Fraud: ಧೋನಿ ಮ್ಯಾನೇಜರ್‌ಗೆ 6.33 ಲಕ್ಷ ರೂ. ವಂಚನೆ

Team Udayavani, Feb 4, 2024, 8:31 AM IST

Fraud: ಧೋನಿ ಮ್ಯಾನೇಜರ್‌ಗೆ 6.33 ಲಕ್ಷ ರೂ. ವಂಚನೆ

ಬೆಂಗಳೂರು: ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಆಪ್ತ ಸಹಾ ಯಕ ಎಂದು ಹೇಳಿಕೊಂಡು ಟೀಂ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಅವರ ಮ್ಯಾನೇಜರ್‌ ಸ್ವಾಮಿನಾಥನ್‌ ಶಂಕರ್‌ಗೆ 6.33 ಲಕ್ಷ ರೂ. ವಂಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ಈ ಸಂಬಂಧ ಎಂ.ಎಸ್‌.ಧೋನಿ ಅವರ ಮ್ಯಾನೇಜರ್‌ ಸ್ವಾಮಿನಾಥನ್‌ ಶಂಕರ್‌ ನೀಡಿದ ದೂರಿನ ಮೇರೆಗೆ ನಕಲಿ ಐಎಎಸ್‌ ಅಧಿಕಾರಿ ಎನ್‌.ಎಸ್‌.ನಕುಲ್‌, ಸಂದೀಪ್‌, ನಾಗೇಶ್ವರರಾವ್‌ ಎಂಬವರ ವಿರುದ್ಧ ಎಚ್‌ಎಸ್‌ಆರ್‌ ಲೇಔಟ್‌ ಠಾಣೆ ಪೊಲೀಸರು ಎಫ್ಐಆರ್‌ ದಾಖಲಿಸಿದ್ದಾರೆ.

ದೂರಿನಲ್ಲಿ ಏನಿದೆ?: 2023ರ ಅ.26ರಂದು ಸ್ವಾಮಿನಾಥನ್‌ ಶಂಕರ್‌ ಗೆ ಕರೆ ಮಾಡಿದ್ದ ಅಪರಿಚಿತ ವ್ಯಕ್ತಿ, “ತಾನು ಐಎಎಸ್‌ ಅಧಿಕಾರಿ ಎನ್‌. ಎಸ್‌.ನಕುಲ್‌, ಹಣ ಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ ಅವರ ಆಪ್ತ ಸಹಾಯಕ’ ಎಂದು ಪರಿಚಯಿಸಿಕೊಂಡಿದ್ದ. ಬಳಿಕ ನ್ಯಾಯಾಧೀಶ ಕೆ.ಸಿ.ಭಾನು ಅವರ ಮಗ ಸಂದೀಪ್‌, ಧೋನಿ ಅವರನ್ನು ಭೇಟಿ ಮಾಡಬೇಕು ಕೇಳಿದ್ದಾರೆ ಎಂದಿದ್ದಾನೆ. ಈ ಮನವಿ ಮೇರೆಗೆ 2023ರ ಅ.29ರಂದು ಸಂದೀಪ್‌ ಹಾಗೂ ಸಲ್ಮಾನ್‌ ಎಂಬವರು ಐಟಿಸಿ ಬೆಂಗಾಲ್‌ ಹೋಟೆಲ್‌ನಲ್ಲಿ ನನ್ನ ಮತ್ತು ಧೋನಿಯವರನ್ನು ಭೇಟಿಯಾಗಿದ್ದರು.

ಈ ಸಂದರ್ಭದಲ್ಲಿ ಆಂಧ್ರ ಪ್ರದೇಶದಲ್ಲಿರುವ ತಿರುಪತಿಗೆ ವಿಶೇಷ ದರ್ಶನ ಕೊಡಿಸುತ್ತೇವೆ. ಯಾವಾಗ ಬೇಕಾದರೂ ಕರೆ ಮಾಡಬಹುದು ಎಂದು ಸಂದೀಪ್‌ ಹೇಳಿದ್ದ. ಈ ಬೆನ್ನಲ್ಲೇ ನ.23ರಂದು ಕರೆ ಮಾಡಿದ ಸಂದೀಪ್‌, 12 ಮಂದಿಗೆ ತಿರುಪತಿಯಲ್ಲಿ ವಿಶೇಷ ದರ್ಶನದ ಪಾಸ್‌ ನೀಡಲಾಗುವುದು ಎಂದಿದ್ದಾನೆ. ಆದರೆ, “ನಾನು ದುಬೈನಲ್ಲಿ ಇದ್ದೇನೆ. ಬೇರೆಯವರಿಗೆ ಪಾಸ್‌ ಕೊಡಿ’ ಎಂದಾಗ, ಆರೋಪಿ ಸಂದೀಪ್‌, “ನೀವೇ ಯಾರಿಗಾದರೂ ಪ್ರೋಟೋ ಕಾಲ್‌ ಲೆಟರ್‌ ನೀಡಿ’ ಎಂದು ಹೇಳಿದ್ದ.

ಸೂಚಿಸಿದ ಬ್ಯಾಂಕ್‌ ಖಾತೆಗೆ ಹಣ ವರ್ಗಾವಣೆ: ಹೀಗಾಗಿ “ನಾನು ಕೂಡ್ಲುಗೇಟ್‌ನಲ್ಲಿ ಶಾಲೆ ನಡೆಸುತ್ತಿದ್ದ ಸ್ನೇಹಿತ ವಿನೀತ್‌ ಚಂದ್ರಶೇಖರ್‌ಗೆ ಕೊಡಿ ಎಂದು ಶಿಫಾರಸು ಮಾಡಿದ್ದೆ. ಈ ನಡುವೆ ಡಿ.20ರಂದು ನಾಗೇಶ್ವರರಾವ್‌ ಎಂಬಾತ ಕರೆ ಮಾಡಿ, ತಾನು ಕೇಂದ್ರ ಸಚಿವೆ ನಿರ್ಮಲಾ ಸೀತಾ ರಾಮ್‌ ಅವರ ಪಿಎ, ಡೋನೆಷನ್‌ ಮಾಡಲು ಇಷ್ಟವಿದ್ದಲ್ಲಿ ಸಾಯಿ ಕ್ರಿಯೇಷನ್‌ನ ಬ್ಯಾಂಕ್‌ ಖಾತೆಗೆ ಹಣ ಹಾಕಿ ಎಂದು ಕೇಳಿದ್ದರು. ಈ ಸಂಬಂಧ ವಿನೀತ್‌ ಚಂದ್ರಶೇಖರ್‌ಗೆ ಕರೆ ಮಾಡಿ ಹಣ ಹಾಕುವಂತೆ ತಿಳಿಸಿದ್ದೆ. ಅವರು ಆರೋಪಿಗಳು ಸೂಚಿಸಿದ ಬ್ಯಾಂಕ್‌ ಖಾತೆಗೆ 3.33 ಲಕ್ಷ ರೂ. ವರ್ಗಾವಣೆ ಮಾಡಿದ್ದಾರೆ. ಆ ನಂತರ ತಿರುಪತಿಯ ವಿಶೇಷ ದರ್ಶನ, ರೂಮ್‌ ಹಾಗೂ ಇತರೆ ಖರ್ಚುಗಳೆಂದು ಮೂರು ಲಕ್ಷ ರೂ. ಅನ್ನು ಗೂಗಲ್‌ ಪೇ ಮೂಲಕ ಪಡೆದುಕೊಂಡಿದ್ದಾರೆ.

ಈ ನಂತರ ಯಾವುದೇ ದರ್ಶನಕ್ಕೆ ಅವಕಾಶ ನೀಡಿಲ್ಲ. ಅದನ್ನು ಪ್ರಶ್ನಿಸಿ ಹಣ ವಾಪಸ್‌ ನೀಡುವಂತೆ ಕೇಳಿದರೂ, ಇದುವರೆಗೂ ಹಣ ವಾಪಸ್‌ ನೀಡಿಲ್ಲ. ಹೀಗಾಗಿ ಆನ್‌ಲೈನ್‌ ಮೂಲಕ ಸುಳ್ಳು ಆಮಿಷವೊಡ್ಡಿ 6.33 ಲಕ್ಷ ರೂ. ಪಡೆದುಕೊಂಡು ವಂಚಿಸಿದ ಮೂವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಎಂದು ಸ್ವಾಮಿನಾಥನ್‌ ಶಂಕರ್‌ ದೂರಿನಲ್ಲಿ ಕೋರಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.