42 ಸಾವಿರ ವಿದ್ಯಾರ್ಥಿಗಳಿಗಿಂದು ಪದವಿ


Team Udayavani, Jan 27, 2017, 11:09 AM IST

dgree.jpg

ಬೆಂಗಳೂರು: ಬೆಂಗಳೂರು ವಿಶ್ವ ವಿದ್ಯಾಲಯದ 52ನೇ ಘಟಿಕೋತ್ಸವ ಶುಕ್ರವಾರ (ಜ.27) ಸೆಂಟ್ರಲ್‌ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯಲಿದೆ. ಘಟಿಕೋತ್ಸವದಲ್ಲಿ ಒಟ್ಟಾರೆ 42,245 ವಿದ್ಯಾ ರ್ಥಿಗಳು ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು 84 ವಿದ್ಯಾರ್ಥಿಗಳು ಪಿಎಚ್‌ಡಿ ಪದವಿ ಪಡೆಯಲಿದ್ದಾರೆ ಬೆಂಗಳೂರು ವಿವಿ ಕುಲಪತಿ ಡಾ.ಬಿ.ತಿಮ್ಮೇಗೌಡ ತಿಳಿಸಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿ ಗೋಷ್ಠಿಯಲ್ಲಿ ಘಟಿಕೋತ್ಸವದ ಕುರಿತು ವಿವರಣೆ ನೀಡಿದ ಅವರು, ಘಟಿಕೋತ್ಸದಲ್ಲಿ ರಾಷ್ಟ್ರೀಯ ಮೌಲಿಕರಣ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಪ್ರೊ.ಧೀರೇಂದ್ರಪಾಲ್‌ ಸಿಂಗ್‌ ಅತಿಥಿಯಾಗಿ ಭಾಗವಹಿಸಲಿ ದ್ದಾರೆ. ಅಲ್ಲದೆ, ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜುಬಾಯಿ ವಾಲಾ ಅವರು ಅಧ್ಯಕ್ಷತೆ ವಹಿಸಲಿದ್ದು, ಉನ್ನತ ಶಿಕ್ಷಣ ಸಚಿವ ಬಡವರಾಜ ರಾಯ ರೆಡ್ಡಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು. 

ಘಟಿಕೋತ್ಸವದಲ್ಲಿ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಸ್ವೀಕರಿ ಸಲು ಒಟ್ಟು 42,245 ವಿದ್ಯಾರ್ಥಿಗಳು (18,453 ವಿದ್ಯಾರ್ಥಿಗಳು, 23,793 ವಿದ್ಯಾರ್ಥಿನಿಯರು) ಅರ್ಹರಾಗಿ ದ್ದಾರೆ. ಅಲ್ಲದೆ, 84 ವಿದ್ಯಾರ್ಥಿಗಳು (58 ವಿದ್ಯಾರ್ಥಿಗಳು, 26 ವಿದ್ಯಾರ್ಥಿ ನಿಯರು) ಪಿಎಚ್‌ಡಿ ಪಡೆಯಲಿದ್ದಾರೆ ಎಂದರು ಹೇಳಿದರು.

203 ಚಿನ್ನದ ಪದಕ ಪ್ರದಾನ: ವಿವಿಧ ಪದವಿ(ಒಟ್ಟಾರೆ ಫ‌ಲಿ ತಾಂಶ) ಹಾಗೂ ಸ್ನಾತಕೋತ್ತರ ಪದವಿ(ವಿಷಯವಾರು ಫ‌ಲಿತಾಂಶ)ಗಳಲ್ಲಿ ಪ್ರಥಮ ರ್‍ಯಾಂಕ್‌ ಪಡೆದಿರುವ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಾಜ್ಯಪಾಲರು ಘಟಿಕೋತ್ಸವದಲ್ಲಿ ಒಟ್ಟು 203 ಚಿನ್ನದ ಪದಕ ಮತ್ತು 74 ನಗದು ಬಹುಮಾನ ನೀಡಲಿದ್ದಾರೆ. ಚಿನ್ನದ ಪದಕ ಪಡೆದವರಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ವಿದ್ಯಾರ್ಥಿನಿಯರು 145 ಚಿನ್ನದ ಪದಕ ಪಡೆದಿದ್ದರೆ, ವಿದ್ಯಾರ್ಥಿಗಳು 58 ಚಿನ್ನದ ಪದಕ ಪಡೆದಿದ್ದಾರೆ ಎಂದರು.

8 ಚಿನ್ನ ಪಡೆದ ಸೌಜನ್ಯಗೆ ಐಎಎಸ್‌ ಆಸೆ 
ಕೆ.ಆರ್‌.ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ.ಎ ಕನ್ನಡ ವಿಭಾಗದಲ್ಲಿ ಪ್ರಥಮ ರ್‍ಯಾಂಕ್‌ ಪಡೆದಿರುವ ವಿದ್ಯಾರ್ಥಿನಿ ಎಸ್‌.ಕೆ.ಸೌಜನ್ಯ ಒಟ್ಟು 8 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಇದರೊಂದಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಅತಿ ಹೆಚ್ಚು ಚಿನ್ನದ ಪದಕ ಪಡೆಯುತ್ತಿರುವ “ಚಿನ್ನದ ಹುಡುಗಿ’ ಎನಿಸಿಕೊಳ್ಳುತ್ತಿದ್ದಾರೆ. 

ಹೊಸಕೋಟೆ ತಾಲೂಕಿನ ಕೇಸತ್ಯವಾರ ದವರಾದ ಸೌಜನ್ಯ ಎಸ್ಸೆಸ್ಸೆಲ್ಸಿಯಲ್ಲೇ ತಂದೆ ಯನ್ನು ಕಳೆದುಕೊಂಡರೂ ತಾಯಿಯ ಶ್ರಮ ಹಾಗೂ ಪ್ರೋತ್ಸಾಹದಿಂದ ಉನ್ನತ ಶಿಕ್ಷಣದ ಮೆಟ್ಟಿಲೇರಿ ಉತ್ತಮ ಸಾಧನೆ ಮಾಡಿದ್ದಾರೆ. 8 ಚಿನ್ನದ ಪದಕ ಪಡೆಯುತ್ತಿರುವ ಸಾಧನೆ ಬಗ್ಗೆ “ಉದಯವಾಣಿ’ಯೊಂದಿಗೆ ಸಂತಸ ಹಂಚಿಕೊಂಡ ಅವರು, “ತುಂಬಾ ಖುಷಿಯಾಗುತ್ತಿದೆ. ಪಟ್ಟ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರೆತ್ತಿದೆ. ಇದೆಲ್ಲವೂ ನನ್ನ ತಾಯಿ ಸುನಂದಮ್ಮನ ಶ್ರಮ ಮತ್ತು ಸಹಕಾರದಿಂದ ಸಾಧ್ಯವಾದದ್ದು,” ಎಂದು ಹೇಳಿದರು. 

“ನಮ್ಮದು ಬಡ ಕುಟುಂಬ, ನಾನು ಎಸ್ಸೆಸ್ಸೆಲ್ಸಿ ಓದುತ್ತಿರುವಾಗಲೇ ತಂದೆಯನ್ನು ಕಳೆದುಕೊಂಡೆ. ನಂತರ ದಿನಗೂಲಿ ಮಾಡಿಕೊಂಡೇ ಸಂಸಾರ ನಿಬಾಯಿಸಿದ ತಾಯಿ ನನ್ನ ವಿದ್ಯಾಭ್ಯಾಸಕ್ಕೆ ಎಲ್ಲ ರೀತಿಯಲ್ಲೂ ನೆರವಾದರು. ಸರ್ಕಾರಿ ಶಾಲೆ, ಕಾಲೇಜುಗಳಲ್ಲೇ ಓದು ಮುಂದುವರಿಸಿದೆ. ಅಣ್ಣ ಗ್ರಾಮ ಪಂಚಾಯಿತಿ ಬಿಲ್‌ ಕಲೆಕ್ಟರ್‌ ಆಗಿದ್ದಾನೆ. ಮುಂದೆ ಪಿಎಚ್‌ಡಿ ಮಾಡುತ್ತೇನೆ. ಐಎಎಸ್‌ ಮಾಡುವುದು ನನ್ನ ಗುರಿ. ಬೋಧನಾ ಕ್ಷೇತ್ರ ನನ್ನ ಎರಡನೇ ಆಯ್ಕೆ,” ಎಂದು ಸೌಜನ್ಯ ಹೇಳಿದರು.

ಅದೇ ರೀತಿ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜಿನ ಸಿವಿಲ್‌ ಎಂಜಿನಿಯರಿಂಗ್‌ ವಿಭಾಗದ ಪ್ರಥಮ ರ್‍ಯಾಂಕ್‌ ವಿದ್ಯಾರ್ಥಿ ನಾಗರಾಜ 6 ಚಿನ್ನದ ಪದಕ ಪಡೆಯುವ ಮೂಲಕ 2ನೇ ಅತಿ ಹೆಚ್ಚು ಚಿನ್ನದ ಪದಕ ಪಡೆದ ವಿದ್ಯಾರ್ಥಿ ಎನಿಸಿದ್ದಾರೆ. ನಾಗರಾಜ್‌ 5 ವಿವಿಧ ನಗದು ಬಹುಮಾನಗಳನ್ನೂ ತಮ್ಮದಾಗಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.