನೈತಿಕತೆ, ಶಿಸ್ತು ಅಗತ್ಯ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಹೇಳಿದರು. ಚುಂಚಶ್ರೀ ಬಳಗ ಭಾನುವಾರ ಜ್ಞಾನ ಜ್ಯೋತಿ...

  • ಯಲಹಂಕ: ಬೆಂಗಳೂರು ಉತ್ತರ ತಾಲೂಕು ದಾಸನಪುರ ಹೋಬಳಿಯ ಮಾದಾದರ, ಸಿದ್ದನಹೊಸಹಳ್ಳಿ ಮತ್ತು ಮಾದನಾಯಕನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿ "ಮಾದನಾಯಕನಹಳ್ಳಿ...

ಹೊಸ ಸೇರ್ಪಡೆ

  • ಜಗಳೂರು: ಸಾರ್ವಜನಿಕ ಉದ್ಯಾನವನ ಮತ್ತು ರಸ್ತೆ ಮಧ್ಯೆ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ತೆರವು ಕಾರ್ಯಾಚರಣೆಯನ್ನು ಭಾನುವಾರ...

  • ಕುಷ್ಟಗಿ: ಮಾರುಕಟ್ಟೆಯಲ್ಲಿ ವಿವಿಧ ಕಂಪನಿ, ಬ್ರ್ಯಾಂಡ್‌ಗಳ ಪೊರಕೆಗಳ ಅಬ್ಬರಕ್ಕೆ ಈಚಲು ಗರಿಯಿಂದ ತಯಾರಿಸಿದ ಈಚಲು, ಹುಲ್ಲಿನ ಪೊರಕೆ ಬೇಡಿಕೆ ಕ್ರಮೇಣ ಮಂಕಾಗುತ್ತಿದೆ....

  • ಶಹಾಪುರ: ಶಾಲಾ ದಿನಗಳಲ್ಲಿ ಮಕ್ಕಳಿಗೆ ಶಿಸ್ತು, ಸಂಯಮ ಹಾಗೂ ರಾಷ್ಟ್ರ ಪ್ರಜ್ಞೆ ಅರಿವು ಮಾಡಿಕೊಡುವ ಕರ್ನಾಟಕ ಪೊಲೀಸ್‌ ಇಲಾಖೆ ಯೋಜನೆಯೇ ಎಸ್‌ಪಿಸಿ ತುಂಬಾ ಉಪಯುಕ್ತವಾದದು...

  • ಕಲಬುರಗಿ: ನಮಗೆ ಪೆಟ್ಟು ಬಿದ್ದ ತಕ್ಷಣ "ಅಮ್ಮ' ಎನ್ನುತ್ತೇವೆ ಹೊರತು, "ಅಂಟಿ' ಅನ್ನಲ್ಲ. ಅಮ್ಮ ಎನ್ನುವ ಪದ ಹೃದಯದಿಂದ ಬರುವಂತದ್ದು, ಹಾಗೆ ಕನ್ನಡ ಭಾಷೆ ಕಣ- ಕಣದಲ್ಲಿ...

  • ಹನುಮಸಾಗರ: ಕೊಪ್ಪಳ ಜಿಲ್ಲೆಯ ಅತಿ ದೊಡ್ಡ ಗ್ರಾಪಂ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹನುಮಸಾಗರ ಗ್ರಾಮದ ಪ್ರವಾಸಿ ಮಂದಿರ(ಐಬಿ) ಕುಡಿಯುವ ನೀರು ಹಾಗೂ ಸಿಬ್ಬಂದಿ...