ಬಿಸಿಯೂಟ ಸೇವಿಸಿ 22 ಮಕ್ಕಳು ಅಸ್ವಸ್ಥ

Team Udayavani, Jan 29, 2019, 6:44 AM IST

bisiyoota.jpg

ಮಹದೇವಪುರ: ಬಿಸಿಯೂಟ ಸೇವಿಸಿ 22 ಮಕ್ಕಳು ಅಸ್ವಸ್ಥರಾದ ಘಟನೆ ಬೆಂಗಳೂರು ಪೂರ್ವ ತಾಲೂಕಿನ ನಿಂಬೆಕಾಯಿಪುರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

ಮಧ್ಯಾಹ್ನದ ಬಿಸಿಯೂಟದ ವೇಳೆ ಮಕ್ಕಳು ಪುಳಿಯೋಗರೆ-ಮೊಸರು, ಪಾಯಸ, ಉಪ್ಪಿನಕಾಯಿ ಸೇವಿಸಿದ್ದರು. ಊಟ ಆದ 30 ನಿಮಿಷದ ನಂತರ 22 ಮಕ್ಕಳು ಅಸ್ವಸ್ಥರಾಗಿದ್ದು, 10 ಮಕ್ಕಳು ವಾಂತಿ, ಹೊಟ್ಟೆ ನೋವಿನಿಂದ ತೀವ್ರ ಬಳಲಿದ್ದಾರೆ. ಕೂಡಲೆ ಶಾಲೆ ಶಿಕ್ಷಕರು ಎಲ್ಲ ಮಕ್ಕಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೋಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಮಕ್ಕಳು ಅಸ್ವಸ್ಥರಾದ ಕೋಡಲೇ ಎಚ್ಚೆತ್ತುಕೊಂಡ ಶಿಕ್ಷಕರು, ಗ್ರಾಮಸ್ಥರ ನೆರವಿನಿಂದ ಎಲ್ಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 22 ಮಕ್ಕಳ ಪೈಕಿ ವಾಂತಿ ಮಾಡಿಕೊಂಡು, ತೀವ್ರ ಅಸ್ವಸ್ಥರಾಗಿದ್ದ 10 ಮಕ್ಕಳು ಚಿಕಿತ್ಸೆ ನಂತರ ಚೇತರಿಸಿಕೊಂಡಿದ್ದಾರೆ. ಈಗಾಗಲೇ ಸಿಸಿ ಕ್ಯಾಮೆರಾ ಫ‌ುಟೇಜ್‌ ಸಂಗ್ರಹಿಸಿದ್ದು, ಘಟನೆ ಸಂಬಂಧ ಸಮಗ್ರ ತನಿಖೆ ನಡೆಸಲಾಗುವುದು ಎಂದು ಪೂರ್ವ ತಾಲೂಕು ಬಿಇಒ ಸಲೀಂ ಪಾಷ ಹೇಳಿದರು.

ನಿಂಬೆಕಾಯಿಪುರ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 25 ವಿದ್ಯಾರ್ಥಿಗಳು ಆಹಾರ ಸೇವಿಸಿದ್ದು, 10 ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ. ಉಳಿದ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗಿಲ್ಲ. ಅಲ್ಲದೆ ಈ ಶಾಲೆ ಮಕ್ಕಳು ಸೇವಿಸಿದ ಆಹಾರವನ್ನೇ ಅಕ್ಕಪಕ್ಕದ ಶಾಲೆಗಳಿಗೂ ಪೂರೈಸಲಾಗಿದೆ. ಆದರೆ, ಬೇರೆ ಯಾವ ಶಾಲೆಯಲ್ಲೂ ಅವಘಡ ಸಂಭವಿಸಿಲ್ಲ.

ಆಹಾರ ಪರೀಕ್ಷೆಯ ವರದಿ ಬಂದ ನಂತರ ಮಕ್ಕಳು ಅಸ್ಪಸ್ಥರಾಗಲು ಕಾರಣವೇನು ಎಂದು ತಿಳಿಯಲಿದೆ ಎಂದು ಬಿಇಒ ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಕೆಂಪರಾಜು ಹಾಗೂ ಮಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ವೇಣು, ಶಾಲೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿ ಪೋಷಕರಿಗೆ ಧೈರ್ಯ ಹೇಳಿದರು.

ಮಕ್ಕಳು ಅಪಾಯದಿಂದ ಪಾರು
ಹೊಸಕೋಟೆ:
ಸಮೀಪದ ನಿಂಬೆಕಾಯಿಪುರದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿ, ಪಟ್ಟಣದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಒಂದನೇ ತರಗತಿಯ ದೀಕ್ಷಾ, ಇತಿಶ್ರೀ, ಚಂದ್ರಿಕಾ, 2ನೇ ತರಗತಿಯ ದಿವ್ಯಾ,

ಕೌಶಿಕ್‌, 4ನೇ ತರಗತಿಯ ಪ್ರಶಾಂತ್‌, ಪ್ರಿಯಾ, 5ನೇ ತರಗತಿಯ ಭಾರ್ಗವಿ, ಬೀಬಿಜಾನ್‌, ನಂದಿತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 18 ವಿದ್ಯಾರ್ಥಿಗಳಿಗೆ ಹೊರರೋಗಿಗಳ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಆರೋಗ್ಯವಾಗಿದ್ದಾರೆ ಎಂದು ಡಾ.ನಾಗರಾಜ್‌ ಮಾಹಿತಿ ನೀಡಿದರು. ಗ್ರಾಮದ ಮುಖಂಡರು, ಆವಲಹಳ್ಳಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದ್ದರು.

ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಮಕ್ಕಳು ಚೇತರಿಸಿಕೊಂಡಿದ್ದಾರೆ. ಮಕ್ಕಳ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಮಂಡೂರು ಗ್ರಾ.ಪಂ ಭರಿಸಲಿದೆ.
-ವೇಣು, ಗ್ರಾ.ಪಂ ಅಧ್ಯಕ್ಷ

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.