ಸಂಕ್ರಾಂತಿ ಪ್ರಯುಕ್ತ 500 ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌


Team Udayavani, Jan 11, 2019, 12:45 AM IST

ksrtc-bus-aa.jpg

ಬೆಂಗಳೂರು: ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು 500 ಹೆಚ್ಚುವರಿ ಬಸ್‌ ಸೇವೆಗಳನ್ನು ಕಲ್ಪಿಸಿದೆ.

ಈ ಹೆಚ್ಚುವರಿ ಬಸ್‌ಗಳು ಜ. 11 ಮತ್ತು 12ರಂದು ನಗರದಿಂದ ರಾಜ್ಯ ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಹೊರಡುವ ಹಾಗೂ ಜ. 15ರಂದು ವಿವಿಧೆಡೆಯಿಂದ ನಗರಕ್ಕೆ ಬರುವ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಕಾರ್ಯಾಚರಣೆ ಮಾಡಲಿವೆ.

ಕೆಂಪೇಗೌಡ ಬಸ್‌ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್‌, ತಿರುಪತಿ ಮುಂತಾದ ಸ್ಥಳಗಳಿಗೆ ತೆರಳಲಿವೆ. ಅದೇ ರೀತಿ, ಮೈಸೂರು ರಸ್ತೆ ಬಸ್‌ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ ಮಾಡುತ್ತವೆ. ತಮಿಳುನಾಡು ಮತ್ತು ಆಂಧ್ರಪ್ರದೇಶ/ ತೆಲಂಗಾಣ ಕಡೆಗೆ ಹೋಗುವ ಪ್ರೀಮಿಯಂ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಕೇಂದ್ರ ಘಟಕ-4 ಮತ್ತು ಘಟಕ-2 ರ ಮುಂಭಾಗದಿಂದ ಹೊರಡಲಿವೆ.

ಪೀಣ್ಯ ಬಸವೇಶ್ವರ ಬಸ್‌ ನಿಲ್ದಾಣ, ಜಯನಗರ, ಜಯನಗರ 4ನೇ ಬ್ಲಾಕ್‌, ಜಾಲಹಳ್ಳಿ ಕ್ರಾಸ್‌, ನವರಂಗ್‌ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡ ರಸ್ತೆ, ಬನಶಂಕರಿ, ಜೀವನ್‌ ಭೀಮಾನಗರ, ಐಟಿಐ ಗೇಟ್‌, ಗಂಗಾನಗರ, ಕೆಂಗೇರಿ ಉಪನಗರ, ಮುಂತಾದ ಸ್ಥಳಗಳಿಂದ ಪ್ರಯಾಣಿಕರ ಒತ್ತಡಕ್ಕನುಗುಣವಾಗಿ ಶಿವಮೊಗ್ಗ, ದಾವಣಗೆರೆ, ತಿರುಪತಿ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಕುಕ್ಕೆಸುಬ್ರಮಣ್ಯ, ಧರ್ಮಸ್ಥಳ ಮುಂತಾದ ಮಾರ್ಗಗಳಿಗೆ ಹೆಚ್ಚುವರಿ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್‌ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾದ ಟಿಕೆಟ್‌ಗಳ ಮೇಲೆ ನಮೂದಿಸಲಾಗಿರುವ ಬಸ್‌ ನಿಲ್ದಾಣ/ಪಿಕ್‌ಅಪ್‌ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು. ಇ-ಟಿಕೆಟ್‌ ಬುಕಿಂಗ್‌ಗೆ ವೆಬ್‌ಸೈಟ್‌: www.ksrtc.in  ಮೂಲಕ ಪಡೆಯಬಹುದು. ಜತೆಗೆ 707 ಗಣಕೀಕೃತ ಬುಕಿಂಗ್‌ ಕೌಂಟರ್‌ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

ನಾಲ್ವರು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದಲ್ಲಿ ಶೇ. 5ರಷ್ಟು ರಿಯಾಯ್ತಿ ನೀಡಲಾಗುವುದು ಹಾಗೂ ಹೋಗಿಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ‌ ಪ್ರಯಾಣ ದರದಲ್ಲಿ ಶೇ. 10ರಷ್ಟು ರಿಯಾಯ್ತಿ ನೀಡಲಾಗುವುದು ಎಂದು ನಿಗಮದ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.