ನೌಕರಿ ಕೊಡಿಸುವುದಾಗಿ ಮಹಿಳೆಗೆ 22 ಲಕ್ಷ ರೂ. ವಂಚನೆ

Team Udayavani, Aug 6, 2019, 10:27 AM IST

ಬೆಂಗಳೂರು: ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬರಿಂದ 22 ಲಕ್ಷ ರೂ. ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಅಳ್ಳಾಳಸಂದ್ರ ನಿವಾಸಿ ಬಿ.ಟಿ.ಪುಷ್ಪಲತಾ ಎಂಬವರು ನೀಡಿದ ದೂರಿನ ಮೇರೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಡಿ.ಸಿ.ಮಂಜೇಗೌಡ(55) ಎಂಬವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿಕೊಂಡಿರುವ ಸಂಜಯನಗರ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಫೆಬ್ರವರಿಯಲ್ಲಿ 2017ರಲ್ಲಿ ಪುಷ್ಪಲತಾ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಹುದ್ದೆಗೆ ಪುಷ್ಪಲತಾ ಅರ್ಜಿ ಸಲ್ಲಿಸಿದ್ದರು. ಈ ವಿಚಾರವನ್ನು ಪುಷ್ಪಲತಾ ತಂದೆ ತಮ್ಮ ದೂರದ ಸಂಬಂಧಿ ಆರೋಪಿ ಮಂಜೇಗೌಡರಿಗೆ ತಿಳಿಸಿ, ತಮ್ಮ ಪುತ್ರಿಗೆ ಕೃಷಿ ಇಲಾಖೆಯಲ್ಲಿ ಕೆಲಸ ಕೊಡಿಸುವಂತೆ ಕೇಳಿಕೊಂಡಿದ್ದರು. ಆ ವೇಳೆ ಆರೋಪಿ ತನಗೆ ರಾಜಕೀಯ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳ ಪರಿಚಯವಿದ್ದು, ಪರೀಕ್ಷೆ ಬರೆದು ನಂತರ ಕರೆ ಮಾಡುವಂತೆ ಹೇಳಿ, 25 ಲಕ್ಷ ರೂ. ಕೊಟ್ಟರೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಪುಷ್ಪಲತಾ ಹಣದ ವಿಚಾರವನ್ನು ತಮ್ಮ ತಂದೆ ಜತೆ ಮಾತನಾಡುವಂತೆ ಹೇಳಿದ್ದರು. ಆಗ ಆರೋಪಿ, ‘ನಿಮ್ಮ ತಂದೆಗೆ ಎಲ್ಲ ವಿಚಾರವನ್ನು ತಿಳಿಸಿದ್ದು, ಅವರೊಂದಿಗೇ ಬೆಂಗಳೂರಿಗೆ ಬಂದು ಮಾತನಾಡುತ್ತೇನೆ’ ಎಂದಿದ್ದರು ಎಂದು ಪುಷ್ಪಲತಾ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಈ ಹಿನ್ನೆಲೆಯಲ್ಲಿ ಆರೋಪಿಗೆ ಮುಂಗಡ ಹಣ 10 ಲಕ್ಷ ರೂ. ಹಾಗೂ ನಂತರ 2017 ಸೆ.6ರಂದು ಮತ್ತೂಮ್ಮೆ ಹತ್ತು ಲಕ್ಷ ರೂ. ಕೊಡಲಾಗಿತ್ತು. ಅ. 3ರಂದು ಇನ್ನುಳಿದ ಎರಡು ಲಕ್ಷ ರೂ. ಕೊಟ್ಟಿದ್ದೇವೆ. ಆದರೆ, 2017ರ ನವೆಂಬರ್‌ನಲ್ಲಿ ಪರೀಕ್ಷೆಯ ಫ‌ಲಿತಾಂಶ ಬಂದಿದ್ದು, ಆದರೆ, ಇಲಾಖೆಗೆ ಆಯ್ಕೆಯಾಗಲಿಲ್ಲ. ಈ ಸಂಬಂಧ ಆರೋಪಿ ಬಳಿ ಪ್ರಶ್ನಿಸಿದಾಗ ಈಗಾಗಲೇ ಸಂಬಂಧಿಸಿದ ವ್ಯಕ್ತಿಗಳಿಗೆ ಹಣ ಕೊಡಲಾಗಿತ್ತು. ಆದರೂ ಕೆಲಸ ಆಗಿಲ್ಲ. ಹೀಗಾಗಿ ಮೂರು ತಿಂಗಳಲ್ಲಿ ಹಣ ವಾಪಸ್‌ ಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಆರೋಪಿ ಇದುವರೆಗೂ ಹಣ ವಾಪಸ್‌ ಕೊಟ್ಟಿಲ್ಲ. ಹೀಗಾಗಿ ಆರೋಪಿ ಡಿ.ಸಿ.ಮಂಜೇಗೌಡ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಪುಷ್ಪಲತಾ ದೂರಿನಲ್ಲಿ ಕೋರಿದ್ದಾರೆ ಎಂದು ಸಂಜಯನಗರ ಪೊಲೀಸರು ಹೇಳಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ಬೆಂಗಳೂರು: ಅಂಗನವಾಡಿ ದಾಖಲಾತಿ, ಮಕ್ಕಳ ಅಪೌಷ್ಠಿಕತೆಯ ನಿಖರ ಸಂಖ್ಯೆ, ಟಿ.ಟಿ ಚುಚ್ಚುಮದ್ದು ಸೇರಿ ವಿವಿಧ ಮಾಹಿತಿ ನೀಡಲು ಅನುಕೂಲವಾಗಲೆಂದು ಮಹಿಳಾ ಮತ್ತು ಮಕ್ಕಳ...

  • ಬೆಂಗಳೂರು: ಯೋಜನೆ ಇರುವುದು "ಡಬಲ್‌ ಡೆಕರ್‌'. ಆದರೆ, ಆಗುತ್ತಿರುವುದು ಟ್ರಿಪಲ್‌ ಡೆಕರ್‌! ಹೌದು, ಆರ್‌.ವಿ.ರಸ್ತೆ- ಬೊಮ್ಮಸಂದ್ರ ನಡುವೆ ರಸ್ತೆ ಕಂ ರೈಲು ಮಾರ್ಗ...

  • ಬೆಂಗಳೂರು: ಅಕ್ಟೋಬರ್‌ನಲ್ಲಿ ನಡೆಯುವ ನಾಡಹಬ್ಬ ಮೈಸೂರು ದಸರಾಕ್ಕೆ ದೇಶ-ವಿದೇಶಿಗರನ್ನು ಆಕರ್ಷಿಸಲು ಏಪ್ರಿಲ್‌ ತಿಂಗಳಿನಿಂದ ಸಿದ್ಧತೆ ಆರಂಭಿಸಲಾಗುವುದು ಎಂದು...

  • ಬೆಂಗಳೂರು: ನಗರದಲ್ಲಿ ವಾಸವಿರುವ ಮಂಗಳಮುಖೀಯರ ಶ್ರೇಯೋಭಿವೃದ್ಧಿ ಹಾಗೂ ಅವರ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಕಳೆದ ಮೂರು ವರ್ಷಗಳಿಂದ ಪಾಲಿಕೆಯ ಬಜೆಟ್‌ನಲ್ಲಿ...

  • ಬೆಂಗಳೂರು: ಒತ್ತಡ ನಿವಾರಣೆಗಾಗಿ ಈಶಾನ್ಯ ಪೊಲೀಸರಿಗೆ ಮೂರುದಿನಗಳ ಕಾಲ "ಜುಂಬಾ' ನೃತ್ಯ ತರಬೇತಿ ನೀಡಿದ್ದು ಪೊಲೀಸ್‌ ಸಿಬ್ಬಂದಿ ಕುಣಿದು ಕುಪ್ಪಳಿಸಿರುವ ವಿಡಿಯೋ...

ಹೊಸ ಸೇರ್ಪಡೆ