Fine: ಲೇಡಿಸ್ ಸೀಟ್ನಲ್ಲಿ ಕುಳಿತು ಪ್ರಯಾಣಿಸಿದ ಪುರುಷರಿಗೆ ಬಿತ್ತು 43 ಸಾವಿರ ರೂ. ದಂಡ
Team Udayavani, Dec 13, 2023, 3:38 PM IST
ಬೆಂಗಳೂರು: ಬಿಎಂಟಿಸಿ ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಿರಿಸಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿದ 438 ಪುರುಷರ ಮೇಲೆ ತನಿಖಾ ತಂಡ ದಂಡ ಪ್ರಯೋಗ ಮಾಡಿದ್ದು, ಒಟ್ಟಾರೆ 43,800 ರೂ. ಅನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ. ಜತೆಗೆ ಬಿಎಂಟಿಸಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1,062 ಪ್ರಕರಣಗಳನ್ನು ದಾಖಲಿಸಿದೆ.
ಸಂಸ್ಥೆಯ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನವೆಂಬರ್ನಲ್ಲಿ ನಗರಾದ್ಯಂತ ಸಂಚರಿಸುವ ವಾಹನಗಳನ್ನು ತಪಾಸಣೆ ನಡೆಸಿರುವ ಬಿಎಂಟಿಸಿ ತನಿಖಾ ತಂಡ ಒಟ್ಟು 16,421 ಟ್ರಿಪ್ಗ್ಳನ್ನು ತಪಾಸಣೆ ನಡೆಸಿ 3,329 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿದೆ. ಹಾಗೆಯೇ ಅವರಿಂದ ಒಟ್ಟು 6,68,610 ರೂ. ಅನ್ನು ದಂಡದ ರೂಪದಲ್ಲಿ ವಸೂಲಿ ಮಾಡಿದೆ ಎಂದು ಬಿಎಂಟಿಸಿ ಸಾರ್ವಜನಿಕರ ಸಂಪರ್ಕ ವಿಭಾಗದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
898 ಸಾಮಾನ್ಯ ಪ್ರಕರಣಗಳು, 115 ಕೆಂಪು ಚುಕ್ಕೆ ಪ್ರಕರಣಗಳು, 35 ಗಂಭೀರ ಕೆಂಪುಚುಕ್ಕೆ ಪ್ರಕರಣಗಳು ಹಾಗೂ 14 ವಿಶೇಷ ಪ್ರಕರಣಗಳು ದಾಖಲಾಗಿವೆ. ಈ ಎಲ್ಲ ಪ್ರಕರಣಗಳಿಂದ 7,12,410 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !