22ರಿಂದ ನಗರ  ಜಿಲ್ಲಾ ಸಾಹಿತ್ಯ ಸಮ್ಮೇಳನ


Team Udayavani, Apr 15, 2017, 11:51 AM IST

subhash.jpg

ಬೆಂಗಳೂರು: ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ 11ನೇ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಏ.22 ಮತ್ತು 23ರಂದು ವಿಜಯನಗರದ ಬಿಎಂಟಿಸಿ ಬಸ್‌ ನಿಲ್ದಾಣದ ಮುಂಭಾಗದ ಮೆಟ್ರೋ ಆವರಣದಲ್ಲಿ ನಡೆಯಲಿದೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬೆಂಗಳೂರು ನಗರ ಜಿಲ್ಲಾ ಕಸಾಪ ಅಧ್ಯಕ್ಷ ಮಾಯಣ್ಣ , ಎರಡು ದಿನ ನಡೆಯಲಿರುವ ನಗರ ಜಿಲ್ಲೆ 11ನೇ ಕನ್ನಡ ಸಾಹಿತ್ಯ ಸಮ್ಮೇಳನಾ­ಧ್ಯಕ್ಷರಾಗಿ ಚುಟುಕು ಕವಿ ಜರಗನಹಳ್ಳಿ ಶಿವಶಂಕರ್‌ ಆಯ್ಕೆಯಾಗಿದ್ದಾರೆ. ಏ.22ರಂದು ಬೆಳಗ್ಗೆ 8ಕ್ಕೆ ಸಮ್ಮೇಳನಾ­ಧ್ಯಕ್ಷರ ಮೆರವಣಿಗೆ ವಿಜಯನಗರದ ಪ್ರಮುಖ ರಸ್ತೆಗಳ ಮೂಲಕ ಸಮ್ಮೇಳನ ಸಭಾಂಗಣದ ವರೆಗೆ ನಡೆಯಲಿದೆ.

ವಸತಿ ಸಚಿವ ಎಂ.ಕೃಷ್ಣಪ್ಪ ಮೆರವಣಿಗೆ ಉದ್ಘಾಟಿಸಲಿದ್ದಾರೆ. ವೇದಿಕೆ ಕಾರ್ಯಕ್ರಮಗಳನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಉದ್ಘಾಟಿಸುವರು ಎಂದು ಹೇಳಿದರು. ಸಮ್ಮೇಳನದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಕೃತಿಗಳನ್ನು ಕೇಂದ್ರ ಸಚಿವ ಅನಂತಕುಮಾರ್‌ ಲೋಕಾರ್ಪಣೆ ಮಾಡುವರು. ಎಸ್‌.ಜಿ.ಮಾಲತಿ ಶೆಟ್ಟಿ ಅವರ “ಮಹಾಸಂಗಮ’ ಕೃತಿ, ಸ್ಮರಣ ಸಂಚಿಕೆ ಬಿಡುಗಡೆಯಾಗಲಿವೆ.

ಕನ್ನಡ ವಿಜ್ಞಾನ ಮತ್ತು ಮಾಧ್ಯಮ ಕುರಿತ ಮೂರು ವಿಚಾರಗೋಷ್ಠಿಗಳು, ಯುವ ಕವಿಗಳು ಮತ್ತು ಹಿರಿಯ ಕವಿಗಳಿಗಾಗಿ ಎರಡು ಕವಿಗೋಷ್ಠಿಗಳು ನಡೆಯಲಿವೆ. ಸಮ್ಮೇಳನಾಧ್ಯಕ್ಷರೊಂದಿಗೆ ಸಂವಾದ, ವಿವಿಧ ಕ್ಷೇತ್ರಗಳಲ್ಲಿ ಆದರ್ಶಪ್ರಾಯ ಕೆಲಸ ಮಾಡಿರುವ 110 ಸಾಧಕರಿಗೆ ಸನ್ಮಾನ, ಬಹಿರಂಗ ಅಧಿವೇಶನವಿದ್ದು, ಪ್ರತಿ ದಿನ ಸಂಜೆ 6ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. 

ಸಮ್ಮೇಳನಕ್ಕೆ ಹಿರಿಯ, ಕಿರಿಯ ಸಾಹಿತಿಗಳು, ಕವಿಗಳು, ಕನ್ನಡ ಪರಸಂಘಟನೆಗಳು, ಕಲಾವಿದರು, ಹೋರಾಟಗಾರರು, ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಲಿದ್ದಾರೆ. ಪರಭಾಷಿಗರಿಗೆ ಕನ್ನಡದ ಕುರಿತು ಜಾಗೃತಿ ಮೂಡಿಸುವುದರ ಜತೆಗೆ, ಕನ್ನಡ ನಾಡು, ನುಡಿ, ಸಂಸ್ಕೃತಿಯ ಪ್ರಾತಿನಿಧಿಕ ಸಂಸ್ಥೆಯಾಗಿ ಕಸಾಪ ಈ ಸಮ್ಮೇಳನ ಆಯೋಜಿಸಿದೆ.

ಕನ್ನಡ ಉಳಿವು, ಅಭಿವೃದ್ಧಿಗೆ ಪೂರಕವಾಗಿ ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಶ್ರಮಿಸುತ್ತಿದ್ದು, ಈ ಸಮ್ಮೇಳನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಎಂ.ತಿಮ್ಮಯ್ಯ, ಸಿದ್ದಯ್ಯ, ನಾ.ಶ್ರೀಧರ್‌, ಪಾಲನೇತ್ರ ಸೇದಂತೆ ಇತರರು ಉಪಸ್ಥಿತರಿದ್ದರು. 

ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕ
ಬೆಂಗಳೂರು ಇಂಡಿಯನ್‌ ಎಪಿಲೆಪ್ಸಿ ಅಸೋಸಿಯೇಷನ್‌ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯದ ಮಾಜಿ ನಿರ್ದೇಶಕ ಡಾ.ಜಿ.ಟಿ. ಸುಭಾಷ್‌ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ಸಂಸ್ಥೆಯ ಸಭೆಯಲ್ಲಿ ಸುಭಾಷ್‌ ಅವರನ್ನು ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಯಿತು ಎಂದು ಖಜಾಂಚಿ ಡಾ.ಮುರಳೀಧರನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

David Warner retired from all formats of the cricket

David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

2-DKSHI

Subramanya: ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

Lok Sabha Speaker: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ. ಸುರೇಶ್ ನಾಮಪತ್ರ ಸಲ್ಲಿಕೆ

Speaker Election: ಲೋಕಸಭಾ ಸ್ಪೀಕರ್ ಚುನಾವಣೆಗೆ ಓಂ ಬಿರ್ಲಾ, ಕೆ.ಸುರೇಶ್ ನಾಮಪತ್ರ ಸಲ್ಲಿಕೆ

9

ಡಿಸೆಂಬರ್‌ 20, 21 ಹಾಗೂ 22 ರಂದು ಮಂಡ್ಯ ಸಾಹಿತ್ಯ ಸಮ್ಮೇಳನ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ

DCM ಕೂಗು ಸರ್ಕಾರ ಪತನವಾಗುವರೆಗೂ ಮುಂದುವರೆಯುತ್ತೆ: ಸಿಟಿ ರವಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drainage

Bengaluru ಒಳಚರಂಡಿ: 3000 ಅನಧಿಕೃತ ಸಂಪರ್ಕ ಪತ್ತೆ

5

Dengue fever: ಪಾಲಿಕೆ ಆಯುಕ್ತರಿಗೂ ಡೆಂಘಿ ಜ್ವರ; ಹೆಚ್ಚುತ್ತಿವೆ ಪ್ರಕರಣ

54

ತಾಯಿ ನಿಂದಿಸಿದ್ದಕ್ಕೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಕೂಲಿ ಕಾರ್ಮಿಕನ ಕೊಲೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

3

ವಿದ್ಯಾರ್ಥಿನಿ ಪ್ರಭುದ್ಯಾ ಕೊಲೆ ಪ್ರಕರಣ ಸಿಐಡಿಗೆ ವರ್ಗಾವಣೆ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

5-Kunigal

Kunigal: ಗಮನ ಬೇರೆಡೆಗೆ ಸೆಳೆದು 3.30 ಲಕ್ಷ ರೂ. ಹಣ ದೋಚಿ ಪರಾರಿಯಾದ ದುಷ್ಕರ್ಮಿಗಳು

David Warner retired from all formats of the cricket

David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್

ಉರ್ವ ಬಯೋಗ್ಯಾಸ್‌ ಸಾವರದಿಂದ ಇ-ವಾಹನಗಳಿಗೆ ಚಾರ್ಜಿಂಗ್‌!

ಉರ್ವ ಬಯೋಗ್ಯಾಸ್‌ ಸಾವರದಿಂದ ಇ-ವಾಹನಗಳಿಗೆ ಚಾರ್ಜಿಂಗ್‌!

4-sirsi

Sirsi: ಫಂಡರಾಪುರಕ್ಕೆ ವಿಶೇಷ ರೈಲ್ವೆ: ಕಾಗೇರಿ ಮನವಿಗೆ ಕೇಂದ್ರ ಸಚಿವರ ತಕ್ಷಣ ಸ್ಪಂದನೆ

3-Sagara

Sagara: ಭಾಗವತ ವೇಣುಗೋಪಾಲ ಕೆಳಮನೆ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.