ಮಹಿಳಾ ಮತದಾರರಿಗೆ 250 “ಸಖಿ’ ಮತಗಟ್ಟೆ

Team Udayavani, Apr 3, 2019, 3:00 AM IST

mahila

ಬೆಂಗಳೂರು: ಮಹಿಳಾ ಮತದಾರರನ್ನು ಮತಗಟ್ಟೆಗೆ ಸೆಳೆಯುವ ಉದ್ದೇಶದಿಂದ ಚುನಾವಣಾ ಆಯೋಗ ಬೆಂಗಳೂರಿನ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 250 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಿದೆ ಎಂದು ಚುನಾವಣಾಧಿಕಾರಿ ಮಂಜುನಾಥ್‌ ಪ್ರಸಾದ್‌ ಹೇಳಿದರು.

ಬಿಬಿಎಂಪಿ, ವಾರ್ತಾ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ಚುನಾವಣಾ ಆಯೋಗದ ಸಹಯೋಗದಲ್ಲಿ ಮಂಗಳವಾರ ಕಬ್ಬನ್‌ ಪಾರ್ಕ್‌ನಲ್ಲಿ ಆಯೋಜಿಸಿದ್ದ “ಸಖಿ ಮಾದರಿ ಮತಗಟ್ಟೆ’ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳಾ ಮತದಾರರ ಸಂಖ್ಯೆಗೆ ಅನುಗುಣವಾಗಿ ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಮೂರು ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 8,500 ಮತಗಟ್ಟೆಗಳಿದ್ದು, ಈ ಪೈಕಿ ಮಹಿಳೆಯರಿಗೆ 250 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಕಳೆದ ವಿಧಾನಸಭಾ ಚುನಾವಣೆಯಲ್ಲಿ 23 ಪಿಂಕ್‌ ಬೂತ್‌ಗಳನ್ನು ಸ್ಥಾಪಿಸಲಾಗಿತ್ತು.

ಈ ಬಾರಿ ಸಖಿ ಮತಗಟ್ಟೆಗಳನ್ನು ಪರಿಚಯಿಸಲಾಗುತ್ತಿದೆ. ಮಹಿಳಾ ಅಧಿಕಾರಿಗಳೇ ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಮಹಿಳೆಯರು ಮುಕ್ತ ಮತದಾನ ಮಾಡಲು ಪ್ರೇರೇಪಿಸುವ ಉದ್ದೇಶದಿಂದ ಸಖಿ ಮತಗಟ್ಟೆಗಳನ್ನು ಪರಿಚಯಿಸಲಾಗಿದೆ. ಇದರಲ್ಲಿ ಪುರುಷರು ಮತಚಲಾಯಿಸಬಹುದು ಎಂದು ಹೇಳಿದರು.

ಮತದಾನ ಪ್ರಕ್ರಿಯೆಯಲ್ಲಿ ಮಹಿಳಾ ಮತದಾರರು ಕಡಿಮೆಯಾಗುತ್ತಿರುವುದರಿಂದ, ಮಹಿಳೆಯರಿಗಾಗಿಯೇ ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಸಖಿ ಮತಗಟ್ಟೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದರು.

ನಟಿ ಪಾವನಿ, ರೂಪದರ್ಶಿಯರಾದ ಮಮತಾ, ಪ್ರತಿಭಾ ಸಂಜೀವ್‌ ಮಠ, ತೋಟಗಾರಿಕೆ ಇಲಾಖೆ ನಿರ್ದೇಶಕ ಎಂ.ವಿ.ವೆಂಕಟೇಶ್‌ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.